ಬಾಲಿವುಡ್ ನಲ್ಲಿ ಫುಲ್ ಬ್ಯುಸಿಯಾದ ಕೊಡಗಿನ ಕುವರಿ: ರಣಬೀರ್ ಗೆ ಜೋಡಿ
Team Udayavani, Apr 3, 2022, 10:00 AM IST
ಮುಂಬಯಿ :ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರದ ನಾಯಕಿಯಾಗಿ ನಟಿ ರಶ್ಮಿಕಾ ಮಂದಣ್ಣ ನಟಿಸಲಿದ್ದಾರೆ ಎಂದು ಚಿತ್ರ ತಂಡ ಶನಿವಾರ ಘೋಷಿಸಿದೆ.
ಅಪರಾಧ ಹಿನ್ನಲೆಯ ಕಥೆ ಹೊಂದಿರುವ ಚಿತ್ರವನ್ನು ಕಬೀರ್ ಸಿಂಗ್ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸುತ್ತಿದ್ದಾರೆ.
ಟಿ-ಸೀರೀಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಶ್ಮಿಕಾ ಪಾತ್ರದ ಕುರಿತು ಘೋಷಿಸಿದ್ದು, ಯುಗಾದಿ ಮತ್ತು ಗುಡಿ ಪಾಡ್ವದ ಶುಭ ಸಂದರ್ಭದಲ್ಲಿ, ನಾವು ರಶ್ಮಿಕಾ ಮಂದಣ್ಣ ಅವರನ್ನು ‘ಅನಿಮಲ್’ ತಂಡಕ್ಕೆ ಸ್ವಾಗತಿಸುತ್ತೇವೆ! ಈ ಬೇಸಿಗೆಯಲ್ಲಿ ಶೂಟಿಂಗ್ ಆರಂಭವಾಗಲಿದೆ ಎಂದು ಬರೆದಿದೆ.
ಕನ್ನಡ ಮತ್ತು ತೆಲುಗು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಮಾಡುವ ಮಂದಣ್ಣ, ಕಿರಿಕ್ ಪಾರ್ಟಿ, ಗೀತ ಗೋವಿಂದಂ, ದೇವದಾಸ್, ಯಜಮಾನ, ಮತ್ತು ಡಿಯರ್ ಕಾಮ್ರೇಡ್ ಮುಂತಾದ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಜನ ಮೆಚ್ಚುಗೆ ಪಡೆದಿದ್ದಾರೆ. ಬಿಡುಗಡೆಯಾದ ಅವರ ಕೊನೆಯ ಚಿತ್ರ ಅಲ್ಲು ಅರ್ಜುನ್ ನಾಯಕನಾಗಿದ್ದ”ಪುಷ್ಪಾ” ಭಾರಿ ಯಶಸ್ಸು ಕಂಡಿತ್ತು.
ಸ್ಪೈ ಥ್ರಿಲ್ಲರ್ ‘ಮಿಷನ್ ಮಜ್ನು’ ಜತೆಗೆ ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲು ರಶ್ಮಿಕಾ ಸಿದ್ಧರಾಗಿದ್ದು, ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಜೊತೆಗೆ ಮತ್ತೊಂದು ಹಿಂದಿ ಚಲನಚಿತ್ರ ಗುಡ್ ಬೈ ನಲ್ಲಿ ಸಹ ಕಾಣಿಸಿಕೊಳ್ಳಲಿದ್ದಾರೆ.
ಈ ಬೇಸಿಗೆಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿರುವ “ಅನಿಮಲ್” ನಲ್ಲಿ ನಟರಾದ ಅನಿಲ್ ಕಪೂರ್ ಮತ್ತು ಬಾಬ್ಲಿ ಡಿಯೋಲ್ ಕೂಡ ನಟಿಸುತ್ತಿದ್ದಾರೆ. ಚಿತ್ರವು ಆಗಸ್ಟ್ 11, 2023 ರಂದು ಬಿಡುಗಡೆಯಾಗಲಿದೆ.
‘ಅನಿಮಲ್’ ಚಿತ್ರವನ್ನು ಭೂಷಣ್ ಕುಮಾರ್ ಮತ್ತು ಕ್ರಿಶನ್ ಕುಮಾರ್ ಅವರ ಟಿ-ಸೀರೀಸ್, ಮುರಾದ್ ಖೇತಾನಿಯ ಸಿನಿ1 ಸ್ಟುಡಿಯೋಸ್ ಮತ್ತು ಪ್ರಣಯ್ ರೆಡ್ಡಿ ವಂಗಾ ಅವರ ಭದ್ರಕಾಳಿ ಪಿಕ್ಚರ್ಸ್ ನಿರ್ಮಿಸಿದೆ.
ಈ ಹಿಂದೆ, ನಟಿ ಪರಿಣಿತಿ ಚೋಪ್ರಾ ಅವರು ಚಿತ್ರದಲ್ಲಿ ನಟಿಸುತ್ತಾರೆ ಎಂದು ಹೇಳಲಾಗಿತ್ತು, ಆದರೆ ಅವರು ವೇಳಾಪಟ್ಟಿಯ ಸಂಘರ್ಷದಿಂದಾಗಿ ಚಿತ್ರದಿಂದ ಹೊರಗುಳಿಯಬೇಕಾಯಿತು ಎಂದು ಮಾಧ್ಯಮ ವರದಿಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್’
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.