ಉಡುಪಿ ವಿವಿಧೆಡೆಗಳಲ್ಲಿ ಉತ್ತಮ ಮಳೆ
Team Udayavani, Apr 7, 2020, 3:37 PM IST
ಉಡುಪಿ: ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದ ಉತ್ತಮ ಮಳೆಯಾಗಿದೆ. ಕಾರ್ಕಳ, ಕುಂದಾಪುರ, ಕೊಲ್ಲೂರು, ಸಿದ್ದಾಪುರ, ಗಂಗೊಳ್ಳಿ , ಹೆಮ್ಮಾಡಿ , ಉಪ್ಪುಂದ , ಶಿರೂರು, ಹೆಬ್ರಿ , ಕಮಲಶಿಲೆ ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ. ಉಳಿದಂತೆ ಜಿಲ್ಲೆಯ ಹೆಚ್ಚಿನ ಕಡೆ ಮೋಡ ಕವಿದ ವಾತಾವರಣ ಇತ್ತು.
ಉತ್ತಮ ಬೇಸಗೆ ಮಳೆ ನಿರೀಕ್ಷೆ
ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ವೇಳೆ (ಮಾರ್ಚ್ನಿಂದ ಮೇ ಅಂತ್ಯದವರೆಗೆ) 171 ಮಿ.ಮೀ. ವಾಡಿಕೆ ಮಳೆಯಾಗಬೇಕು. ಐದು ವರ್ಷಗಳಲ್ಲಿ ಕಳೆದ ವರ್ಷ ಅತೀ ಕಡಿಮೆ ಮಳೆಯಾಗಿತ್ತು. 2015ರಲ್ಲಿ ಶೇ. 22ರಷ್ಟು ಹೆಚ್ಚಳ, 2016ರಲ್ಲಿ ಶೇ. 42, 2017ರಲ್ಲಿ ಶೇ. 13, 2018ರಲ್ಲಿ ಶೇ. 82ರಷ್ಟು ಹೆಚ್ಚಳ, 2019ರಲ್ಲಿ ಶೇ. 74ರಷ್ಟು ಮಳೆ ಕಡಿಮೆಯಾಗಿತ್ತು. ಈ ಬಾರಿ ಬೇಸಗೆ ಮಳೆ ಈಗಾಗಲೇ ಆರಂಭವಾಗಿದ್ದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹವಾಮಾನ ತಜ್ಞರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.