ರಾಮನಗರ ಜಿಲ್ಲೆಯಲ್ಲಿ ಮಳೆ ಹಾವಳಿ: ಉಸ್ತುವಾರಿ ಸಚಿವರ ಭೇಟಿ, ತಕ್ಷಣ ಕ್ರಮಕ್ಕೆ ಆದೇಶ

ಕೆರೆಗಳು ಕೋಡಿ ಬಿದ್ದು ಸಾವಿರಾರು ಎಕರೆ ಜಮೀನಿಗೆ ನುಗ್ಗಿ, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

Team Udayavani, Aug 29, 2022, 2:35 PM IST

ರಾಮನಗರ ಜಿಲ್ಲೆಯಲ್ಲಿ ಮಳೆ ಹಾವಳಿ: ಉಸ್ತುವಾರಿ ಸಚಿವರ ಭೇಟಿ, ತಕ್ಷಣ ಕ್ರಮಕ್ಕೆ ಆದೇಶ

ಬೆಂಗಳೂರು: ಸತತ ಮಳೆಯಿಂದ ನಲುಗಿರುವ ರಾಮನಗರ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಸೋಮವಾರ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಆಗಿರುವ ನಷ್ಟದ ಮಾಹಿತಿ ಪಡೆದುಕೊಂಡರು.

ಏತನ್ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಮಾತನಾಡಿ, “ರಾಮನಗರ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಅಪಾರ ಹಾನಿಯಾಗಿದೆ. ಸಂತ್ರಸ್ತರಿಗೆ ತಕ್ಷಣವೇ ಗಂಜಿಕೇಂದ್ರ, ಸುರಕ್ಷಿತ ಸ್ಥಳಾಂತರ, ದವಸ ಧಾನ್ಯ ವಿತರಣೆ ಮತ್ತು ಮನೆಗಳಿಂದ ನೀರು ತೆರವಿಗೆ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ‘ಜಿಲ್ಲೆಯಲ್ಲಿ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿಯವರ ಜತೆ ಬೆಳಿಗ್ಗೆ ಚರ್ಚಿಸಿದ್ದೆ. ಜತೆಗೆ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದು ತತ್‍ಕ್ಷಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕ್ಷಿಪ್ರವಾಗಿ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಆದೇಶಿಸಿದ್ದೇನೆ’ ಎಂದಿದ್ದಾರೆ.

ಜಿಲ್ಲೆಯ ಹಲವು ಕೆರೆಗಳು ಕೋಡಿ ಬಿದ್ದು ಬೆಂಗಳೂರು ಮೈಸೂರು ಹೆದ್ದಾರಿಯ ಮೇಲೆ ನೀರು ನುಗ್ಗಿ, ಅಸ್ತವ್ಯಸ್ತವಾಗಿದೆ. ಆದ್ದರಿಂದ ಎರಡೂ ನಗರಗಳ ನಡುವೆ ಪಯಣ ಮಾಡುವವರು ಪರ್ಯಾಯ ಮಾರ್ಗಗಳನ್ನು ಆಶ್ರಯಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕೆರೆಗಳು ಕೋಡಿ ಬಿದ್ದು ಸಾವಿರಾರು ಎಕರೆ ಜಮೀನಿಗೆ ನುಗ್ಗಿ, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಬೆಳೆ ನಷ್ಟದ ಅಂದಾಜು ಮಾಡಲು ಕೃಷಿ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡಲು ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ರಾಮನಗರದಲ್ಲಿ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಇಂಥವರಿಗೂ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಮೊದಲಿಗೆ ನೀರು ತೆರವುಗೊಳಿಸಲು ಆದ್ಯತೆ ಕೊಡಲಾಗಿದೆ. ಇದರ ಜತೆಗೆ ಮಳೆ ನೀರಿನ ಹರಿವನ್ನು ಬೇರೆಡೆಗೆ ಹೊರಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.