ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

Team Udayavani, Oct 19, 2021, 5:27 AM IST

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

ಉಡುಪಿ: ಪ್ರಾದೇಶಿಕ ಸಾರಿಗೆ ಇಲಾಖೆ ಯಿಂದ ಈ ವರ್ಷದ ಸೆಪ್ಟಂಬರ್‌ ತಿಂಗಳಿನ ಮಾಸದಲ್ಲಿ 13,70,97,192ರೂ. ರಾಜಸ್ವ ಸಂಗ್ರಹ ಮಾಡುವ ಮೂಲಕ ಶೇ.108.56 ಸಾಧನೆ ಮಾಡಲಾಗಿದೆ.

ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ ಕುಂಠಿತ ಗೊಂಡಿದ್ದ ರಾಜಸ್ವ ಸಂಗ್ರಹ ಅನಂತರದ ದಿನಗಳಲ್ಲಿ ವಿಪರೀತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿದೆ. ಈ ವರ್ಷದ ಎಪ್ರಿಲ್‌ನಿಂದ ಸೆಪ್ಟಂಬರ್‌ ತಿಂಗಳವರೆಗೆ 57,03,40,298ರೂ. ರಾಜಸ್ವ ಸಂಗ್ರಹಿಸಲಾಗಿದೆ.

ತೆರಿಗೆ ವಸೂಲಾತಿಯೂ ಪ್ರಗತಿ
ವಾಹನಗಳ ತನಿಖೆಯಿಂದ ಮೂರು ವಾಹನಗಳ ಮುಟ್ಟುಗೋಲು ಸಹಿತ ಒಟ್ಟು 206 ವಾಹನಗಳಿಗೆ ತನಿಖಾ ವರದಿ ನೀಡಿ 7,97,900 ರೂ. ದಂಡ ವಸೂಲಿ ರೂಪದಲ್ಲಿ ಹಾಗೂ 10,31,628ರೂ. ತೆರಿಗೆ ವಸೂಲಿ ಮಾಡಲಾಗಿದೆ.

ಸರೆಂಡರ್‌ನಲ್ಲಿ 511 ವಾಹನ
ಒಟ್ಟು 511 ವಾಹನಗಳು ಸರೆಂಡರ್‌ನಲ್ಲಿವೆ. ನೋಂದಣಿಯಾಗಿ ಚಾಲ್ತಿಯಲ್ಲಿರುವ ವಾಹನಗಳಲ್ಲಿ 3,58,401 ದ್ವಿಚಕ್ರ ವಾಹನ, 67,941 ಕಾರು, 1,102 ಬಸ್‌, 147 ಪ್ರವಾಸಿ ವಾಹನಗಳು, 21,954 ಆಟೋ ರಿಕ್ಷಾ, 20,473 ಸರಕು ವಾಹನಗಳು, 188 ಆಸ್ಪತ್ರೆ ವಾಹನ, 958 ಶಾಲಾ ವಾಹನಗಳಿವೆ.

ಇದನ್ನೂ ಓದಿ:ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಜಾಗತಿಕ ಮಟ್ಟದಲ್ಲಿ ಸೆಮಿಕಂಡಕ್ಟರ್‌ ಉತ್ಪಾದನೆ ಕೊರತೆಯಿಂದಾಗಿ ಆರ್‌ಟಿಒ ಕಚೇರಿಯಲ್ಲಿ ಡಿಎಲ್‌, ಆರ್‌ಸಿ ಪಡೆಯಲು ಕೆಲವು ತಿಂಗಳಿನಿಂದ ಸಮಸ್ಯೆ ಎದುರಾಗಿತ್ತು. ಈಗ ಈ ಸಮಸ್ಯೆ ತಕ್ಕ ಮಟ್ಟಿಗೆ ಬಗೆಹರಿದಿದ್ದು, ಬಾಕಿ ಇರಿಸಿಕೊಂಡವರಿಗೆ ಡಿಎಲ್‌ ಹಾಗೂ ಆರ್‌ಸಿ ನೀಡಲಾಗುತ್ತಿದೆ. ಆದರೂ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ ಈ ಸಮಸ್ಯೆ ಇತ್ಯರ್ಥವಾದರೆ ತ್ವರಿತಗತಿಯಲ್ಲಿ ಪರವಾನಿಗೆ ನೀಡಲು ಸಾಧ್ಯವಾಗಲಿದೆ ಎಂದು ಆರ್‌ಟಿಒ ಅಧಿಕಾರಿಗಳು ತಿಳಿಸಿದ್ದಾರೆ.

5 ಲಕ್ಷಕ್ಕೂ ಅಧಿಕ ಮಂದಿಗೆ ಚಾಲನಾ ಪರವಾನಿಗೆ
3,501 ಮಂದಿಗೆ ಸೆಪ್ಟಂಬರ್‌ ತಿಂಗಳಿನಲ್ಲಿ ಚಾಲನಾ ಪರವಾನಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 5,71,632 ಮಂದಿ ಚಾಲನಾ ಪರವಾನಿಗೆಯನ್ನು ಹೊಂದಿದ್ದಾರೆ. ದಿನಂಪ್ರತಿ 300ಕ್ಕೂ ಅಧಿಕ ಮಂದಿಗೆ ಹೊಸದಾಗಿ ಪರವಾನಿಗೆ ಪಡೆ ಯಲು ಆರ್‌ಟಿಒ ಕಚೇರಿಗೆ ಬರುತ್ತಿದ್ದಾರೆ.

ಉತ್ತಮ ಪ್ರಗತಿ
ರಾಜಸ್ವ ಸಂಗ್ರಹ ಹಾಗೂ ಡಿಎಲ್‌ ಪಡೆದುಕೊಳ್ಳುವವರ ಸಂಖ್ಯೆ ದಿನಂಪ್ರತಿ ಹೆಚ್ಚಳವಾಗುತ್ತಿದೆ. ಸೆಪ್ಟಂಬರ್‌ ತಿಂಗಳೊಂದರಲ್ಲಿ 13 ಕೋ.ರೂ.ಗೂ ಅಧಿಕ ರಾಜಸ್ವ ಸಂಗ್ರಹಿಸಲಾಗಿದೆ.
-ಜೆ.ಪಿ. ಗಂಗಾಧರ, ಪ್ರಾದೇಶಿಕ ಸಾರಿಗೆ ಅಧಿಕಾರಿ

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.