Haryana: ಹರ್ಯಾಣದ ಕೆಲವೆಡೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ!
-ನೂಹ್ ಗಲಭೆಯ ನಂತರ 3 ಜಿಲ್ಲೆಗಳ 50ಕ್ಕೂ ಹೆಚ್ಚು ಪಂಚಾಯಿತಿಗಳಿಂದ ಪತ್ರ
Team Udayavani, Aug 10, 2023, 6:46 AM IST
ಚಂಡೀಗಢ: ಹರ್ಯಾಣದ ನೂಹ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೋಮುಗಲಭೆ ಬೆನ್ನಲ್ಲೇ, ಗ್ರಾಮಗಳಿಗೆ ಮುಸ್ಲಿಂ ವ್ಯಾಪಾರಿಗಳಿಗೆ ಪ್ರವೇಶ ನಿಷೇಧಿಸಿ ರಾಜ್ಯದ ಮೂರು ಜಿಲ್ಲೆಗಳ 50ಕ್ಕೂ ಹೆಚ್ಚು ಪಂಚಾಯತಿಗಳು ಆದೇಶ ಹೊರಡಿಸಿವೆ. ಆನ್‌ಲೈನ್‌ನಲ್ಲಿ ಈ ಕುರಿತ ಪತ್ರಗಳು ಜೋರಾಗಿ ಹರಿದಾಡುತ್ತಿರುವುದರಿಂದ ಪೊಲೀಸರೂ ತನಿಖೆ ಆರಂಭಿಸಿದ್ದಾರೆ.
ರೆವಾರಿ, ಮಹೇಂದ್ರಗಢ ಮತ್ತು ಜಜ್ಜರ್ ಜಿಲ್ಲೆಯ 50ಕ್ಕೂ ಹೆಚ್ಚು ಪಂಚಾಯಿತಿಗಳು ಇದೇ ರೀತಿಯ ಪತ್ರಗಳನ್ನು ಬರೆದಿದ್ದು, ಇದಕ್ಕೂ ಅಲ್ಲಿನ ಸರಪಂಚ್‌ಗಳು ಸಹಿ ಮಾಡಿದ್ದಾರೆ. ಅಲ್ಲದೇ, ಗ್ರಾಮಗಳಲ್ಲಿ ವಾಸಿಸುತ್ತಿರುವ ಮುಸ್ಲಿಮರು ಪೊಲೀಸರಿಗೆ ದಾಖಲೆಗಳನ್ನು ಸಲ್ಲಿಸಬೇಕು ಎಂದು ಈ ಪತ್ರಗಳಲ್ಲಿ ಸೂಚಿಸಲಾಗಿದೆ. ಈ ಪತ್ರಗಳಿಗೆ ಸಂಬಂಧಿಸಿದಂತೆ ಎಲ್ಲಾ ಸಂಬಂಧಪಟ್ಟ ಪಂಚಾಯಿತಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ನರ್ನಾಲ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿಭಾಗೀಯ ಕಚೇರಿಗಳಿಗೆ ಸೂಚಿಸಿದ್ದಾರೆ.
“ಎಲ್ಲಾ ಸಿಖ್, ಹಿಂದೂ ಅಂಗಡಿಗಳಲ್ಲಿ ಕೆಲಸ ಮಾಡುತ್ತಿರುವ ಮುಸ್ಲಿಂ ಉದ್ಯೋಗಿಗಳನ್ನು ತೆಗೆದುಹಾಕಲು ಅವರಿಗೆ ಎರಡು ದಿನಗಳ ಗಡುವು ನೀಡಿದ್ದೇವೆ. ಒಂದು ವೇಳೆ ಹಾಗೆ ಮಾಡದಿದ್ದರೆ ಅಂತಹ ಅಂಗಡಿಗಳನ್ನು ಬಹಿಷ್ಕರಿಸುತ್ತೇವೆ” ಎಂದು ಹಿಸಾರ್ ಪಂಚಾಯಿತಿಯ ಕೆಲವು ಸದಸ್ಯರು ಹೇಳಿದ್ದಾರೆ.
ಇನ್ನೊಂದೆಡೆ, ಹರ್ಯಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಸ್ಲಿಮರ ಹತ್ಯೆಗೆ ಹಾಗೂ ಅವರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಿಷ್ಕರಿಸುವಂತೆ ದ್ವೇಷ ಭಾಷಣಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಇದರ ವಿಚಾರಣೆ ವೇಳೆ, ಹಿರಿಯ ನ್ಯಾಯವಾದಿ ಕಪಿಲ್ ಸಿಬಾಲ್ ಅವರು ಗುರುಗ್ರಾಮ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.