Ramakunja: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
Team Udayavani, Apr 6, 2024, 12:28 AM IST
ಕಡಬ: ತವರು ಮನೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಕುಂಜದಲ್ಲಿ ಸಂಭವಿಸಿದೆ.
ರಾಮಕುಂಜ ಗ್ರಾಮದ ಕಂಪ ನಿವಾಸಿ ದೇವಪ್ಪ ಮೂಲ್ಯ ಅವರ ಪುತ್ರಿ ವನಿತಾ (38)ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ 3 ವರ್ಷದ ಗಂಡು ಮಗು ಇದ್ದು, 3 ತಿಂಗಳ ಹಿಂದೆ 2ನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಈ ಹೆಣ್ಣು ಮಗುವಿಗೆ ಎರಡೂವರೆ ತಿಂಗಳಾಗಿದ್ದಾಗ ಎದೆ ಹಾಲು ಉಣಿಸುವ ಸಮಯದಲ್ಲಿ ಆಕಸ್ಮಿಕವಾಗಿ ಮೃತಪಟ್ಟಿತ್ತು. ಇದರಿಂದ ವನಿತಾ ಅವರು ಮಾನಸಿಕವಾಗಿ ನೊಂದುಕೊಂಡು ಖನ್ನತೆಗೊಳಗಾಗಿದ್ದರು. ಇದೇ ಚಿಂತೆಯಲ್ಲಿ ಕೊರಗಿದ್ದ ಅವರನ್ನು ಅವರ ಪತಿ ಮಾ. 4ರಂದು ತಾಯಿ ಮನೆಯಾದ ರಾಮಕುಂಜಕ್ಕೆ ಕರೆತಂದು ಬಿಟ್ಟು ಹೋಗಿದ್ದರು.
ಎ. 2ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ವನಿತಾ ಅವರು ಮನೆಯ ಒಳಗಿನ ಕೋಣೆಯ ಮರದ ಅಡ್ಡಕ್ಕೆ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ವನಿತಾ ಅವರ ಸಹೋದರ ದಿವಾಕರ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.