ಇನ್ನೂ 6-7 ತಿಂಗಳು ಕೋವಿಡ್ ಬಾಧಿಸಲಿದೆ : ಸಚಿವ ಆರ್‌.ಅಶೋಕ್

Team Udayavani, Jul 16, 2020, 10:06 PM IST

ಇನ್ನೂ 6-7 ತಿಂಗಳು ಕೋವಿಡ್ ಬಾಧಿಸಲಿದೆ

ಬೆಂಗಳೂರು: ತಜ್ಞ ವರದಿ ಪ್ರಕಾರ ಕೋವಿಡ್ ಸೋಂಕು ಇನ್ನೂ 6- 7 ತಿಂಗಳು ತೀವ್ರವಾಗಿ ಬಾಧಿಸಲಿದ್ದು, ಸೂಕ್ತ ವ್ಯವಸ್ಥೆಗಳ ಮೂಲಕ ಸಹಜ ಸ್ಥಿತಿಗೆ ತರಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಸಚಿವ ಆರ್‌.ಅಶೋಕ್‌ ಹೇಳಿದರು.

ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಬಿಬಿಎಂಪಿ ದಕ್ಷಿಣ ವಲಯದಲ್ಲಿ ನಾನಾ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಪ್ರಮುಖರೊಂದಿಗೆ ಗುರುವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌- 19 ಸೋಂಕಿತರ ಚಿಕಿತ್ಸೆಗೆ ಸಂಬಂಧಪಟ್ಟಂತೆ ಕೆಲವೆಡೆ ಕರ್ತವ್ಯಕ್ಕೆ ದಾದಿಯರು ಗೈರಾಗುತ್ತಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಈ ಬಗ್ಗೆ ಉಪ ಪೊಲೀಸ್‌ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ಕರ್ತವ್ಯಕ್ಕೆ ಗೈರಾದವರನ್ನು ಟ್ರ್ಯಾಕ್‌ ಮಾಡಲಾಗುವುದು ಎಂದು ಹೇಳಿದರು.

ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಒಂದು ವಾರ ಕಾರ್ಯ ನಿರ್ವಹಿಸಿದರೆ ಒಂದು ವಾರ ಕ್ವಾರೆಂಟೈನ್‌ನಲ್ಲಿ ಇರಬೇಕಾಗುತ್ತದೆ. ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವವರು ಮನೆಗೆ ಹೋಗಲು ಸಾಧ್ಯವಾಗದು. ಹಾಗಾಗಿ ಅವರಿಗೆ ಆಸ್ಪತ್ರೆಗಳ ಬಳಿಯ ಹೋಟೆಲ್‌ಗ‌ಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸರ್ಕಾರದಿಂದಲೇ ಹೋಟೆಲ್‌ಗ‌ಳಲ್ಲಿ ರಿಯಾಯ್ತಿ ದರದಲ್ಲಿ ಉಳಿಯುವ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು, ದಾದಿಯರು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ. ಒಂದೊಮ್ಮೆ ಚಿಕಿತ್ಸೆ ನೀಡದಿದ್ದರೆ ಅಂತಹ ವೈದ್ಯರು, ದಾದಿಯರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸುವ ಕಠಿಣ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಯವರು ಕೋವಿಡ್‌ ಸೋಂಕಿತರಿಗೆ ಬಿ.ಯು. ಸಂಖ್ಯೆ (ಬೆಂಗಳೂರು ನಗರ ಕೋವಿಡ್ ಸೋಂಕಿತರ ಸಂಖ್ಯೆ) ತೆಗೆದುಕೊಂಡು ಬರುವಂತೆ ಸೂಚಿಸುವಂತಿಲ್ಲ. ರೋಗಿ ಬಂದ ಕೂಡಲೇ ಆಸ್ಪತ್ರೆಗೆ ದಾಖಲಿಸಿಕೊಂಡು ನಂತರ ಪಾಲಿಕೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಬಿಬಿಎಂಪಿ ದಕ್ಷಿಣ ವಲಯದ ಪ್ರಮುಖರ ಸಭೆ ನಡೆಸಲಾಗಿದ್ದು, ಸೋಮವಾರ ವಲಯ ವ್ಯಾಪ್ತಿಯ ಪಾಲಿಕೆ ಸದಸ್ಯರ ಸಭೆ ಕರೆಲಾಗುವುದು ಎಂದು ಆರ್‌.ಅಶೋಕ್‌ ಹೇಳಿದರು. ದಕ್ಷಿಣ ವಲಯದ ಪ್ರಮುಖರ ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ತೇಜಸ್ವಿ ಸೂರ್ಯ, ಶಾಸಕಿ ಸೌಮ್ಯಾರೆಡ್ಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.