Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
Team Udayavani, Nov 5, 2024, 1:03 AM IST
ಸುಬ್ರಹ್ಮಣ್ಯ/ಸುಳ್ಯ: ಸುಳ್ಯ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಸೋಮವಾರ ಅಪರಾಹ್ನ ಉತ್ತಮ ಮಳೆಯಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಕುಮಾರಪರ್ವತ ತಪ್ಪಲು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಪರಿಸದಲ್ಲಿ ಸಂಜೆ ಒಂದೂವರೆ ತಾಸು ಮಳೆಯಾಗಿದ್ದು, ದರ್ಪಣ ತೀರ್ಥ ನದಿಯಲ್ಲಿ ಭಾರೀ ನೀರು ಹರಿದು ಬಂತು. ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಳಿನೆಲೆ, ಹರಿಹರ ಪಲ್ಲತ್ತಡ್ಕ, ಬಳ್ಪ, ಎಡಮಂಗಲ, ಸುಳ್ಯದಲ್ಲೂ ಸೋಮವಾರ ಸಂಜೆ ಮಳೆಯಾಗಿದೆ.
ಸುಳ್ಯ ತಾಲೂಕಿನ ಮರ್ಕಂಜದ ಕೊರ್ಟಡ್ಕದಲ್ಲಿ ರಸ್ತೆಗೆ ಮರ ಬಿದ್ದು ಭಾರೀ ಅನಾಹುತ ತಪ್ಪಿದ ಘಟನೆ ಸಂಭವಿಸಿದೆ. ಕೆಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಬೆಳ್ತಂಗಡಿಯಲ್ಲಿ ಮಳೆ
ಬೆಳ್ತಂಗಡಿ: ತಾಲೂಕಿನಲ್ಲಿ ಸಂಜೆ ಉತ್ತಮ ಮಳೆಯಾಗಿದ್ದು, ಉಜಿರೆಯಿಂದ ಗುರುವಾಯನಕೆರೆ ಸಹಿತ ಮಡಂತ್ಯಾರು ವರೆಗೆ ವಾಹನ ದಟ್ಟಣೆ ಉಂಟಾಯಿತು.
ಬೆಳಗ್ಗೆ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ರಸ್ತೆ ಅಂಚಿನಲ್ಲೇ ಸಂತೆ ಮಾರಾಟ ನಡೆಸುವುದರಿಂದ ವಾಹನ ದಟ್ಟಣೆ ಉಂಟಾಗುತ್ತಿತ್ತು. ಬಳಿಕ ವಾಹನವೊಂದು ಕೆಟ್ಟು ನಿಂತ ಪರಿಣಾಮ ಮಧ್ಯಾಹ್ನ ತಾಸುಗಟ್ಟಲೆ ಟ್ರಾಫಿಕ್ ಸಮಸ್ಯೆ ಉಂಟಾಯಿತು.
ದ.ಕ. ಜಿಲ್ಲಾದ್ಯಂತ ಉತ್ತಮ ಮಳೆ
ಮಂಗಳೂರು: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಸೋಮವಾರವೂ ಮಳೆ ಮುಂದುವರಿದಿದ್ದು, ಸಂಜೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಸೋಮವಾರ 31.3 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.3 ಡಿ.ಸೆ. ಇಳಿಕೆ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.2 ಡಿ.ಸೆ. ಏರಿಕೆ ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.