ರಾಜ್ಯದ ಅಣೆಕಟ್ಟುಗಳ ಪುನಶ್ಚೇತನಕ್ಕೆ ಕೇಂದ್ರದಿಂದ 750 ಕೋಟಿ: ರಮೇಶ್ ಜಾರಕಿಹೊಳಿ
Team Udayavani, Nov 27, 2020, 8:51 PM IST
ಬೆಂಗಳೂರು: ರಾಜ್ಯದ ಅಣೆಕಟ್ಟುಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕದ ಹಲವು ಅಣೆಕಟ್ಟುಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ಸೂಚಿಸಿದೆ.
ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಯತ್ನದಿಂದ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಿದ್ದಾರೆ.
ಕೇಂದ್ರ ಜಲ ಶಕ್ತಿ ಆಯೋಗವು ದೇಶದ ಪ್ರಮುಖ ಆಣೆಕಟ್ಟುಗಳ ಸಬಲೀಕರಣಕ್ಕಾಗಿ ವಿಶ್ವ ಬ್ಯಾಂಕ್ ನೆರವಿನ ಡ್ರಿಪ್ ಯೋಜನೆ ಅಡಿಯಲ್ಲಿ ಗಾಯತ್ರಿ ಡ್ಯಾಂ, ತುಂಗಭದ್ರಾ ಡ್ಯಾಂ, ನಾರಾಯಣಪುರ ಮತ್ತು ಕೆಆರ್‌ಎಸ್ ಡ್ಯಾಂಗಳ ಸಬಲೀಕರಣ ಸೇರಿದಂತೆ 52 ಅಣೆಕಟ್ಟುಗಳ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ 150 ಕೋಟಿ ರೂ.ಗಳ ಬೇಡಿಕೆ ಇಟ್ಟಿತ್ತು.
ಇದನ್ನೂ ಓದಿ:ಪಬ್ ಜಿ ಹೊಸ ಆವೃತ್ತಿ ಭಾರತದಲ್ಲಿ ಈ ವರ್ಷಾಂತ್ಯ ಬಿಡುಗಡೆ ?: ಸಂಸ್ಥೆ ಹೇಳುವುದೇನು ?
ಶುಕ್ರವಾರ ನವದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾಕರಿಹೊಳಿ ಕೇಂದ್ರ ಸಚಿವರ ಗಮನ ಸೆಳೆದು 750 ಕೋಟಿ ರೂ. ಅನುದಾನ ಪಡೆಯಲು ಯಶಸ್ವಿಯಾಗಿದ್ದಾರೆ.
ಕೇಂದ್ರ ಸಚಿವರ ಸಭೆಯ ಬಳಿಕ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ರಾಜ್ಯದ ನೀರಾವರಿ ಯೋಜನೆಗಳನ್ನು ಕಾಲ ಮಿತಿಯಲ್ಲಿ ಅನುಷ್ಠಾನಗೊಳಿಸಲು ನಾವು ಬದ್ಧರಾಗಿದ್ದೇವೆ. ವಿಶ್ವ ಬ್ಯಾಂಕ್ ನೆರವಿನ ಯೋಜನೆಗಳ ಅನುದಾನಕ್ಕೆ ನಾವು ಮಾಡಿದ ಮನವಿಗೆ ಕೇಂದ್ರ ಸಚಿವರು ಸಮ್ಮತಿಸಿದದ್ದು, ಕಾರ್ಯಯೋಜನೆಯನ್ನು ಅಂತಿಮಗೊಳಿಸಿ ಅನುಮೋದನೆ ಪಡೆಯುತ್ತೇವೆ ಎಂದರು.
ಕೇಂದ್ರ ಸಚಿವರ ಜೊತೆ ನಡೆದ ಸಭೆಯಲ್ಲಿ ರಾಜ್ಯದ ಅಪರ್ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.