ಚಾ.ನಗರ ಲೋಕಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಧ್ರುವನಾರಾಯಣ


Team Udayavani, Mar 11, 2023, 11:49 AM IST

7-dhruva-narayana

ಚಾಮರಾಜನಗರ: ದೇಶಕ್ಕೆ ಒಂದು ಮತದ ಮಹತ್ವ ತಿಳಿಸಿಕೊಟ್ಟ ಮಾಜಿ ಸಂಸದ, ಮಾಜಿ ಶಾಸಕ ಆರ್. ಧ್ರುವನಾರಾಯಣ, ಎರಡು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿ ತಮ್ಮ ಅಭಿವೃದ್ಧಿ ಕೆಲಸಗಳಿಂದ ಎಲ್ಲರ ಗಮನ ಸೆಳೆದವರು.

ತಾಲೂಕಿನ ಹೆಗ್ಗವಾಡಿ (ಬೆಂಡರವಾಡಿ ಸಮೀಪ) ಗ್ರಾಮದವರಾದ ಆರ್.ಧ್ರುವನಾರಾಯಣ, 1961ರ ಜುಲೈ 31ರಂದು ಜನಿಸಿದರು.  ಕೃಷಿ ಸ್ನಾತಕೋತ್ತರ ಪದವೀಧರರು.

ಬೆಂಗಳೂರಿನಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದರು. ಬಳಿಕ ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾದರು. ಬೆಂಗಳೂರು ಕೃಷಿ ವಿವಿ ಸಿಂಡಿಕೇಟ್ ಸದಸ್ಯರಾಗಿ, ಕಾವೇರಿ ಗ್ರಾಮೀಣ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರಾಗಿದ್ದರು.

ಧ್ರುವನಾರಾಯಣ, ಕೇಂದ್ರದ ಮಾಜಿ ಸಚಿವ ಎಂ.ರಾಜಶೇಖರಮೂರ್ತಿಯವರ ಶಿಷ್ಯರಾಗಿದ್ದರು. ಮೈಸೂರು ಚಾಮರಾಜನಗರ ಜಿಲ್ಲೆಯ ರಾಜಕಾರಣಕ್ಕೆ ಧ್ರುವ ಪ್ರವೇಶ ಮಾಡಲು ರಾಜಶೇಖರಮೂರ್ತಿ ಆಸರೆಯಾಗಿದ್ದರು.

ರಾಜಶೇಖರಮೂರ್ತಿಯವರು ರಾಜ್ಯ ಸಭಾ ಸದಸ್ಯರಾಗಿದ್ದಾಗ ಜಿಲ್ಲೆಯಲ್ಲಿ ಸಮುದಾಯ ಭವನಗಳ ಭೂಮಿಪೂಜೆ, ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಧ್ರುವನಾರಾಯಣ ಅವರ ನೇತೃತ್ವ ಇರುತ್ತಿತ್ತು.  ರಾಜಶೇಖರಮೂರ್ತಿಯವರು ಬಿಜೆಪಿಗೆ ಹೋದಾಗ ಧ್ರುವ ಸಹ 1999ರ ಚುನಾವಣೆಗೂ ಮೊದಲು ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ್ದರು.

1999ರಲ್ಲಿ ಧ್ರುವನಾರಾಯಣ ಚುನಾವಣಾ ರಾಜಕೀಯಕ್ಕೆ ಬಂದರು. ಸಂತೆಮರಹಳ್ಳಿ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಅವರು ಮೊದಲ ಚುನಾವಣೆಯಲ್ಲಿ ಪರಾಭವಗೊಂಡರು.  ಅದಾದ ಬಳಿಕ ಮತ್ತೆ ತಮ್ಮ ತವರು ಪಕ್ಷ ಕಾಂಗ್ರೆಸ್ ಗೆ ಮರಳಿದರು. 2004ರ ಚುನಾವಣೆಯಲ್ಲಿ  ಸಂತೆಮರಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎ.ಆರ್.ಕೃಷ್ಣಮೂರ್ತಿ ಅವರ ವಿರುದ್ಧ ಕೇವಲ ಒಂದು ಮತದಿಂದ ಜಯಗಳಿಸಿದರು.

2008ರ ವಿಧಾನಸಭಾ ಚುನಾವಣೆ ವೇಳೆಗೆ ಸಂತೆಮರಹಳ್ಳಿ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ರದ್ದಾಯಿತು. ಕೊಳ್ಳೇಗಾಲ ಕ್ಷೇತ್ರಕ್ಕೆ ಸೇರಿತು. ಕೊಳ್ಳೇಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಧ್ರುವ ಸತತ ಎರಡನೇ ಬಾರಿಯೂ ಆರಿಸಿಬಮದರು.

2009ರಲ್ಲಿ ನಡೆದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ವರಿಷ್ಠರು ಚಾಮರಾಜನಗರ ಕ್ಷೇತ್ರದಿಂದ ಧ್ರುವನಾರಾಯಣರನ್ನು ಕಣಕ್ಕಿಳಿಸಿದರು. ಈ ಚುನಾವಣೆಯಲ್ಲಿ 4001 ಮತಗಳಿಂದ ಗೆದ್ದ ಅವರು 15ನೇ ಲೋಕಸಭೆ ಪ್ರವೇಶಿಸಿದರು. 2014 ರ ಲೋಕಸಭಾ ಚುನಾವಣೆಯಲ್ಲೂ ಪುನರಾಯ್ಕೆಯಾದರು.

ಬಳಿಕ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀನಿವಾಸಪ್ರಸಾದ್ ಅವರಿಂದ ಪರಾಭವಗೊಂಡರು.  ಬಳಿಕ ಕಾಂಗ್ರೆಸ್ ಪಕ್ಷ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಮಾಡಿತು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕೀಯ ಪ್ರವೇಶ ಮಾಡುವ ಆಶಯ ಅವರದಾಗಿತ್ತು. ನಂಜನಗೂಡು ಕ್ಷೇತ್ರದಿಂದ ಕಣಕ್ಕಿಳಿಯಲು ತಯಾರಿ ಮಾಡಿಕೊಂಡಿದ್ದರು. ನಂಜನಗೂಡು ಕ್ಷೇತ್ರಾದ್ಯಂತ ಪ್ರವಾಸ ಕೈಗೊಂಡಿದ್ದರು.

ಅಭಿವೃದ್ಧಿ ಕೆಲಸಗಳ ಹರಿಕಾರ: ಸಂತೆಮರಹಳ್ಳಿ ಹಾಗೂ ಕೊಳ್ಳೇಗಾಲ ಶಾಸಕರಾಗಿದ್ದಾಗ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿ ಹೆಸರು ಗಳಿಸಿದರು. ಬಳಿಕ ಎರಡು ಬಾರಿ ಲೋಕಸಭಾ ಸದಸ್ಯರಾಗಿ ಅವರು ಕೈಗೊಂಡ ಅಭಿವೃದ್ಧಿ ಕೆಲಸಗಳಿಂದ ಅವರು ಕ್ಷೇತ್ರದಲ್ಲಿ ಮಾತ್ರವಲ್ಲದೇ ರಾಜ್ಯಾದ್ಯಂತ ಹೆಸರಾದರು. ಕೇಂದ್ರ ಸರ್ಕಾರದಿಂದ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ ರಾಜ್ಯದ ನಂ. 1 ಸಂಸದ ಎಂಬ ಹೆಸರು ಗಳಿಸಿದ್ದರು.

ಅವರ ಅವಧಿಯಲ್ಲಿ ಜಿಲ್ಲೆಗೆ 212 ಹಾಗೂ 150 ಎ ರಾಷ್ಟ್ರೀಯ ಹೆದ್ದಾರಿಗಳಾದವು. 212 ರಾಷ್ಟ್ರೀಯ ಹೆದ್ದಾರಿಯಿಂದಾಗಿ ಕೊಳ್ಳೇಗಾಲ, ಯಳಂದೂರು, ಚಾಮರಾಜನಗರಕ್ಕೆ ಉತ್ತಮ ಗುಣಮಟ್ಟದ ರಸ್ತೆಗಳಾದವು. ತಮ್ಮೆಲ್ಲಾ ಭಾಷಣಗಳಲ್ಲೂ ಎಲ್ಲ ಸಮುದಾಯದವರೂ ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡುತ್ತಿದ್ದ ಅವರು, ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ, ಹೋಬಳಿಗೊಂದು ಮೊರಾರ್ಜಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು, ಕೃಷಿ ವಿಜ್ಞಾನ ಕೇಂದ್ರ, ಕಾನೂನು ಕಾಲೇಜುಗಳನ್ನು ತರಲು ಶ್ರಮಿಸಿದರು. ಒಬ್ಬ ಸಂಸದರು ಇಷ್ಟೊಂದು ಕೆಲಸಗಳನ್ನು ಮಾಡಬಹುದು ಎಂದು ತೋರಿಸಿಕೊಟ್ಟರು.

ಅವರ ಕೆಲಸಗಳನ್ನು ಅವರ ಪಕ್ಷದವರಿರಲಿ, ವಿರೋಧ ಪಕ್ಷದವರೂ ಮೆಚ್ಚುತ್ತಿದ್ದರು. ಪಕ್ಷಭೇದವಿಲ್ಲದೇ, ಜನರು ಅವರ ಬಳಿ ಹೋದಾಗ ಸಾಧ್ಯವಾದಷ್ಟೂ ಆ ಕೆಲಸಗಳನ್ನು ಮಾಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದರು. ಯಾರ ಬಗ್ಗೆಯೂ ಕಟು ಟೀಕೆಯ ಮಾತುಗಳನ್ನಾಡದೇ, ಅಜಾತಶತ್ರು ಎನ್ನುವಂತಿದ್ದರು.

 

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.