ಆ್ಯಕ್ಷನ್ ಥ್ರಿಲ್ಲರ್ ನಲ್ಲಿ ರಕ್ತದೋಕುಳಿ
ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದ್ದು, ಸಿನಿಮಾಕ್ಕೆ ಎಂ. ನಾಗರಾಜು ಬಂಡವಾಳ ಹೂಡಿದ್ದಾರೆ.
Team Udayavani, Sep 22, 2022, 1:38 PM IST
ಟೀಸರ್ ರಿಲೀಸ್ ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ ಸಸ್ಪೆನ್ಸ್ ಕಂ ಆ್ಯಕ್ಷನ್-ಥ್ರಿಲ್ಲರ್ ಕಥಾಹಂದರದ “ರಕ್ತದೋಕುಳಿ’ ಸಿನಿಮಾದ ಮೊದಲ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಯುವ ನಟ ಧೀರೇನ್ ರಾಮ್ ಕುಮಾರ್ “ರಕ್ತದೋಕುಳಿ’ ಸಿನಿಮಾದ ಮೊದಲ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಕನ್ನಡ ಚಿತ್ರರಂಗದಲ್ಲಿ ನಿರ್ದೇಶನ ಹಾಗೂ ತಾಂತ್ರಿಕ ವಿಭಾಗದಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿರುವ ಯುವ ಪ್ರತಿಭೆ ಎನ್. ಎನ್ ಜಾಕಿ ಈಡಿಗರ್, “ರಕ್ತದೋಕುಳಿ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈಗಾಗಲೇ “ರಕ್ತದೋಕುಳಿ’ ಸಿನಿಮಾದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರೀಕರಣ ಕೊನೆಯ ಹಂತಕ್ಕೆ ಬಂದಿದೆ. ಇದೇ ವೇಳೆ ಸಿನಿಮಾದ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡ, ಸಿನಿಮಾದ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು.
ಮೊದಲಿಗೆ “ರಕ್ತದೋಕುಳಿ’ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಜಾಕಿ ಈಡಿಗರ್, “ಬೆಂಗಳೂರಿನ ಸ್ಲಂ ಗಳಲ್ಲಿ ನಡೆಯುವ ಕಥೆ ಸಿನಿಮಾದಲ್ಲಿದೆ. ಸ್ಲಂ ಹುಡುಗರು ಹೇಗೆ ಅಲ್ಲಿನ ವಾತಾವರಣದಿಂದ ಪ್ರೇರಿತರಾಗಿ ಅಡ್ಡದಾರಿ ಹಿಡಿಯುತ್ತಾರೆ. ತಪ್ಪು ದಾರಿ ಹಿಡಿದ ಮೇಲೆ ಏನೆಲ್ಲ ಕ್ರೈಂ ಮಾಡುತ್ತಾರೆ ಅನ್ನೋದರ ಸುತ್ತ ಇಡೀ ಸಿನಿಮಾದ ಕಥೆ ನಡೆಯುತ್ತದೆ. ಕ್ರೈಂ ಮಾಡಬೇಡಿ ಅನ್ನೋದನ್ನ ಸೂಕ್ಷ್ಮವಾಗಿ ಈ ಸಿನಿಮಾದಲ್ಲಿ ಹೇಳ ಹೊರಟಿದ್ದು. ಐದು ಜನ ಹುಡುಗರು
ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಸಸ್ಪೆನ್ಸ್ ಕಂ ಆ್ಯಕ್ಷನ್-ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿದ್ದು, ಪ್ರತಿ ಹಂತದಲ್ಲೂ ಪ್ರೇಕ್ಷಕರಿಗೆ ಥ್ರಿಲ್ ನೀಡುವ ಕಂಟೆಂಟ್ ಸಿನಿಮಾದಲ್ಲಿದೆ’ ಎಂದು ಮಾಹಿತಿ ನೀಡಿದರು.
ಬೆಂಗಳೂರು ಸುತ್ತಮುತ್ತ “ರಕ್ತದೋಕುಳಿ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದ್ದು, ಸಿನಿಮಾಕ್ಕೆ ಎಂ. ನಾಗರಾಜು ಬಂಡವಾಳ ಹೂಡಿದ್ದಾರೆ. ಕಿರುತೆರೆಯ “ಕಾಮಿಡಿ ಕಿಲಾಡಿಗಳು’ ಶೋ ಖ್ಯಾತಿಯ ನಯನಾ, ನಾಗೇಂದ್ರ ಅರಸ್ ಮೊದಲಾದವರು “ರಕ್ತದೋಕುಳಿ’ ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಸಿನಿಮಾದ ನಾಲ್ಕು ಹಾಡುಗಳಿಗೆ ಅನಿಲ್ ಸಿ. ಜೆ ಸಂಗೀತ ಸಂಯೋಜಿಸಿದ್ದು, ಲೋಕಲ್ ಲೋಕಿ ಸಾಹಿತ್ಯವಿದೆ. ಚಿತ್ರಕ್ಕೆ ರಂಗಸ್ವಾಮಿ ಎಲ್. ಛಾಯಾಗ್ರಹಣ, ಗಂಗಮ್ ರಾಜು ನೃತ್ಯ ನಿರ್ದೇಶನ, ಚಂದ್ರು ಬಂಡೆ ಸಾಹಸ ಸಂಯೋಜನೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.