Ayodhya: ರಾಮ ಮಂದಿರದಿಂದ ಅಯೋಧ್ಯೆ ಆರ್ಥಿಕಾಭಿವೃದ್ಧಿ : ನೃಪೇಂದ್ರ ಮಿಶ್ರಾ
Team Udayavani, Sep 27, 2023, 9:12 PM IST
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಕಾಮಗಾರಿ ಮುಕ್ತಾಯಗೊಂಡು ಭಕ್ತರ ದರ್ಶನಕ್ಕೆ ಮುಕ್ತಗೊಂಡ ಬಳಿಕ ಸುತ್ತಮುತ್ತಲಿನ ಪ್ರದೇಶಗಳಿಗೆ ಅನುಕೂಲವಾಗಲಿದೆ. ಅಲ್ಲಿನ ಆರ್ಥಿಕಾಭಿವೃದ್ಧಿಗೆ ನೆರವಾಗಲಿದೆ. ಹೀಗೆಂದು ಶ್ರೀರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಹೇಳಿದ್ದಾರೆ.
“ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಜನವರಿಯಲ್ಲಿ ರಾಮ ಮಂದಿರ ಭಕ್ತರಿಗೆ ಮುಕ್ತವಾಗಲಿದೆ. ಇದರಿಂದ ಅಯೋಧ್ಯೆಯ ಸುತ್ತಮುತ್ತಲಿನ ಸ್ಥಳಗಳಲ್ಲಿನ ಆರ್ಥಿಕಾಭಿವೃದ್ಧಿ ಹೆಚ್ಚಲು ಸಹಾಯಕವಾಗಲಿದೆ. ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆ ಆಗಲಿರುವುದರಿಂದ ಉದ್ಯೋಗದ ಅವಕಾಶಗಳೂ ಸೃಷ್ಟಿಯಾಗಲಿವೆ. ಹೋಟೆಲ್ ನಿರ್ಮಾಣಕ್ಕೆ ಈಗಾಗಲೇ 16 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಹೇಳಿದ್ದಾರೆ. ಮುಂದೊಂದು ದಿನ ರಾಷ್ಟ್ರೀಯ ರಾಜಧಾನಿ ಪ್ರದೇಶ ದೆಹಲಿಯಂತೆ ಅಯೋಧ್ಯೆಯೂ ಆಗಬಹುದು ಎಂದರು.
ಬಿಹಾರ, ಛತ್ತೀಸ್‌ಗಢ, ನೇಪಾಳದಲ್ಲಿ ಶ್ರೀರಾಮನ ಜತೆಗೆ ನಿಕಟವಾಗಿ ಇರುವ ಸ್ಥಳಗಳನ್ನು ಅಭಿವೃದ್ಧಿಗೊಳಿಸಬೇಕು ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಕೋರಿಕೆ ಸಲ್ಲಿಕೆಯಾಗುತ್ತಿವೆ ಎಂದರು. ಆದರೆ, ಅದನ್ನು ಸ್ಥಳೀಯ ಜನರೇ ಮುತುವರ್ಜಿ ವಹಿಸಿ ನಡೆಸಬೇಕು ಎಂದು ಸಲಹೆ ನೀಡಿದ್ದೇವೆ ಎಂದು ಮಿಶ್ರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.