ಹುಬ್ಬಳ್ಳಿ ಮಾರ್ಗವಾಗಿ ದೆಹಲಿಗೆ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಆಗ್ರಹ
ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವರಿಂದ ಸೂಕ್ತ ಕ್ರಮದ ಭರವಸೆ
Team Udayavani, Jan 11, 2022, 12:29 PM IST
ಹುಬ್ಬಳ್ಳಿ: ಬೆಂಗಳೂರು-ಹುಬ್ಬಳ್ಳಿ-ಧಾರವಾಡ ಮುಖಾಂತರ ನವದೆಹಲಿಗೆ ಪ್ರತ್ಯೇಕ ರಾಜಧಾನಿ ಎಕ್ಸಪ್ರಸ್ ರೈಲು ಹಾಗೂ ಧಾರವಾಡದಿಂದ ಬೆಂಗಳೂರಿಗೆ ವಂದೇ ಭಾರತ ರೈಲುಗಳ ಸೇವೆ ಆರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಹೇಳಿದ್ದಾರೆ.
ಸೋಮವಾರ ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರು ರೈಲ್ವೆ ಸಚಿವರನ್ನು ಭೇಟಿಯಾಗಿ ಬೆಂಗಳೂರು-ಹುಬ್ಬಳ್ಳಿ-ಧಾರವಾಡದಿಂದ ನವದೆಹಲಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಹಾಗೂ ವಂದೇ ಭಾರತ ರೈಲು ಆರಂಭಿಸುವಂತೆ ಮನವಿ ಮಾಡಿದರು ಹಾಗೂ ಇದೇ ಸಮಯದಲ್ಲಿ ವಿವಿಧ ರೈಲ್ವೆ ಯೋಜನೆಗಳ ಬಗ್ಗೆ
ಚರ್ಚಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ರೈಲ್ವೆ ಸಚಿವರು, ಸದ್ಯದಲ್ಲೇ ಈ ಎರಡೂ ರೈಲುಗಳ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದ್ದಾರೆಂದು ಜೋಶಿ ತಿಳಿಸಿದ್ದಾರೆ. ಕುಸುಗಲ್ಲ-ಅಮರಗೋಳ ಹೊಸ ರೈಲ್ವೆ ಬೈಪಾಸ್‌ನ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ಈ ಸರ್ವಿಸ್ ರಸ್ತೆ ನಿರ್ಮಾಣದಿಂದ ರೈಲ್ವೆ ಲೈನ್‌ದ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರ ಅದರಲ್ಲೂ ಮುಖ್ಯವಾಗಿ ರೈತಾಪಿ ವರ್ಗಕ್ಕೆ ಅನುಕೂಲವಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಗಿದೆ. ಇದಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಚಿವ ಜೋಶಿ ತಿಳಿಸಿದ್ದಾರೆ.
ಇದನ್ನೂ ಓದಿ : ಅಧಿಕಾರದಲ್ಲಿದ್ದಾಗ ಏನೂ ಮಾಡದ ಕಾಂಗ್ರೇಸ್, ಈಗ ಪಾದಯಾತ್ರೆಯ ನಾಟಕವಾಡುತ್ತಿದೆ: ಹಾಲಪ್ಪ ಆಚಾರ್
ವಂದೇ ಭಾರತ್ ಎಕ್ಸಪ್ರಸ್ ರೈಲಿನ ಪ್ರಯಾಣದಿಂದ ಧಾರವಾಡದಿಂದ ಬೆಂಗಳೂರಿಗೆ ಕೆಲವೇ ಗಂಟೆಗಳಲ್ಲಿ ಕ್ರಮಿಸಬಹುದಾಗಿದೆ. ಈ ರೈಲು ಸಂಚಾರದಿಂದ ಧಾರವಾಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜುಗಳು, ಪ್ರತಿಷ್ಠಿತ ಐಐಟಿ, ನೈಋತ್ಯ ರೈಲ್ವೆ ವಲಯ ಕಚೇರಿ, ಇಂಜಿನಿಯರಿಂಗ್ ಕಾಲೇಜುಗಳಿದ್ದು, ವಾಣಿಜ್ಯ ನಗರದ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ತಮ್ಮ ಪ್ರಸ್ತಾವನೆಗಳಿಗೆ ಸ್ಪಂದಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಸಚಿವ ಜೋಶಿ ಅವರು ರಾಜ್ಯದ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.