![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 1, 2023, 10:03 PM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ಅ. 3ರಿಂದ ನಿರ್ಬಂಧ ವಿಧಿಸಲಾಗಿದೆ.
ಪ್ರಸ್ತುತ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಅ.3ರಿಂದ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಭಾರೀ ಮಳೆಯಿಂದ ಕಡಿದಾದ ಬೆಟ್ಟವನ್ನು ಏರಲು ಚಾರಣಿಗರಿಗೆ ಅತಿಯಾದ ಸಂಕಷ್ಟ ಮತ್ತು ಕಷ್ಟವಾಗುವ ಕಾರಣ ನಿರ್ಬಂಧ ವಿಧಿಸಲಾಗಿದೆ. ಇಲಾಖೆಯ ಈ ಆದೇಶಕ್ಕೆ ಚಾರಣಿಗರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಇಲಾಖೆ ವಿನಂತಿಸಿದೆ.
ಮೇ ತಿಂಗಳಿನಿಂದ ಸೆ.29ರ ತನಕ ಬಿರು ಬೇಸಗೆ ಮತ್ತು ಅಧಿಕ ಮಳೆಯ ಕಾರಣ ನಿರ್ಬಂಧ ವಿಧಿಸಲಾಗಿತ್ತು. ಶನಿವಾರದಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಮುಕ್ತ ಅವಕಾಶ ನೀಡಲಾಗಿತ್ತು. ಮೊದಲ ದಿನವೇ 750ಕ್ಕೂ ಹೆಚ್ಚಿನ ಚಾರಣಿಗರು ಕುಮಾರ ಪರ್ವತವೇರಲು ಆಗಮಿಸಿದ್ದರು. ಭಾನುವಾರವೂ ಭಾರೀ ಸಂಖ್ಯೆಯ ಚಾರಣಾಸಕ್ತರು ಕುಮಾರಪರ್ವತಕ್ಕೆ ತೆರಳಿದ್ದರು. ಆದರೆ ಈ ದಿನಗಳಲ್ಲಿ ಕುಕ್ಕೆ ಸೇರಿದಂತೆ ಬೆಟ್ಟ ಪ್ರದೇಶದಲ್ಲಿ ಅತ್ಯಧಿಕ ಮಳೆ ಸುರಿದ ಕಾರಣ ಚಾರಣಿಗರಿಗೆ ತೆರಳಲು ಕಷ್ಟವಾಗಿತ್ತು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.