370ನೇ ವಿಧಿ ರದ್ದು: ಸುಪ್ರೀಂ ವಿಚಾರಣೆ ಆರಂಭ
Team Udayavani, Aug 3, 2023, 7:52 AM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಬುಧವಾರ ಸುಪ್ರೀಂ ಕೋರ್ಟ್ ಆರಂಭಿಸಿದೆ. ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಸಂಜೀವ್ ಖನ್ನಾ, ನ್ಯಾ. ಬಿ.ಆರ್.ಗವಾಯ್ ಮತ್ತು ನ್ಯಾ. ಸೂರ್ಯಕಾಂತ್ ಅವರಿದ್ದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು, ಪ್ರತಿದಿನದ ಆಧಾರದಲ್ಲಿ ವಿಚಾರಣೆ ನಡೆಸಲು ಅರ್ಜಿಗಳನ್ನು ಕೈಗೆತ್ತಿಕೊಂಡಿದೆ. ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ, ಪ್ರತಿದಿನ ಈ ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ಈ ಹಿಂದೆ ನ್ಯಾಯಪೀಠ ಹೇಳಿತ್ತು.
“ನ್ಯಾಯಾಲಯವು ಅರ್ಜಿದಾರರ ಪರವಾಗಿ ಪ್ರಮುಖ ನ್ಯಾಯವಾದಿಗೆ ಎಲ್ಲಾ ಅಂಶಗಳ ಮೇಲೆ ವಾದಿಸಲು ಅವಕಾಶ ನೀಡುತ್ತದೆ ಮತ್ತು ಉಳಿದ ನ್ಯಾಯವಾದಿಗಳು ಕೆಲವು ಅಂಶಗಳನ್ನು ಸೇರಿಸಬಹುದು. ಇದರಿಂದ ಯಾವುದೇ ಅಂಶಗಳು ಪುನರಾವರ್ತನೆ ಆಗುವುದಿಲ್ಲ” ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ಹೇಳಿದರು. ಅರ್ಜಿದಾರರ ಪರವಾಗಿ ಪ್ರಮುಖ ನ್ಯಾಯವಾದಿಯಾಗಿ ವಾದ ಮಂಡಿಸಲಿರುವ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್, “ಭಾರತದಲ್ಲಿ ಜಮ್ಮು ಮತ್ತು ಕಾಶ್ಮೀರದ ಏಕೀಕರಣವು ಪ್ರಶ್ನಾತೀತವಾಗಿದೆ, ಈ ಹಿಂದೆಯೂ ಪ್ರಶ್ನಾತೀತವಾಗಿತ್ತು ಹಾಗೂ ಯಾವಾಗಲೂ ಪ್ರಶ್ನಾತೀತವಾಗಿಯೇ ಉಳಿಯಲಿದೆ” ಎಂದು ಹೇಳಿದರು.
2019ರ ಆ.5ರಂದು, ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದುಪಡಿಸಿತ್ತು. ಅಲ್ಲದೇ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಗಂಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.