ಸಂಪನ್ಮೂಲ ಸಮಾಧಾನ; ರಾಜ್ಯದ ಸಂಪನ್ಮೂಲ ಕ್ರೋಡೀಕರಣದಲ್ಲಿ ಚೇತರಿಕೆ

ಡಿಸೆಂಬರ್‌ ಅಂತ್ಯಕ್ಕೆ ಬಜೆಟ್‌ ಗುರಿ ಶೇ. 80 ಸಾಧನೆ

Team Udayavani, Jan 16, 2022, 7:40 AM IST

ಸಂಪನ್ಮೂಲ ಸಮಾಧಾನ; ರಾಜ್ಯದ ಸಂಪನ್ಮೂಲ ಕ್ರೋಡೀಕರಣದಲ್ಲಿ ಚೇತರಿಕೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ಸಂಪನ್ಮೂಲ ಕ್ರೋಡೀಕರಣದಲ್ಲಿ ಕರ್ನಾಟಕ ಸಮಾಧಾನಕರ ಹೆಜ್ಜೆ ಇರಿಸುತ್ತಿದೆ. ಎಪ್ರಿಲ್‌ನಿಂದ ಆರಂಭಗೊಂಡು ಡಿಸೆಂಬರ್‌ವರೆಗೆ ಕಳೆದ ಬಜೆಟ್‌ನಲ್ಲಿ ಹಾಕಿಕೊಳ್ಳಲಾಗಿದ್ದ ಗುರಿಯ ಶೇ. 75ರಷ್ಟು ಸಂಪನ್ಮೂಲ ಸಂಗ್ರಹವಾಗಿದ್ದು, ಆರ್ಥಿಕ ಚೇತರಿಕೆಯಲ್ಲಿ ಗಮನಾರ್ಹ ಪ್ರಗತಿ ಕಾಣಿಸಿದೆ.

ಪ್ರಸಕ್ತ ಆರ್ಥಿಕ ವರ್ಷದ ಆರಂಭದಲ್ಲೇ ಕೊರೊನಾ ಎರಡನೇ ಅಲೆ ಕರ್ನಾಟಕವನ್ನು ಬಾಧಿಸಿತ್ತು. ಆದರೆ ಈ ಅಲೆಯ ಸಂಕಷ್ಟವನ್ನು ಯಶಸ್ವಿಯಾಗಿ ದಾಟಿರುವ ಕರ್ನಾಟಕ ಪ್ರಸಕ್ತ ಆರ್ಥಿಕ ವರ್ಷದ ಬಜೆಟ್‌ ಗುರಿ ಮುಟ್ಟುವ ನಿಟ್ಟಿನಲ್ಲಿ ಮುನ್ನಡೆದಿದೆ.

ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ, ಮುದ್ರಾಂಕ ಮತ್ತು ಮೋಟಾರು ವಾಹನಗಳ ತೆರಿಗೆ ಸಂಗ್ರಹದಲ್ಲಿ ತೃಪ್ತಿದಾಯಕ ಪ್ರಗತಿ ಆಗಿದೆ. ಬಜೆಟ್‌ನಲ್ಲಿ ಪ್ರಸ್ತಾವಿಸಲಾಗಿದ್ದ ಗುರಿಯ ಶೇ. 70ರಿಂದ ಶೇ. 80ರಷ್ಟು

ಸಾಧನೆಯಾಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ. ಪ್ರಸಕ್ತ ಆರ್ಥಿಕ ವರ್ಷ ಮುಗಿಯಲು ಇನ್ನೂ ಮೂರು ತಿಂಗಳು ಬಾಕಿಯಿದ್ದು, ಆ ಹೊತ್ತಿಗೆ ಮತ್ತಷ್ಟು ಸಂಪನ್ಮೂಲ ಕ್ರೋಡೀಕರಣವಾಗಬಹುದು ಎಂದು ಸರಕಾರ ಅಂದಾಜಿಸಿದೆ.

ನೋಂದಣಿ ಮತ್ತು ಮುದ್ರಾಂಕ
ರಾಜ್ಯದ ಆರ್ಥಿಕತೆಗೆ ಹೆಚ್ಚಿನ ಆದಾಯ ಒದಗಿಸಿರುವುದು ನೋಂದಣಿ ಮತ್ತು ಮುದ್ರಾಂಕ ಇಲಾಖೆ. ಈ ವರ್ಷ ರಿಯಲ್‌ ಎಸ್ಟೇಟ್‌ ಉದ್ಯಮ ಸಾಕಷ್ಟು ಚೇತರಿಸಿಕೊಂಡಿದೆ ಎಂಬುದು ಈ ವಲಯದ ತಜ್ಞರ ಮಾತು. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳುಗಳಲ್ಲಿ ಈ ವಲಯದಲ್ಲಿ 9,500 ಕೋಟಿ ರೂ. ಆದಾಯ ಸಂಗ್ರಹ ಗುರಿ ಹಾಕಿಕೊಳ್ಳಲಾಗಿತ್ತು. ವಿಶೇಷವೆಂದರೆ, ಈ ಗುರಿ ದಾಟಿ ಹೆಚ್ಚುವರಿಯಾಗಿ 259 ಕೋ.ರೂ. ಸಂಗ್ರಹವಾಗಿದೆ. ಇಡೀ ವರ್ಷಕ್ಕೆ 12,655 ಕೋಟಿ ರೂ. ಗುರಿ ಇರಿಸಿಕೊಳ್ಳಲಾಗಿದೆ. ಈ ಲೆಕ್ಕಾಚಾರದಲ್ಲಿ ಶೇ. 75ಕ್ಕಿಂತ ಅಧಿಕ ಆದಾಯ ಸಂಗ್ರಹವಾಗಿದೆ. ಉಳಿದ ಮೂರು ತಿಂಗಳುಗಳಲ್ಲಿ ಇನ್ನೂ ಹೆಚ್ಚು ಸಂಪನ್ಮೂಲ, ಅಂದರೆ ಶೇ. 85ಕ್ಕಿಂತಲೂ ಹೆಚ್ಚು ಗುರಿ ತಲುಪಬಹುದು ಎಂದು ತಜ್ಞರು ಹೇಳುತ್ತಾರೆ.

ಈ ವಲಯ ಮೊದಲ ಮೂರು ತಿಂಗಳು ಕೊಂಚ ಹಿನ್ನಡೆ ಕಂಡಿತ್ತು. ಆದರೆ ಕೊರೊನಾ ಎರಡನೇ ಅಲೆಯ ಅನಂತರ ಸಾಕಷ್ಟು ಚೇತರಿಸಿಕೊಂಡಿದೆ. ಈ ಆರು ತಿಂಗಳಲ್ಲಿ 7 ಸಾವಿರ ಕೋಟಿ ರೂ. ಬಂದಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಹೆಚ್ಚು ಆಸ್ತಿಗಳ ನೋಂದಣಿಯಾಗಿದೆ ಎಂದು ಸರಕಾರದ ಮೂಲಗಳು ಹೇಳಿವೆ.

ಜ. 1ರಿಂದ ಮಾರ್ಗದರ್ಶಿ ಶುಲ್ಕದಲ್ಲಿ ಶೇ. 10ರಷ್ಟು ಕಡಿತ ಜಾರಿಗೊಳ್ಳಲಿದ್ದು, ಇದರಿಂದ ಇನ್ನೂ ಹೆಚ್ಚು ಆಸ್ತಿ ನೋಂದಣಿಯಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕೇವಲ 24,000 ಪ್ರೇಕ್ಷಕರಿಗೆ ಮಾತ್ರ ಅವಕಾಶ

ಅಬಕಾರಿ ಇಲಾಖೆ
ಕೊರೊನಾ ಕಾಲದಲ್ಲಿಯೂ ಉತ್ತಮ ಸಾಧನೆ ಮಾಡಿರುವ ಮತ್ತೂಂದು ಇಲಾಖೆ ಅಬಕಾರಿ. ಇಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳು 19,306.44 ಕೋಟಿ ರೂ. ಸಂಗ್ರಹವಾಗಿದೆ. ಇದು ಬಜೆಟ್‌ ಗುರಿಯ ಶೇ. 78.55ರಷ್ಟು. ಪ್ರಸಕ್ತ ಸಾಲಿನಲ್ಲಿ 24,580 ಕೋಟಿ ರೂ. ಆದಾಯ ಸಂಗ್ರಹದ ಗುರಿ ಹೊಂದಲಾಗಿದೆ. 2020-21 ಆರ್ಥಿಕ ವರ್ಷದ ಮೊದಲ 9 ತಿಂಗಳುಗಳಿಗೆ ಹೋಲಿಸಿದರೆ, ಆದಾಯ ಶೇ. 15ರಷ್ಟು ಹೆಚ್ಚಳವಾಗಿದೆ.

ಒಂಬತ್ತು ತಿಂಗಳುಗಳಿಗೆ ಹೋಲಿಸಿದರೆ ಶೇಕಡಾವಾರು ಅಬಕಾರಿ ತೆರಿಗೆ ಸಂಗ್ರಹ ಸುಧಾರಣೆಯಾಗಿದೆಯಾದರೂ ಡಿಸೆಂಬರ್‌ನಲ್ಲಿ ಗುರಿ ಸಾಧನೆಯಲ್ಲಿ ಹಿನ್ನಡೆಯಾಗಿದೆ.

ಜಿಎಸ್‌ಟಿ ಸಂಗ್ರಹ
ಡಿಸೆಂಬರ್‌ನಲ್ಲಿ 6,075.10 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಐದಾರು ತಿಂಗಳುಗಳ ಸರಾಸರಿ ಸಂಗ್ರಹಕ್ಕೆ ಹೋಲಿಸಿದರೆ ಇಲ್ಲೂ ಚೇತರಿಕೆ ಕಾಣಿಸಿದೆ. ಮೋಟಾರು ವಾಹನ ತೆರಿಗೆ ಬಾಬಿ¤ನಿಂದ ಡಿಸೆಂಬರ್‌ವರೆಗೆ 5,635.10 ಕೋಟಿ ರೂ. ಗುರಿ ಹಾಕಿಕೊಳ್ಳಲಾಗಿತ್ತು. ಈ ಪೈಕಿ 4,575 ಕೋಟಿ ರೂ. ಸಂಗ್ರಹವಾಗಿ, ಶೇ. 81ರಷ್ಟು ಸಾಧನೆಯಾಗಿದೆ. ಪ್ರಸಕ್ತ ಸಾಲಿನಲ್ಲಿ 7,515.00 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ನಿಗದಿಪಡಿಸಲಾಗಿತ್ತು.

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಣಕಾಸು ಇಲಾಖೆ ಅಧಿಕಾರಿ ಗಳ ಸಭೆ ನಡೆಸಿ ಒಂಬತ್ತು ತಿಂಗಳುಗಳ ಪ್ರಗತಿ ಪರಿಶೀಲಿಸಿದ್ದರು ಮತ್ತು ಮುಂದಿನ ಮೂರು ತಿಂಗಳುಗಳಲ್ಲಿ ಬಜೆಟ್‌ ಗುರಿ ಮೀರಿ ಸಾಧನೆ ಮಾಡುವಂತೆ ಸೂಚನೆ ನೀಡಿದ್ದರು.ವಿವಿಧ ಇಲಾಖೆಗಳಲ್ಲಿ ಸೋರಿಕೆ ತಡೆಗಟ್ಟು ವಂತೆಯೂ ನಿರ್ದೇಶನ ನೀಡಿದ್ದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೊರೊನಾ ಆತಂಕದ ನಡುವೆಯೂ ರಾಜ್ಯದ ಸಂಪನ್ಮೂಲ ಕ್ರೋಡೀಕರಣ ಉತ್ತಮವಾಗಿದೆ. ಮುಂದಿನ ಮೂರು ತಿಂಗಳು ವ್ಯಾಪಾರ- ವಾಣಿಜ್ಯ ಚಟುವಟಿಕೆ- ಉದ್ದಿಮೆ ವಲಯಕ್ಕೆ ಅತ್ಯಂತ ಮಹತ್ವದ್ದು. ರಾಜ್ಯ ಸರಕಾರದ ನಿರ್ಬಂಧ ಅಥವಾ ಮಾರ್ಗಸೂಚಿ ಷರತ್ತುಗಳು ಈ ವಲಯನ್ನು ಬಾಧಿಸು ವಂತಿರಬಾರದು.
-ಆರ್‌.ಜಿ. ಮುರಳೀಧರ್‌, ಆರ್ಥಿಕ ತಜ್ಞ

ಕೊರೊನಾ ನಡುವೆಯೂ ರಿಯಲ್‌ ಎಸ್ಟೇಟ್‌ ವಲಯ ಚೇತರಿಕೆ ಕಾಣುತ್ತಿದ್ದು, ಇದಕ್ಕೆ ಸರಕಾರ ಮತ್ತಷ್ಟು ಉತ್ತೇಜನ ನೀಡಬೇಕಾಗಿದೆ. ಆಸ್ತಿ ಖರೀದಿಸಲು ಮಾರ್ಗಸೂಚಿ ದರದಲ್ಲಿ ಶೇ. 10 ರಿಯಾಯಿತಿ ಘೋಷಣೆ ಮಾಡಿದ್ದಾರೆ. ಈ ಅವಕಾಶವನ್ನು ಮಾರ್ಚ್‌ವರೆಗೆ ಮಾತ್ರ ಕಲ್ಪಿಸಿರುವುದರಿಂದ ಹೆಚ್ಚಿನ ಪ್ರಯೋಜನವಾಗದು.
– ಭಾಸ್ಕರ್‌, ಕ್ರೆಡೈ ಅಧ್ಯಕ್ಷ

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.