ಶಾಂತಿ-ಸೌಹಾರ್ದ ಕಾಪಾಡಿ: ರಣದೀಪ್‌ಸಿಂಗ್ ಸುರ್ಜೇವಾಲಾ ಮನವಿ
Team Udayavani, Feb 9, 2022, 9:45 PM IST
ಬೆಂಗಳೂರು: ಹಿಜಾಬ್ – ಕೇಸರಿ ಶಾಲು ಸಂಘರ್ಷ ತಿಳಿಯಾಗಬೇಕಿದ್ದರೆ ವಿದ್ಯಾರ್ಥಿಗಳಲ್ಲಿ ಶಾಂತಿ, ಸೌಹಾರ್ದ ಮೂಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಈ ಕುರಿತು ರಾಜ್ಯದ ವಿದ್ಯಾರ್ಥಿಗಳಿಗೆ ಬಹಿರಂಗ ಪತ್ರ ಬರೆದಿರುವ ಅವರು, ಕೆಲವು ದುಷ್ಟರ ಸ್ವಹಿತಾಸಕ್ತಿಗಾಗಿ ನಿಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಮಕ್ಕಳು ಹಾಗೂ ಅವರ ಪೋಷಕರಿಗೆ ಮನವಿ ಮಾಡಿದ್ದಾರೆ.
ವಿವಿಧತೆಯಲ್ಲಿ ಏಕತೆ ಎಂಬ ತತ್ವವನ್ನು ಎತ್ತಿ ಹಿಡಿದು ನಾವೆಲ್ಲರೂ ಒಂದಾಗಿ ಶಿಕ್ಷಣದ ಬಗ್ಗೆ ಗಮನಹರಿಸಿ ರಾಜ್ಯ ಹಾಗೂ ದೇಶವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸೋಣ.
ನಾನು ನಿಮ್ಮ ಹಿತೈಷಿಯಾಗಿ, ಮಾಜಿ ವಿದ್ಯಾರ್ಥಿ ಹೋರಾಟಗಾರನಾಗಿ, ಭಾರತದ ಪ್ರಾಚೀನ ವಿಶ್ವವಿದ್ಯಾನಿಲಯ ವಾಗಿರುವ ಪಂಜಾಬ್ ವಿವಿಯ ಸೆನೆಟ್ ಹಾಗೂ ಸಿಂಡಿಕೇಟ್ ಸದಸ್ಯನಾಗಿ, ಆಡಳಿತಗಾರನಾಗಿ ನನಗಿರುವ ಸುದೀರ್ಘ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ:ಸಿಗದ ತುರ್ತು ಆರೋಗ್ಯ ವಾಹನ ; ಉಸಿರಾಟದ ಸಮಸ್ಯೆಯಿಂದ 45 ದಿನದ ಮಗು ಸಾವು
ಬೆಂಗಳೂರು ಭಾರತದ ಮಾಹಿತಿ ತಂತ್ರಜ್ಞಾನದ ರಾಜಧಾನಿ.ದೇಶದಲ್ಲೇ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಹಾಗೂ ಇತರೆ ವೃತ್ತಿಪರ ಕಾಲೇಜುಗಳನ್ನು ಹೊಂದಿರುವ ಕರ್ನಾಟಕ ರಾಜ್ಯವು ಭಾರತದ ಶೈಕ್ಷಣಿಕ ಕೇಂದ್ರ ಸ್ಥಾನವಾಗಿದೆ. ಯುವಕರಿಗೆ ಹೆಚ್ಚು ಉದ್ಯೋಗ ಸೃಷ್ಟಿಸುವ ಅವಕಾಶ ಹೊಂದಿದೆ ಎಂದು ಹೇಳಿದ್ದಾರೆ.
ಬಹು ಭಾಷಾ, ಬಹು ಜನಾಂಗ, ಬಹು ಸಂಸ್ಕೃತಿಯ ಗುರುತು ಹೊಂದಿರುವ ಬೆಂಗಳೂರು ಹಾಗೂ ಕರ್ನಾಟಕ ನಮ್ಮ ದೇಶದ ಅಭಿವೃದ್ಧಿಗೆ ಮಾರ್ಗಸೂಚಿಯಾಗಿದೆ.
ಭ್ರಷ್ಟಾಚಾರ, ದುರಾಡಳಿತದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರವು ತನ್ನ ರಾಜಕೀಯ ದುರುದ್ದೇಶಕ್ಕೆ ಕರ್ನಾಟಕ ರಾಜ್ಯದ ಯುವಕರು ಹಾಗೂ ವಿದ್ಯಾರ್ಥಿಗಳಲ್ಲಿ ಬಿರುಕು ಮೂಡಿಸಿ ಅವರ ಏಕತೆಯನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.