Railway: ಕನ್ನಡದಲ್ಲಿ ಸಹಾಯಕ ಲೋಕೋ ಪೈಲಟ್ ಹುದ್ದೆ ಮುಂಭಡ್ತಿ ಪರೀಕ್ಷೆ: ನೈಋತ್ಯ ರೈಲ್ವೇ
Team Udayavani, Aug 8, 2024, 6:10 AM IST
ಬೆಂಗಳೂರು: ಸಹಾಯಕ ಲೋಕೋ ಪೈಲಟ್ ಹುದ್ದೆ ಮುಂಭಡ್ತಿ ಪರೀಕ್ಷೆ ಕನ್ನಡದಲ್ಲಿ ನಡೆಸಲು ನೈಋತ್ಯ ರೈಲ್ವೇ ಕ್ರಮ ಕೈಗೊಂಡಿದ್ದು, ಇದರಿಂದ ರೈಲ್ವೆಯಲ್ಲಿ ಕಾರ್ಯನಿರ್ವಹಿಸುವ ಕನ್ನಡಿಗ ಸಿಬಂದಿಗೆ ಸಹಾಯಕವಾಗಲಿದೆ.
ನೈಋತ್ಯ ರೈಲ್ವೇ ವಲಯವು ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಮುಂಭಡ್ತಿ ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಲು ಕ್ರಮ ಕೈಗೊಂಡಿದ್ದು, ಈ ಸಂಬಂಧ ನೈಋತ್ಯ ರೈಲ್ವೇ ಕೇಂದ್ರ ಕಚೇರಿಯಿಂದ ಬೆಂಗಳೂರು, ಮೈಸೂರು, ಹುಬ್ಬಳ್ಳಿ ವಿಭಾಗೀಯ ಅಧಿಕಾರಿಗಳಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಸದ್ಯದಲ್ಲಿಯೇ ದಿನಾಂಕವನ್ನು ಮರು-ನಿಗದಿಪಡಿಸಿ ಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು ಎಂದು ಕೇಂದ್ರ ರೈಲ್ವೇ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವರ ಕಾರ್ಯಾಲಯ ಪ್ರಕಟನೆಯಲ್ಲಿ ತಿಳಿಸಿದೆ.
ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ಬರೆಯಲು ಅವಕಾಶ ನೀಡಲಾಗಿತ್ತು. ಇಲಾಖೆಯ ಈ ಕ್ರಮದಿಂದ ನೈಋತ್ಯ ರೈಲ್ವೇ ವಲಯದಲ್ಲಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಕನ್ನಡಿಗ ಅಭ್ಯರ್ಥಿಗಳಿಗೆ ಅನಾನುಕೂಲವಾಗುತ್ತಿದೆ ಎಂಬ ವಿಷಯ ರೈಲ್ವೇ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗಮನಕ್ಕೆ ಬಂದಿತ್ತು. ಕೂಡಲೇ ಅವರು ಕಾರ್ಯಪ್ರವೃತ್ತರಾಗಿ ನೈಋತ್ಯ ರೈಲ್ವೇ ಮಹಾಪ್ರಬಂಧಕರಿಗೆ ಕನ್ನಡದಲ್ಲಿಯೂ ಪರೀಕ್ಷೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.