ರಾಮನಗರ ಜೈಲಿಗೆ ಸ್ಥಳಾಂತರ: ಸರ್ಕಾರ ಸ್ಪಷ್ಟನೆ
Team Udayavani, Apr 29, 2020, 6:46 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಪಾದರಾಯನಪುರ ಗಲಭೆ ಆರೋಪಿಗಳಲ್ಲಿ ಐವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಾಗೂ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಿದ್ದ ಕಾರಣಕ್ಕೆ ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಬೇಕಾಯಿತು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಪಾದರಾಯನಪುರದ ದಾಳಿಕೋರರ ಮೇಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ, ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ಗೆ ನಿರ್ದೇಶಿಸುವಂತೆ ಕೋರಿ ವಕೀಲೆ ಗೀತಾ ಮಿಶ್ರಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್.ಓಕಾ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರಿ ವಕೀಲ ವಿಕ್ರಂ ಹುಯಿಲಗೋಳ ಅವರು ಲಿಖೀತ ಹೇಳಿಕೆ ಸಲ್ಲಿಸಿ ಈ ಮಾಹಿತಿ ನೀಡಿದರು.ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳ ಪೈಕಿ ಐವರಿಗೆ ಕೊರೋನಾ ಸೋಂಕು ಪತ್ತೆಯಾಗಿತ್ತು. ಇದರಿಂದ 121 ಆರೋಪಿಗಳನ್ನು ಕ್ವಾರಂಟೈನ್ ಮಾಡಲಾಯಿತು. ಬೆಂಗಳೂರಿನ ಜೈಲಿನಲ್ಲಿ
4,526 ಕೈದಿಗಳನ್ನಿಡಬಹುದು. ಆದರೆ ಈಗಾಗಲೇ ಜೈಲಿನಲ್ಲಿ 4,914 ಕೈದಿಗಳನ್ನು ಇರಿಸಲಾಗಿದೆ. ಹೀಗಾಗಿ, ಪಾದರಾಯನಪುರದ ಆರೋಪಿಗಳನ್ನು ರಾಮನಗರ ಜೈಲಿನಲ್ಲಿ
ಕ್ವಾರಂಟೈನ್‌ನಲ್ಲಿಡಲಾಗಿತ್ತು ಎಂದು ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು. ಈ ಹೇಳಿಕೆ ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.