ಕರಾವಳಿ-ಮಲೆನಾಡು ಸಹಿತ 12 ಜಿಲ್ಲೆಗಳಲ್ಲಿ ಮಳೆ ಕೊರತೆ

ದಕ್ಷಿಣ ಕನ್ನಡ-ಶೇ. 25, ಉಡುಪಿ-ಶೇ. 4 ಕಡಿಮೆ

Team Udayavani, Jul 9, 2020, 6:39 AM IST

ಕರಾವಳಿ-ಮಲೆನಾಡು ಸಹಿತ 12 ಜಿಲ್ಲೆಗಳಲ್ಲಿ ಮಳೆ ಕೊರತೆ

ಮಂಗಳೂರು: ರಾಜ್ಯಕ್ಕೆ ಮುಂಗಾರು ಕಾಲಿಟ್ಟು ಒಂದು ತಿಂಗಳು ಕಳೆಯುತ್ತಿದ್ದು, ಇನ್ನೂ ಬಹುತೇಕ ಕಡೆಗಳಲ್ಲಿ ಮಳೆಗಾಲ ಚುರುಕುಗೊಂಡಿಲ್ಲ. ಇದೇ ಕಾರಣಕ್ಕೆ ರಾಜ್ಯದ 12 ಜಿಲ್ಲೆಗಳಲ್ಲಿ ಸದ್ಯದ ಮಟ್ಟಿಗೆ ಮಳೆ ಕೊರತೆ ಪರಿಸ್ಥಿತಿ ಇದೆ.

ರಾಜ್ಯದ ಕೆಲವು ಭಾಗಗಳಲ್ಲಿ ಮಾತ್ರ ಯಥೇತ್ಛವಾಗಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಸದ್ಯ ಮಳೆ ಬಿರುಸುಗೊಂಡಿದ್ದರೂ ಈ ಹಿಂದೆ ಕ್ಷೀಣಿಸಿತ್ತು. ಒಟ್ಟಾರೆ ಒಂದು ತಿಂಗಳಿನಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಿತ್ತು. ಮಳೆಗಾಲ ಋತುವಿನಲ್ಲಿ ರಾಜ್ಯದಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಯಥೇತ್ಛವಾಗಿ ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಕೊರತೆ ಎದುರಾಗಿದೆ. ಜೂ. 1ರಿಂದ ಜು. 7ರ ವರೆಗಿನ ಅಂಕಿ ಅಂಶದಂತೆ ರಾಜ್ಯದಲ್ಲಿ ಅತೀ ಹೆಚ್ಚು ಎಂಬಂತೆ ಚಿಕ್ಕಬಳ್ಳಾಪುರದಲ್ಲಿ ಶೇ. 99ರಷ್ಟು ಮಳೆ ಹೆಚ್ಚಳವಾದರೆ, ಚಿಕ್ಕಮಗಳೂರಿನಲ್ಲಿ ಶೇ. 35ರಷ್ಟು ಮಳೆ ಪ್ರಮಾಣ ಕಡಿಮೆಯಾಗಿದೆ.

ಕರಾವಳಿ ಭಾಗಕ್ಕೆ ಹೋಲಿಸಿದರೆ ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಉಡುಪಿ ಜಿಲ್ಲೆಯ ಹೆಬ್ರಿ ಮತ್ತು ಕಾರ್ಕಳ ತಾಲೂಕಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಎರಡು ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ 4 ಜಿಲ್ಲೆಗಳಲ್ಲಿ, ಮಲೆನಾಡಿನ ಎಲ್ಲ ಜಿಲ್ಲೆಗಳಲ್ಲಿ ಮತ್ತು ಕರಾವಳಿಯ ಎರಡು ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ರಾಜ್ಯದಲ್ಲಿ ಶೇ. 7ರಷ್ಟು ಮಳೆ ಕೊರತೆ
ಜೂ. 1ರಿಂದ ಜು. 7ರ ವರೆಗೆ ರಾಜ್ಯದಲ್ಲಿ 257 ಮಿ. ಮೀ. ವಾಡಿಕೆ ಮಳೆಯಲ್ಲಿ 238 ಮಿ. ಮೀ. ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಜೂ. 1ರಿಂದ ಜು. 7ರ ವರೆಗೆ 80 ಮೀ. ಮೀ. ವಾಡಿಕೆ ಮಳೆಯಲ್ಲಿ 112 ಮಿ. ಮೀ. ಮಳೆ ಸುರಿದಿದೆ. ಉತ್ತರ ಒಳನಾಡಿನಲ್ಲಿ 124 ಮಿ. ಮೀ. ವಾಡಿಕೆ ಮಳೆಯಲ್ಲಿ 139 ಮಿ. ಮೀ. ಮಳೆಯಾಗಿದೆ. ಮಲೆನಾಡಿನಲ್ಲಿ 501 ಮಿ. ಮೀ. ವಾಡಿಕೆ ಮಳೆಯಲ್ಲಿ 351 ಮಿ.ಮೀ. ಮಳೆಯಾಗಿದೆ. ಕರಾವಳಿ ಭಾಗದಲ್ಲಿ 1,087 ಮಿ.ಮೀ. ವಾಡಿಕೆ ಮಳೆಯಲ್ಲಿ 995 ಮಿ.ಮೀ. ಮಳೆಯಾಗಿದೆ.

 ಮಳೆ ಸಾಧ್ಯತೆ
ಕಳೆದ ಕೆಲವು ತಿಂಗಳ ಹಿಂದೆ ಅಪ್ಪಳಿಸಿದ “ಅಂಫಾನ್‌’ ಮತ್ತು “ನಿಸರ್ಗ’ ಚಂಡಮಾರುತ ನೇರವಾಗಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಮೇಲೆ ಪ್ರಭಾವ ಬೀರಿತ್ತು. ಇದೇ ಕಾರಣ ಆ ಪ್ರದೇಶದಲ್ಲಿ ಮಳೆ ಸೃಷ್ಟಿ ಮಾಡುವ ಮೋಡಗಳು ಹೆಚ್ಚಿದ್ದವು. ಸದ್ಯ ಮುಂಗಾರು ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಸಹಿತ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ.
– ಸುನಿಲ್‌ ಗವಾಸ್ಕರ್‌, ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ

ರಾಜ್ಯದ ಎಲ್ಲೆಲ್ಲಿ ಮಳೆ ಕೊರತೆ?
ರಾಜ್ಯದಲ್ಲಿ ಜೂ. 1ರಿಂದ ಜು. 6ರ ವರೆಗೆ ಸುರಿದ ಮಳೆಯ ಲೆಕ್ಕಾಚಾರದ ಪ್ರಕಾರ ದಾವಣಗೆರೆ (ಶೇ. 3), ಮೈಸೂರು (ಶೇ. 25), ಬೆಳಗಾವಿ (ಶೇ. 3), ಗದಗ (ಶೇ. 27), ಹಾವೇರಿ (ಶೇ. 18), ದಾರವಾಡ (ಶೇ. 17), ಶಿವಮೊಗ್ಗ (ಶೇ. 28), ಹಾಸನ (ಶೇ. 24), ಚಿಕ್ಕಮಗಳೂರು (ಶೇ. 35), ಕೊಡಗು (ಶೇ. 33), ದಕ್ಷಿಣ ಕನ್ನಡ (ಶೇ. 25), ಉಡುಪಿ (ಶೇ. 4) ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.