“ದೌರ್ಜನ್ಯಕ್ಕೆ ಒಳಗಾದವರ ನೋವಿಗೆ ಸ್ಪಂದಿಸಿ’


Team Udayavani, Apr 30, 2022, 6:40 AM IST

“ದೌರ್ಜನ್ಯಕ್ಕೆ ಒಳಗಾದವರ ನೋವಿಗೆ ಸ್ಪಂದಿಸಿ’

ಉಡುಪಿ: ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಮಾಹಿತಿ ಅಥವಾ ದೂರು ಬಂದಲ್ಲಿ ತತ್‌ಕ್ಷಣ ಸ್ಪಂದಿಸಿ ನೊಂದವರಿಗೆ ಆತ್ಮಸ್ಥೈರ್ಯ ತುಂಬಿ, ಸಾಂತ್ವನ ಹೇಳುವುದರ ಜತೆಗೆ ಕಾನೂನಿನ ನೆರವು ಒದಗಿಸು ಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಸೂಚನೆ ಅಧಿಕಾರಿಗಳಿಗೆ ನೀಡಿದರು.

ಜಿಲ್ಲಾಧಿಕಾರಿಯಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿ ಸಭೆಯ ಹಾಗೂ ಸಮಗ್ರ ಮಕ್ಕಳ ರಕ್ಷಣ ಘಟಕದ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೂರು ಸಮಿತಿ ಕಡ್ಡಾಯ
ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ. ಈವರೆಗೂ ಸಮಿತಿ ರಚಿಸದೇ ಇರುವ ಇಲಾಖೆ ಅಥವಾ ಸಂಸ್ಥೆಗಳ ವರದಿ ಪಡೆದು ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಮಕ್ಕಳ ವಿಶೇಷ ಪಾಲನೆಯಡಿ 346 ಫಲಾನುಭವಿಗಳಿಗೆ ಪ್ರತೀ ತಿಂಗಳು 1,000 ರೂ. ಸಹಾಯಧನವನ್ನು 18 ವರ್ಷ ಪೂರ್ಣಗೊಳ್ಳುವವರೆಗೆ ನೀಡಲಾಗುತ್ತಿದೆ. ಏಕ ಪೋಷಕ ಮಕ್ಕಳಿಗೆ, ಒಡೆದ ಕುಟುಂಬಗಳ ಹಾಗೂ ಲೈಂಗಿಕ ಕಾರ್ಯಕರ್ತರ ಮಕ್ಕಳಿಗೆ ಮತ್ತು ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಇಲಾಖೆಯಿಂದ ನೀಡುವ ಆರ್ಥಿಕ ಸೌಲಭ್ಯವು ಪ್ರತಿಯೊಬ್ಬರಿಗೂ ಸಿಗುವಂತೆ ನೋಡಿಕೊಳ್ಳಬೇಕು ಎಂದರು.

27 ಪೋಕ್ಸೋ ಪ್ರಕರಣ
ಜಿಲ್ಲೆಯಲ್ಲಿ 27 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು ಅವುಗಳಲ್ಲಿ 18 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಲಾಗಿದ್ದು 8 ಪ್ರಕರಣಗಳು ತನಿಖೆಯಲಿದ್ದು 1 ಪ್ರಕರಣವನ್ನು ಇತರ ಜಿಲ್ಲೆಗೆ ವರ್ಗಾಯಿಸಲಾಗಿದೆ. ಬಾಕಿ ಉಳಿದ 8 ಪ್ರಕರಣಗಳ ತನಿಖೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಬೇಕು. ಮಕ್ಕಳ ಕಲ್ಯಾಣ ಸಮಿತಿಯ ಮುಂದೆ 165 ಪ್ರಕರಣಗಳು ಪ್ರಸ್ತುತ ಸಾಲಿಗೆ ದಾಖಲಾಗಿದ್ದು ಬಾಕಿ ಉಳಿದು ಸೇರಿದಂತೆ 172 ಪ್ರಕರಣಗಳಲ್ಲಿ 163 ಪ್ರಕರಣಗಳು ಇತ್ಯರ್ಥಗೋಂಡಿದ್ದು 9 ಪ್ರಕರಣಗಳು ಸಮಿತಿಯ ಮುಂದೆ ಇವೆ. ಪ್ರಕರಣಗಳ ಸಂಖ್ಯೆ ಹೆಚ್ಚು ಆಗದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಎಎಸ್‌ಪಿ ಎಸ್‌.ಟಿ. ಸಿದ್ದಲಿಂಗಪ್ಪ, ಮನೋವೈದ್ಯ ಡಾ| ಪಿ.ವಿ. ಭಂಡಾರಿ, ಶಿಶು ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ, ಎನ್‌ಜಿಒಗಳ ಪದಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

28 ಹೆಣ್ಣುಮಕ್ಕಳು ಶಾಲೆಯಿಂದ ಹೊರಗೆ
ಜಿಲ್ಲೆಯ ಕೆಲವು ತಾಲೂಕುಗಳ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ 18 ವರ್ಷದೊಳಗಿನ ಹೆಣ್ಣು ಮಕ್ಕಳು ಪ್ರಸವ ಪೂರ್ವ ಸ್ಕ್ಯಾನಿಂಗ್‌ಗೆ ಬರುತ್ತಿದ್ದಾರೆ ಎಂಬ ಮಾಹಿತಿ ಇದೆ. ಬಾಲ್ಯವಿವಾಹ ಪ್ರಕರಣಗಳನ್ನು ಇತರ ಇಲಾಖೆ ಹಾಗೂ ಸಾರ್ವಜನಿಕರ ಸಹಾಯದಿಂದ ತಡೆಯಲು ಮುಂದಾಗಬೇಕು. ಜಿಲ್ಲೆಯಲ್ಲಿ 28 ಹೆಣ್ಣುಮಕ್ಕಳು ಶಾಲೆಯಿಂದ ಹೊರಗಿರುವುದು ಕಂಡುಬಂದಿದೆ. ಅವರಲ್ಲಿ ಕೊರಗ ಜನಾಂಗದ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚು. ಅವರು ಶಾಲೆಗೆ ಮರಳಿ ಬರುವಂತೆ ಮನವೊಲಿಸುವ ಕಾರ್ಯಕ್ಕೆ ಶಿಕ್ಷಣ ಇಲಾಖೆ ಜತೆಗೆ ವಿವಿಧ ಇಲಾಖೆಗಳು ಸಹಕರಿಸಬೇಕು ಎಂದರು.

ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಕ್ಕಳ ರಕ್ಷಣ ಸಮಿತಿ ರಚಿಸಿ, ಆಪ್ತ ಸಮಾಲೋಚಕರನ್ನು ಸಹ ನೇಮಿಸಬೇಕು. ಮಕ್ಕಳು ದೂರುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ದೂರು ಪೆಟ್ಟಿಗೆ ಸ್ಥಾಪಿಸಿ, ಅವುಗಳಲ್ಲಿನ ದೂರುಗಳ ಪರಿಶೀಲನೆಯನ್ನು ಉನ್ನತ ಮಟ್ಟದ ಅಧಿಕಾರಿಗಳು ಮಾಡುವಂತೆ ಆಗಬೇಕು.
-ಕೂರ್ಮಾ ರಾವ್‌ ಎಂ. ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.