![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 7, 2024, 1:14 AM IST
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತುಸು ಬಿಡುವು ನೀಡಿದ್ದು, ಸೆ.7ರಿಂದ 10ರ ವರೆಗೆ “ಎಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಶುಕ್ರವಾರ ಮಳೆಯಾಗಿದೆ.
ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 28.8 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.7 ಡಿ.ಸೆ. ಕಡಿಮೆ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ.ಸೆ. ಏರಿಕೆ ಕಂಡಿತ್ತು.
ಉಡುಪಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಣ್ಣದಾಗಿ ಮಳೆ ಸುರಿದಿದೆ. ಉಡುಪಿ, ಕಾಪು, ಹೆಬ್ರಿ, ಕುಂದಾಪುರ, ಕಾರ್ಕಳ, ಬ್ರಹ್ಮಾವರ, ಬೈಂದೂರು ಭಾಗದಲ್ಲಿ ಬೆಳಗ್ಗೆ ಹಾಗೂ ಸಂಜೆ ಸ್ವಲ್ಪ ಹೊತ್ತು ಬಿಟ್ಟುಬಿಟ್ಟು ಮಳೆ ಸುರಿದಿದೆ.
You seem to have an Ad Blocker on.
To continue reading, please turn it off or whitelist Udayavani.