ಹಸೆಮಣೆ ಏರಿದ ಕನ್ನಡ ಚಿತ್ರರಂಗದ ನಟ ರಾಜ್ ದೀಪಕ್ ಶೆಟ್ಟಿ
Team Udayavani, Nov 5, 2020, 10:33 AM IST
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಖಳನಟನಾಗಿ ಗುರುತಿಸಿಕೊಂಡಿರುವ ನಟ ರಾಜ್ ದೀಪಕ್ ಶೆಟ್ಟಿ ಬುಧವಾರ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ.
ಪಣಂಬೂರಿನ ನಂದನೇಶ್ವರ ದೇವಸ್ಥಾನದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ, ರಾಜ್ ದೀಪಕ್ ಶೆಟ್ಟಿ, ತಮ್ಮ ಬಹುಕಾಲದ ಗೆಳತಿ ಹಾಗೂ ವೃತ್ತಿಯಲ್ಲಿ ಇವೆಂಟ್ ಆರ್ಗನೈಸರ್ ಆಗಿರುವ ಸೋನಿಯಾ ರಾಡ್ರಿಗಸ್ ಜೊತೆ ಸಪ್ತಪದಿ ತುಳಿದರು. ಕೋವಿಡ್
ಆತಂಕದಿಂದಾಗಿ ಸರಳವಾಗಿ ನಡೆದ ವಿವಾಹ ಸಮಾರಂಭದಲ್ಲಿ ರಾಜ್ ದೀಪಕ್ ಶೆಟ್ಟಿ ಮತ್ತು ಸೋನಿಯಾ ರಾಡ್ರಿಗಸ್ ಕುಟುಂಬದ ವರ್ಗ ಮತ್ತು ಆಪ್ತರಷ್ಟೇ ಭಾಗಿಯಾಗಿದ್ದು, ನೂತನ ವಧುವರರಿಗೆ ಶುಭ ಕೋರಿದರು.
ಸದ್ಯ ಕನ್ನಡದಲ್ಲಿ ರಾಜ್ ದೀಪಕ್ ಶೆಟ್ಟಿ ಅಭಿನಯದ “ರಣಂ’, “ಕೋಟಿಗೊಬ್ಬ-3′, “ರವಿಚಂದ್ರ’, “ಗಡಿಯಾರ’ ಚಿತ್ರಗಳು
ಬಿಡುಗಡೆಗೆ ತಯಾರಾಗಿದೆ. ಕನ್ನಡದ ಜತೆ ತೆಲುಗು ಹಾಗೂ ತಮಿಳಿನಲ್ಲೂ ಸಾಕಷ್ಟು ಬೇಡಿಕೆಯ ಖಳನಟನಾಗಿರುವ
ರಾಜ್ ದೀಪಕ್ ಶೆಟ್ಟಿ ಅವರು ಅಲ್ಲು ಅರ್ಜುನ್ ಅಭಿನಯದ “ಪುಷ್ಪಾ’, ವಿಕ್ಟರಿ ವೆಂಕಟೇಶ್ ಅಭಿನಯದ “ನಾರಪ್ಪ’, ರಾಣಾ
ದಗ್ಗುಬಾಟಿ ಅಭಿನಯದ “ವಿರಾಟಪರ್ವಂ’ ಸೇರಿದಂತೆ ಹಲವು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.