ರಾಜೀವ್ ಚಂದ್ರಶೇಖರ್ ಗೆ ಕೇಂದ್ರ ಸಂಪುಟದಲ್ಲಿ ಸ್ಥಾನ
Team Udayavani, Jul 8, 2021, 6:45 AM IST
ಬೆಂಗಳೂರು: ರಾಜ್ಯದಿಂದ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೇರಳ ಮೂಲದ ಇವರು ಕಂಪ್ಯೂಟರ್ ಸೈನ್ಸ್‌ನಲ್ಲಿ ಹಾರ್ವರ್ಡ್ ಯುನಿವರ್ಸಿಟಿಯಲ್ಲಿ ಎಂ ಟೆಕ್ ಮಾಡಿದ್ದಾರೆ. ಅನೇಕ ಉದ್ಯಮಗಳನ್ನು ಸ್ಥಾಪಿಸಿ ಯಶಸ್ವಿಯಾಗಿದ್ದಾರೆ. ಕೇಂದ್ರದ ಅನೇಕ ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಕೇರಳ ಚುನಾವಣೆಯ ಉಸ್ತುವಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 57 ವಯಸ್ಸಿನ ಇವರು ಕೇಂದ್ರ ಸಂಪುಟದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿನ್ನೆಲೆ: ಅಮೆರಿಕಾದ ಸಿಲಿಕಾನ್ ವ್ಯಾಲಿಯ ಇಂಟೆಲ್ ಸಂಸ್ಥೆಯ ಉದ್ಯೋಗಿಯಾಗಿದ್ದ ಇವರು 1991ರಲ್ಲಿ ಭಾರತಕ್ಕೆ ಮರಳಿ 1994 ರಲ್ಲಿ ಬಿಪಿಎಲ್ ಮೊಬೈಲ್ ಸ್ಥಾಪಿಸುವ ಮೂಲಕ ಭಾರತದ ದೂರ ಸಂಪರ್ಕ ಕ್ಷೇತ್ರದಲ್ಲಿ ಹೂಡಿಕೆ ಮಾಡಿದ ಮೊದಲಿಗರೆನಿಸಿದರು. ಕೇವಲ 12 ವರ್ಷದಲ್ಲಿ ದೇಶದ ದೂರ ಸಂಪರ್ಕ ಕ್ಷೇತ್ರದಲ್ಲಿ ದೊಡ್ಡ ಕೊಡುಗೆ ನೀಡಿದರು. ಸೆಲ್ಯೂಲರ್ ಕ್ಷೇತ್ರದ ಯಶಸ್ವಿಗೆ ಕಾರಣವಾಗಿರುವ ಹೊಸ ಟೆಲಿಕಾಂ ನೀತಿ (ಎನ್‌ಟಿಪಿ 99) ರೂಪಿಸುವಲ್ಲಿ ಹಾಗೂ ಸ್ವಾಯತ್ತ ಸಂಸ್ಥೆ ಟ್ರಾಯ್ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಖಾಸಗಿ ಇಕ್ವಿಟಿ ಹೂಡಿಕೆದಾರರಾಗಿ 2006 ರಲ್ಲಿ ಜುಪಿಟರ್ ಕ್ಯಾಪಿಟಲ್ ಆರಂಭಿಸಿ 2014 ರ ವರೆಗೆ ಅಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಮಾಧ್ಯಮ ಹಾಗೂ ತಂತ್ರಜ್ಞಾನ ಮೂಲ ಸೌಕರ್ಯ ವಲಯದಲ್ಲಿ ಅನೇಕ ಬ್ರ್ಯಾಂಡ್ ಹಾಗೂ ಫ್ರಾಂಚೈಸಿಗಳನ್ನು ರೂಪಿಸಿದ್ದರು ಮತ್ತು ಹೂಡಿಕೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.