Rajasthan: ಫಲಿತಾಂಶ ವಿಶ್ಲೇಷಣೆ- ಕೈಗೆ ಎರವಾಯಿತು ಭಿನ್ನಮತ
Team Udayavani, Dec 4, 2023, 12:15 AM IST
“ಏನೇ ಆಗಲಿ ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳುತ್ತದೆ” ಎನ್ನುವುದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ಎಐಸಿಸಿ ವರಿಷ್ಠರ ಮಾತು ಗಳಾಗಿದ್ದವು. ಆದರೆ, ಪ್ರಧಾ ನವಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಡಿಸಿಎಂ ಸಚಿನ್ ಪೈಲಟ್ ನಡುವಿನ ಭಿನ್ನಮತವೇ ಮರುಭೂಮಿ ರಾಜ್ಯದಲ್ಲಿ ಆಡಳಿತ ಪಕ್ಷಕ್ಕೆ ಸೋಲು ಉಂಟಾಗಲು ಕಾರಣವಾಗಿದೆ.
2020ರಿಂದಲೇ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರಕ್ಕೆ ಮುಸುಕಿನಲ್ಲಿ ಗುದ್ದಾಟ ಶುರುವಾಗಿತ್ತು. ಶಾಸಕಾಂಗ ಪಕ್ಷದ ಸಭೆಗೆ ಹಾಜರಿರಬೇಕು ಎಂದು ವಿಪ್ ಇದ್ದರೂ ಅದನ್ನು ಉಲ್ಲಂಘಿಸಿ ರೆಸಾರ್ಟ್‌ನಲ್ಲಿ ಶಾಸಕರು ಉಳಿದು ಕೊಂಡಿದ್ದರು. ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರಕಾರರಾಜಸ್ಥಾನದಲ್ಲಿ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಗಿದ್ದ ವರು ಟೋಂಕ್ ಕ್ಷೇತ್ರದ ಶಾಸಕ ಸಚಿನ್ ಪೈಲಟ್. ಹೀಗಾಗಿ, ಸಹಜವಾಗಿಯೇ ಅವರಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಹುದ್ದೆಗೆ ಆಸೆ ಹುಟ್ಟಿಕೊಂಡಿತ್ತು.
ಆದರೆ, ಅದಕ್ಕೆ ಗೆಹ್ಲೋಟ್ ಅವಕಾಶವನ್ನೇ ಕೊಟ್ಟಿ ರಲಿಲ್ಲ. ಸರಿ ಸುಮಾರು 20 ಶಾಸಕರು ಸಚಿನ್ ಪೈಲಟ್ ಜತೆಗೆ ಬಂಡಾಯದ ಬಾವುಟ ಹಾರಿಸಿದ್ದುಂಟು. 2013ರಿಂದ 2018ರ ವರೆಗೆ ಅಧಿಕಾರದಲ್ಲಿ ಇದ್ದ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎಂದು ಹೇಳಲಾಗಿರುವ ಅಕ್ರಮ ಆರೋಪಗಳಿಗೆ ತನಿಖೆ ನಡೆ ಸುವಂತೆ ಸಚಿನ್ ಒತ್ತಾಯಿಸುತ್ತಾ ಬಂದಿದ್ದರು. ಕೊಟ್ಟ ಮಾತಿನಂತೆ ನಡೆದು ಕೊಂಡಿಲ್ಲ ಎಂದು ಪ್ರಸಕ್ತ ವರ್ಷದ ಉಪವಾಸ ಸತ್ಯಾಗ್ರಹವನ್ನೂ ಮಾಡಿದ್ದರು ಸಚಿನ್.
ಅಶೋಕ್ ಗೆಹ್ಲೋಟ್ ಬಹಿರಂಗವಾಗಿಯೇ ಪಕ್ಷದ ಸಹೋದ್ಯೋಗಿಯ ವರ್ತನೆ ಬಗ್ಗೆ ಅಸಮಾ ಧಾನ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಸಹಿತ ಪ್ರಮುಖರು ಗೆಹ್ಲೋಟ್ ಮತ್ತು ಪೈಲಟ್ ನಡುವೆ ರಾಜಿ ಮಾಡಿಸಿದ್ದರೂ, ಪ್ರಯೋಜನವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.