ತ.ನಾಡಿಗೆ 5,600 ಕೋಟಿ ರೂ. ಪರಿಹಾರ ನೀಡಬಹುದೇ?

ಕೇಂದ್ರ ಸರ್ಕಾರಕ್ಕೆ ಮದ್ರಾಸ್‌ ಹೈಕೋರ್ಟ್‌ ಪ್ರಶ್ನೆ

Team Udayavani, Aug 22, 2021, 10:50 PM IST

ತ.ನಾಡಿಗೆ 5,600 ಕೋಟಿ ರೂ. ಪರಿಹಾರ ನೀಡಬಹುದೇ?

ನವದೆಹಲಿ: 1962ರ ನಂತರ ಲೋಕಸಭೆಯಲ್ಲಿ ತಮಿಳುನಾಡು ರಾಜ್ಯಕ್ಕೆ ಸಿಗಬೇಕಾದ ಪ್ರಾತಿನಿಧ್ಯ ಸಿಗದೇ ಇರುವುದರಿಂದ ಆ ರಾಜ್ಯಕ್ಕೆ 5,600 ಕೋಟಿ ರೂ. ಪರಿಹಾರವನ್ನು ನೀಡಬಹುದೇ ಎಂದು ಕೇಂದ್ರ ಸರ್ಕಾರವನ್ನು ಮದ್ರಾಸ್‌ ಹೈಕೋರ್ಟ್‌ ಪ್ರಶ್ನಿಸಿದೆ.

ಆ.17ರಂದು ನಡೆದ ವಿಚಾರಣೆ ವೇಳೆ, ತಮ್ಮಲ್ಲಿ ಜನಸಂಖ್ಯೆ ನಿಯಂತ್ರಿಸಿ, ದೇಶದ ಅಭಿವೃದ್ಧಿಗೆ ಸಹಾಯ ಮಾಡಿದ ದಕ್ಷಿಣ ಭಾರತದ ರಾಜ್ಯಗಳಿಗೆ, ಅದರಲ್ಲೂ ವಿಶೇಷವಾಗಿ ತಮಿಳುನಾಡು, ಆಂಧ್ರಪ್ರದೇಶಗಳಿಗೆ ಲೋಕಸಭೆಯಲ್ಲಿ ಸಂಸದರ ಸ್ಥಾನ ಕಡಿಮೆ ಮಾಡಲಾಗಿದೆ. ಆದರೆ, ಜನಸಂಖ್ಯೆ ಕಡಿಮೆ ಮಾಡಿಕೊಳ್ಳದ ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ ರಾಜ್ಯಗಳಿಗೆ ಲೋಕಸಭೆಯಲ್ಲಿ ಹೆಚ್ಚು ಸ್ಥಾನಗಳನ್ನು ನೀಡಲಾಗಿದೆ ಎಂದು ನ್ಯಾ. ಕಿರುಬಾಕರನ್‌ ಹಾಗೂ ನ್ಯಾ. ಬಿ. ಪುಗಳೇಂದಿ ಅವರುಳ್ಳ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಭಾರತೀಯರಿನ್ನು ಯುಎಇಗೆ ಪ್ರವಾಸ ಹೋಗಬಹುದು

“ತಮಿಳುನಾಡು ಹಾಗೂ ಆಂಧ್ರಪ್ರದೇಶ ಸರ್ಕಾರಗಳು, ದಶಕಗಳ ಹಿಂದೆಯೇ ತಮ್ಮ ರಾಜ್ಯಗಳಲ್ಲಿ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತಂದಿವೆ. ಅದರಂತೆ, 1962ರಲ್ಲಿ ಲೋಕಸಭೆಯಲ್ಲಿ ತಮಿಳುನಾಡಿಗೆ ಇದ್ದ 41 ಸಂಸದರ ಕೋಟಾವನ್ನು 1967ರ ಹೊತ್ತಿಗೆ 39ಕ್ಕೆ ಇಳಿಸಲಾಗಿದೆ. ಐದು ವರ್ಷಗಳಲ್ಲಿ ಒಬ್ಬ ಸಂಸದನಿಂದ ರಾಜ್ಯಕ್ಕೆ ಸಿಗುವ ಸೌಕರ್ಯಗಳನ್ನು 200 ಕೋಟಿ ರೂ. ಎಂದಿಟ್ಟುಕೊಂಡರೆ, ಎರಡು ಸಂಸದರ ಸ್ಥಾನ ಖೋತಾ ಅನುಭವಿಸಿದ ತಮಿಳುನಾಡಿಗೆ ಐದು ವರ್ಷದಲ್ಲಿ 400 ಕೋಟಿ ರೂ. ನಷ್ಟವಾಗುತ್ತದೆ. 1967ರಿಂದ ಇಲ್ಲಿಯವರೆಗೆ ಲೆಕ್ಕಹಾಕಿದರೆ, 5,600 ಕೋಟಿ ರೂ. ನಷ್ಟವನ್ನು ತಮಿಳುನಾಡು ಅನುಭವಿಸಿದ್ದು, ಅಷ್ಟು ಹಣವನ್ನು ಕೇಂದ್ರ ಪರಿಹಾರವಾಗಿ ನೀಡಬಹುದೇ” ಎಂದು ನ್ಯಾಯಪೀಠ ಕೇಳಿದೆ.

ಇದಲ್ಲದೆ, ಎರಡು ಸಲಹೆಗಳನ್ನೂ ಕೇಂದ್ರದ ಮುಂದಿಟ್ಟಿರುವ ಹೈಕೋರ್ಟ್‌, ಲೋಕಸಭೆಯಲ್ಲಿ ಹೀಗೆ ಇಳಿಕೆ ಮಾಡಿದ ಸೀಟುಗಳನ್ನು ರಾಜ್ಯಸಭೆಯಲ್ಲಿ ತುಂಬಿಸಿಕೊಡಲು ಅವಕಾಶ ಕಲ್ಪಿಸಬಹುದು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ರಾಜ್ಯಗಳ ಲೋಕಸಭಾ ಸಂಸದರ ಸ್ಥಾನಗಳನ್ನು ಪರಿಷ್ಕರಿಸಲು ಅವಕಾಶ ಕಲ್ಪಿಸುವ ಸಂವಿಧಾನದ 81ನೇ ಪರಿಚ್ಛೇದಕ್ಕೆ ತಿದ್ದುಪಡಿ ತರಬಹುದು ಎಂದೂ ತಿಳಿಸಿದೆ.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.