ಜೀರ್ಣೋದ್ಧಾರಗೊಂಡ 200 ವರ್ಷ ಹಳೆಯ ಮುಂಬಯಿ ವಾಲ್ಕೇಶ್ವರ ಶ್ರೀ ಕಾಶೀ ಮಠ ಉದ್ಘಾಟನೆ

ಕಾಶೀ ಮಠಾಧೀಶರಿಂದ ಇಂದು ಉದ್ಘಾಟನೆ

Team Udayavani, Feb 29, 2024, 6:30 AM IST

ಜೀರ್ಣೋದ್ಧಾರಗೊಂಡ 200 ವರ್ಷ ಹಳೆಯ ಮುಂಬಯಿ ವಾಲ್ಕೇಶ್ವರ ಶ್ರೀ ಕಾಶೀ ಮಠ ಉದ್ಘಾಟನೆ

ಮಣಿಪಾಲ /ಮುಂಬಯಿ: ಸಮಗ್ರ ಜೀರ್ಣೋದ್ಧಾರಗೊಂಡ ವಾಲ್ಕೇಶ್ವರ ಶ್ರೀ ಕಾಶೀ ಮಠದ ಉದ್ಘಾಟನ ಸಮಾರಂಭವು ಫೆ. 29ರಂದು ನೆರವೇರಲಿದೆ.

ಫೆ. 29ರಂದು ಬೆಳಗ್ಗೆ 10 ಗಂಟೆಗೆ ಶ್ರೀಮತ್‌ ಸಂಯಮೀಂದ್ರತೀರ್ಥ ಶ್ರೀಗಳು ನೂತನ ಮಠ ವನ್ನು ಉದ್ಘಾಟಿಸಲಿದ್ದಾರೆ. ಉದ್ಘಾ ಟನ ಸಮಾ ರಂಭದ ಪ್ರಯುಕ್ತ ಫೆ. 28ರಿಂದ ಮಾ.9ರ ವರೆಗೆ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳನ್ನು ಸ್ವಾಮೀಜಿಯವರ ಮಾರ್ಗದರ್ಶನ ದಲ್ಲಿ ಹಮ್ಮಿ ಕೊಳ್ಳಲಾಗಿದೆ.

18ನೇ ಶತಮಾನದಲ್ಲಿ ಸ್ಥಾಪನೆ
ವಾಲ್ಕೇಶ್ವರ ಶ್ರೀ ಕಾಶೀ ಮಠವು 18ನೇ ಶತಮಾನ ದಲ್ಲಿ ಸ್ಥಾಪನೆಗೊಂಡಿದ್ದು, ತನ್ನದೇ ಆದ ಇತಿಹಾಸ ಹೊಂದಿ ಧಾರ್ಮಿಕ ಕೇಂದ್ರವಾಗಿ ಬೆಳೆದು ನಿಂತಿದೆ. ಕಾಶೀ ಮಠದ 7ನೇ ಯತಿಗಳಾದ ಶ್ರೀಮತ್‌ ಮಾಧವೇಂದ್ರತೀರ್ಥ ಸ್ವಾಮೀಜಿ ಹಾಗೂ 18ನೇ ಯತಿಗಳಾದ ಶ್ರೀಮತ್‌ ವರದೇಂದ್ರತೀರ್ಥ ಸ್ವಾಮೀಜಿಗಳ ವೃಂದಾವನಗಳು ಇಲ್ಲಿವೆ.

ಪ್ರತೀ ವರ್ಷ ಮುಂಬಯಿ ಕಿಂಗ್ಸ್‌ ಸರ್ಕಲ್‌ನ ಜಿಎಸ್‌ಬಿ ಸೇವಾ ಮಂಡಲದ ಗಣೇಶೋತ್ಸವವು ನಡೆಯುವ ವೇಳೆ ಶ್ರೀಮತ್‌ ಮಾಧವೇಂದ್ರತೀರ್ಥ ಶ್ರೀಗಳ ವೃಂದಾವನದ ಮುಂದೆ ತೆಂಗಿನ ಕಾಯಿಯನ್ನು ಇರಿಸಿ ಪ್ರಾರ್ಥನೆ ಸಲ್ಲಿಸಿ ಬಳಿಕ ಅದನ್ನು ಗಣಪತಿ ವಿಗ್ರಹದೊಂದಿಗೆ ಇರಿಸುವ ಕ್ರಮವಿದೆ.

ಶ್ರೀಮತ್‌ ಮಾಧವೇಂದ್ರತೀರ್ಥ ಶ್ರೀಗಳು ವಿಶಿಷ್ಟ ಸಿದ್ಧಿಯ ಯೋಗಿ ಹಾಗೂ ತಪಸ್ವಿಗಳಾಗಿದ್ದರು. ಇವರ ಖ್ಯಾತಿ ಮತ್ತು ಮಹಿಮೆ ಅಪ್ರತಿಮವಾದದ್ದು. ವಾಲ್ಕೇಶ್ವರ ಶ್ರೀ ಕಾಶೀ ಮಠವು ಇವರಿಂದಲೇ ಸ್ಥಾಪನೆಗೊಂಡಿತ್ತು. ಶ್ರೀಮತ್‌ ವರದೇಂದ್ರತೀರ್ಥ ಶ್ರೀಗಳು ಮಂತ್ರಸಿದ್ಧಿ ಪಡೆದಿ ದ್ದರು, 14 ಭಾಷೆ ಗಳನ್ನು ಬಲ್ಲವರಾಗಿದ್ದರು. ಗಣಿತ, ಜೋತಿಷ, ಹಸ್ತ ರೇಖಾ ಶಾಸ್ತ್ರ ಹಾಗೂ ಆಯುರ್ವೇದ ವಿದ್ವಾಂಸ ರಾಗಿದ್ದರು. ತಾಂತ್ರಿಕ ಜ್ಞಾನ ಕೂಡ ಅಪಾರ ವಾಗಿತ್ತು. ಈ ವರ್ಷ ಶ್ರೀಮತ್‌ ಮಾಧವೇಂದ್ರತೀರ್ಥ ಶ್ರೀಗಳ ಜೀವಂತ ಸಮಾಧಿ ಪ್ರವೇಶದ 250ನೇ ವರ್ಷ.ಇದರೊಂದಿಗೆ ಶ್ರೀಮತ್‌ ವರದೇಂದ್ರತೀರ್ಥ ಶ್ರೀಗಳ 110ನೇ ಪುಣ್ಯತಿಥಿ ಆಚರಣೆಯೂ ಇದೆ.

2022ರಲ್ಲಿ ಶಂಕುಸ್ಥಾಪನೆ
ಶ್ರೀ ವಾಲ್ಕೇಶ್ವರ ಮಠದ ಸಮಗ್ರ ಜೀರ್ಣೋದ್ಧಾರಕ್ಕೆ ಶ್ರೀ ಕಾಶೀ ಮಠಾಧೀಶರಾದ ಶ್ರೀಮತ್‌ ಸಂಯಮೀಂದ್ರತೀರ್ಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ 2022ರ ಮೇ ತಿಂಗಳಿನಲ್ಲಿ ಶಂಕುಸ್ಥಾಪನೆ ನೆರವೇರಿತ್ತು. ಈಗ ಸುಮಾರು 22,000 ಚದರ ಅಡಿಗಳ ಭವ್ಯವಾದ ಕಟ್ಟಡ ನಿರ್ಮಾಣಗೊಂಡಿದೆ.

 

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.