Army: ನಿವೃತ್ತ ಮೇಜರ್ ಜನರಲ್ ಸಿ.ಕೆ.ಕರುಂಬಯ್ಯ ನಿಧನ
ಬಾಂಗ್ಲಾ ವಿಮೋಚನೆ ಯುದ್ಧದಲ್ಲಿ ಪಾಕ್ ಯೋಧರ ಶರಣಾಗತಿಗೆ ಕಾರಣರಾಗಿದ್ದರು
Team Udayavani, Jan 4, 2024, 10:55 PM IST
ಮೈಸೂರು: ನಿವೃತ್ತ ಮೇಜರ್ ಜನರಲ್ ಸಿ.ಕೆ.ಕರುಂಬಯ್ಯ(88) ಅವರು ಗುರುವಾರ ಬೆಳಗ್ಗೆ ತಾಲೂಕಿನ ಹೆಮ್ಮನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿಯಲ್ಲಿ 1936ರ ಡಿ.3ರಂದು ಜನಿಸಿದ್ದ ಕರುಂಬಯ್ಯ ಅವರ ತಂದೆ ಡಾ| ಸಿ.ಬಿ.ಕಾರಿಯಪ್ಪ. ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಹತ್ತಿರದ ಸಂಬಂಧಿ. ಮಡಿಕೇರಿಯ ಸೆಂಟ್ರಲ್ ಪ್ರೌಢಶಾಲೆ, ಸರ್ಕಾರಿ ಕಾಲೇಜಿನಲ್ಲಿ ಶಿಕ್ಷಣ ಪಡೆದ ಅವರು, 1957ರಲ್ಲಿ ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಅಕಾಡೆಮಿಗೆ ಸೇರಿದರು. ಮರಾಠ ಲಘು ಪದಾತಿದಳದ 5ನೇ ಬೆಟಾಲಿಯನ್‌ನಲ್ಲಿ ಸೇನಾ ಸೇವೆ ಆರಂಭಿಸಿದರು. ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾದ ಸೇನೆ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು. 1965ರ ಭಾರತ-ಪಾಕಿಸ್ಥಾನ ಯುದ್ಧದಲ್ಲಿ ರಾಜಸ್ಥಾನ ಗಡಿಯಲ್ಲಿ ಹೋರಾಟ ನಡೆಸಿ ಪಾಕ್‌ನ ಹಲವು ಗ್ರಾಮಗಳನ್ನು ವಶಪಡಿಸಿಕೊಂಡಿದ್ದರು.
1971ರ ಬಾಂಗ್ಲಾ ವಿಮೋಚನೆ ಯುದ್ಧದಲ್ಲಿ ಸಾವಿರಾರು ಪಾಕ್ ಯೋಧರ ಶರಣಾಗತಿಗೆ ಕಾರಣರಾಗಿದ್ದರು. ಅಲ್ಲದೆ ಮಗುರಾದಲ್ಲಿ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಪಾಕಿಸ್ಥಾನದ 300 ಟ್ರಕ್‌ಗಳನ್ನು ವಶಕ್ಕೆ ಪಡೆದಿದ್ದರು. ಅವರು ಮುನ್ನಡೆಸಿದ್ದ ಪಡೆಗೆ ರಾಷ್ಟ್ರಪತಿ ಗೌರವ ದೊರೆತಿತ್ತು. ಕರುಂಬಯ್ಯ ಅವರಿಗೆ ಸೇನಾ ಪದಕವೂ ಸಿಕ್ಕಿತ್ತು. 1972ರಲ್ಲಿ ಉತ್ತರ ಪ್ರದೇಶದ ಜಹಾಂಗೀರಾಬಾದ್ ದಂಗೆಯನ್ನು ಹತ್ತಿಕ್ಕಿದ್ದರು. ಸಿಕ್ಕಿಂನ ನಾತೂಲಾದಲ್ಲಿ ಇವರ ಬೆಟಾಲಿಯನ್ ಗೆ ಬ್ಲ್ಯಾಕ್ ಕ್ಯಾಟ್ ಟ್ರೋಫಿ ಪಡೆದುಕೊಂಡಿದ್ದರು.
ಮೃತರ ಅಂತ್ಯಕ್ರಿಯೆ ಶುಕ್ರವಾರ (ಜ.5) ಮಧ್ಯಾಹ್ನ ವಿಜಯನಗರದ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.