ಕೊಲ್ಹಾರದಲ್ಲಿ ತಲೆ ಎತ್ತಲಿದೆ ಕಿರು ರಾಮ ಮಂದಿರ

Team Udayavani, Aug 6, 2020, 11:27 AM IST

ಕೊಲ್ಹಾರದಲ್ಲಿ ತಲೆ ಎತ್ತಲಿದೆ ಕಿರು ರಾಮ ಮಂದಿರ

ಕೊಲ್ಹಾರ: ಪಟ್ಟಣದ ಹೊರ ವಲಯದಲ್ಲಿರುವ ಬೆಳ್ಳುಬ್ಬಿ ಲೇಔಟ್‌ ನಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ಶೈಲಿಯಲ್ಲಿ ಚಿಕ್ಕದಾದ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಮತ್ತು ರಾಮ ಮಂದಿರದ ಕರ ಸೇವಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ ಮಾತನಾಡಿ, 500 ವರ್ಷಗಳ ರಾಮ ಮಂದಿರ ಹೋರಾಟಕ್ಕೆ ಕೊನೆಗೂ ನ್ಯಾಯಾಲಯದ ಮೂಲಕ ಒಂದು ತಾರ್ಕಿಕ ಅಂತ್ಯ ಲಭಿಸಿದೆ. ಅತ್ಯಂತ ಭಾವನಾತ್ಮಕ ವಿಚಾರವೊಂದರ ಇತ್ಯರ್ಥ ಕಾನೂನಿನ ಮೂಲಕ ಆಯಿತಲ್ಲ.

ಇತಿಹಾಸದಲ್ಲೆ ಮೊಕದ್ದಮೆಯೊಂದು ದೀರ್ಘ‌ ಕಾಲ ನಡೆದ ದಾಖಲೆಯಿಲ್ಲ. ನಲವತ್ತು ದಿನಗಳವರೆಗೆ ನಿರಂತರ ದೀರ್ಘ‌ ವಿಚಾರಣೆ ಪ್ರತಿ ನಿತ್ಯ 5 ಗಂಟೆ ವಾದ ವಿವಾದವನ್ನು ಆಲಿಸಿ ಐವರು ನ್ಯಾಯಾಧಿಧೀಶರ ಪೀಠ ಒಮ್ಮತದ ತೀರ್ಪು ನೀಡಿದ್ದು ಇತಿಹಾಸವೇ. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲೇ ಶ್ರೀರಾಮ ಮಂದಿರ ನಿರ್ಮಿಸಬೇಕೆಂಬ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಸತ್ಯ ಮತ್ತು ನ್ಯಾಯ ಎರಡನ್ನೂ ಎತ್ತಿ ಹಿಡಿದಿದೆ ಎಂದರು.

ಪವಿತ್ರ ಸ್ಥಳ ಪ್ರಭು ಶ್ರೀರಾಮಚಂದ್ರ ಮಹಾರಾಜರ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸಿದ್ದಾರೆ. ಅದೆ ಸಮಯಕ್ಕೆ ಸರಿಯಾಗಿ ನಾವುಗಳು ಇಲ್ಲಿ ರಾಮ ಮಂದಿರದ ಶೈಲಿಯಲ್ಲಿಯೇ ಸಣ್ಣದೊಂದು ಪ್ರಭು ಶ್ರೀರಾಮಚಂದ್ರರ ಮಂದಿರ ನಿರ್ಮಿಸಲು ಸಂಕಲ್ಪ ಮಾಡುತ್ತಿದ್ದೇವೆ. ಹತ್ತು ಅವತಾರಗಳಲ್ಲಿ ಒಂದು ಅವತಾರವಾದ ಶ್ರೀರಾಮನ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಹರ್ಷದಾಯಕ ಸಂಗತಿ ಎಂದರು.

ಭೂಮಿ ಪೂಜೆ ಪೂರ್ವದಲ್ಲಿ ಪಟ್ಟಣದಲ್ಲಿರುವ ಆಂಜನೇಯ ಮತ್ತು ದ್ಯಾಮವ್ವದೇವಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. 1992ರ ಡಿಸೆಂಬರ್‌ 6ರಂದು ಅಯೋಧ್ಯೆಗೆ ತೆರಳಿದ್ದ ಕರ ಸೇವಕರಾದ ರಾಮಣ್ಣ ಬಾಟಿ, ಸಂಗಪ್ಪ ಚಿತ್ತಾಪುರ, ಬಸಪ್ಪ ಚೌಡಪ್ಪಗೊಳ, ವಿಜಯಕುಮಾರ ನಿಲವಾಣಿ, ಅಶೋಕ ಚೌಡಪ್ಪಗೋಳ ಮತ್ತು ದಿ| ರುದ್ರಪ್ಪ ಹುಲ್ಯಾಳ, ಪುಂಡಲೀಕ ಕರಣೆ ಇವರ ಪುತ್ರರನ್ನು ಸನ್ಮಾನಿಸಲಾಯಿತು. ನಂತರ ಕಾರ್ಯಕರ್ತರು ಪರಸ್ಪರ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಶೀಲವಂತ ಹಿರೇಮಠದ ಕೈಲಾಸನಾಥ ಸ್ವಾಮೀಜಿ ಹಾಗೂ ಹಿರೇಮಠದ ಪಡದಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು ರಾಜಶೇಖರ ಶೀಲವಂತ, ಮುರಿಗೆಪ್ಪ ಬೆಳ್ಳುಬ್ಬಿ, ಭೀಮಶಿ ಬೀಳಗಿ, ಮಲ್ಲು ಬೆಳ್ಳುಬ್ಬಿ, ನಾಮದೇವ ಪವಾರ, ಡೋಂಗ್ರಿ ಕಟಬರ, ಬಾಬುರಾವ್‌ ಬೆಳ್ಳುಬ್ಬಿ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.