Adalat: ಸೆ.9ಕ್ಕೆ ರಾಷ್ಟ್ರೀಯ ಅದಾಲತ್
Team Udayavani, Aug 20, 2023, 11:28 PM IST
ಬೆಂಗಳೂರು: ಸೆಪ್ಟಂಬರ್ 9ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಕೋರ್ಟ್‌ಗಳಲ್ಲಿ ವಿಚಾರಣ ಹಂತದಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಬೆಂಗಳೂರು ನಗರ ಪ್ರಧಾನ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮುರಳೀಧರ ಪೈ ತಿಳಿಸಿದ್ಧಾರೆ.
ಈ ಕುರಿತು ನಗರದ ಸಿವಿಲ್ ಕೋರ್ಟ್ ಆವರಣಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವವರು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಅಲ್ಲದೆ ಅದಾಲತ್‌ನಲ್ಲಿ ಉಭಯ ಪಕ್ಷಗಾರರಿಗೆ ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುತ್ತದೆ ಎಂದರು.
ಶೇ.50 ರಿಯಾಯಿತಿ ಸೆ.9ಕ್ಕೆ ಅಂತ್ಯ
ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಬಾಕಿ ಪ್ರಕರಣಗಳಿಗೆ ಶೇ.50 ರಿಯಾಯಿತಿ ದರದಲ್ಲಿ ಶುಲ್ಕ ಪಾವತಿ ಮಾಡುವುದಕ್ಕೆ ನೀಡಿದ್ದ ಅವಕಾಶ ಇದೇ ಸೆ.9ಕ್ಕೆ ಅಂತ್ಯಗೊಳ್ಳಲಿದೆ. ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರ ಸೂಚನೆ ಮೇರೆಗೆ ರಿಯಾಯಿತಿ ಶುಲ್ಕ ಪಾವತಿಗೆ ಸರಕಾರ ಆದೇಶ ನೀಡಿತ್ತು. ಈ ಆದೇಶವನ್ನು ಈಗಾಗಲೇ ಎರಡು ಬಾರಿ ವಿಸ್ತರಿಸಲಾಗಿದೆ. ಆದ್ದರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಮೊತ್ತ ಬಾಕಿ ಉಳಿಸಿಕೊಂಡಿರುವವರು ತತ್‌ಕ್ಷಣ ಪಾವತಿ ಮಾಡಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.