ಪ್ರವಾಸೋದ್ಯಮಕ್ಕೆ ಮರುಜೀವ


Team Udayavani, Jan 11, 2021, 7:19 PM IST

Revitalize tourism

ಚಿಕ್ಕಮಗಳೂರು: ಕೋವಿಡ್ ಸೋಂಕು, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ 2019ಕ್ಕೆ ಹೋಲಿಸಿದರೆ 2020ರಲ್ಲಿ ಕಡಿಮೆ ಸಂಖ್ಯೆಯ ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಿದ್ದರು.ಇದೀಗ ಲಾಕ್‌ಡೌನ್‌ ತೆರವಾದ ಬಳಿಕ ಪ್ರವಾಸೋದ್ಯಮ ಹಂತ- ಹಂತವಾಗಿ ಚಿಗುರೊಡೆಯತೊಡಗಿದೆ.

2019ರ ಜನವರಿ ತಿಂಗಳಿಂದ, ಡಿಸೆಂಬರ್‌ ಅಂತ್ಯದವರೆಗೂ ದೇಶ, ವಿದೇಶ, ಜಿಲ್ಲೆ, ಹೊರಜಿಲ್ಲೆ ಸೇರಿದಂತೆ 73,73,627 ಜನರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಇಲ್ಲಿಯ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಿದ್ದರು.

2020ರಲ್ಲಿ 31,05,408 ಜನರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. 2019ಕ್ಕೆ ಹೊಲಿಸಿದರೆ 42,68,219 ಜನ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. 2021ರ ಆರಂಭದಲ್ಲೇ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು ಪ್ರವಾಸೋದ್ಯಮದಲ್ಲಿ ಹರ್ಷದಾಯಕ ಬೆಳವಣಿಗೆ ಕಾಣಿಸುತ್ತಿದೆ.

2020ರ ಜನವರಿ ತಿಂಗಳಲ್ಲಿ ವಿದೇಶಿಯ 102 ಜನರು ಸೇರಿದಂತೆ 6,43,267 ಜನರು ಜಿಲ್ಲೆಗೆ ಭೇಟಿ ನೀಡಿದ್ದು, ಜಿಲ್ಲೆಯ ಶೃಂಗೇರಿ ಶಾರದಾಂಬಾ ದೇವಸ್ಥಾನ, ಹೊರನಾಡು ದೇವಸ್ಥಾನ, ಕಳಸೇಶ್ವರ ದೇದಸ್ಥಾನ, ದತ್ತಪೀಠ, ಚಿಕ್ಕಮಗಳೂರು ನಗರ ಹಾಗೂ ಕೆಮ್ಮಣ್ಣುಗುಂಡಿಗೆ ಭೇಟಿ ನೀಡಿದ್ದಾರೆ. ಫೆಬ್ರವರಿ ತಿಂಗಳಲ್ಲಿ 260 ವಿದೇಶಿಯರು ಸೇರಿದಂತೆ ದೇಶ, ಹೊರರಾಜ್ಯ ಹಾಗೂ ಅಂತರ್‌ ಜಿಲ್ಲೆ ಪ್ರವಾಸಿಗರು ಸೇರಿದಂತೆ 6,67,350 ಜನರು ಜಿಲ್ಲೆಗೆ ಭೇಟಿ ನೀಡಿದ್ದಾರೆ.

ಮಾರ್ಚ್‌ ತಿಂಗಳಲ್ಲಿ 1,23,104 ರಾಜ್ಯ ಹೊರರಾಜ್ಯದ ಪ್ರವಾಸಿಗರು ಭೇಟಿ ನೀಡಿದ್ದು ಮಾರ್ಚ್‌ ತಿಂಗಳಲ್ಲಿ ಕೋವಿಡ್ ಸೋಂಕು ಒಕ್ಕರಿಸಿದ್ದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಸಂಪೂರ್ಣ ಸ್ಥಗಿತಗೊಳಿಸಿದ್ದರಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ದೊಡ್ಡ ಪೆಟ್ಟು ಬಿದ್ದಿತ್ತು.

ಜೂನ್‌ ತಿಂಗಳಲ್ಲಿ ಲಾಕ್‌ಡೌನ್‌ ಸ್ವಲ್ಪಪಟ್ಟಿಗೆ ಸಡಿಲಿಕೆ ಕಂಡ ಬೆನ್ನಲ್ಲೇ ಪ್ರವಾಸೋದ್ಯಮಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದ್ದರಿಂದ 45,818 ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಿದ್ದರು. ಜುಲೈ ತಿಂಗಳಲ್ಲಿ 15,105 ಪ್ರವಾಸಿಗರು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿದ್ದರು. ಆಗಸ್ಟ್‌ ತಿಂಗಳಲ್ಲಿ ಇನಷ್ಟು ಚೇತರಿಕೆ ಪ್ರವಾಸೋದ್ಯಮ ಕಂಡಿದೆ. 1,20,488 ಜನರು ಭೇಟಿ ನೀಡಿದ್ದಾರೆ. ಸೆಪ್ಟೆಂಬರ್‌ತಿಂಗಳಲ್ಲಿ 1,94,944 ಪ್ರವಾಸಿಗರು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಅಕ್ಟೋಬರ್‌ ತಿಂಗಳಲ್ಲಿ ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬಂದಿದ್ದು, ರಾಜ್ಯ, ಹೊರರಾಜ್ಯ ಸೇರಿದಂತೆ 5,10,844 ಜನರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ:ಬಾಳು ಋಣದ ರತ್ನದ ಗಣಿ

ನವೆಂಬರ್‌ ತಿಂಗಳಲ್ಲಿ 3,48,705 ಜನ ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಿದ್ದು, ವರ್ಷಾತ್ಯಂದ ಡಿಸೆಂಬರ್‌ ತಿಂಗಳಲ್ಲಿ 4,36,348 ಪ್ರವಾಸಿಗರು ಭೇಟಿ ನೀಡಿದ್ದಾರೆ. ಸದ್ಯ ನೂತನ ವರ್ಷದ ಆರಂಭದಲ್ಲೇ ಪ್ರವಾಸಿಗರ ಸಂಖ್ಯೆಯಲ್ಲಿ ವಾರದಿಂದ ವಾರಕ್ಕೆ ಏರಿಕೆ ಕಂಡು ಬರುತ್ತಿದ್ದು, ಕೋವಿಡ್  ಸೋಂಕಿನಿಂದ ಏಪ್ರಿಲ್‌ ತಿಂಗಳಿಂದ ಮಡುಗಟ್ಟಿದ್ದ ಪ್ರವಾಸೋದ್ಯಮ ನಿಧಾನ ಗತಿಯಲ್ಲಿ ಚೇತರಿಕೆ ಕಂಡುಕೊಳ್ಳುತ್ತಿದೆ. ಪ್ರವಾಸೋದ್ಯಮವನ್ನು ಅವಲಂಬಿಸಿಕೊಂಡಿರುವ ಉದ್ಯಮಗಳು ಚೇತರಿಕೆಯತ್ತಾ ಮುಖಮಾಡಿದ್ದು, ಜಿಲ್ಲೆಯ ಜನತೆಯಲ್ಲಿ ಸಂತಸ ತಂದಿದೆ.

ಜಿಲ್ಲೆಯಲ್ಲಿ ಸುಮಾರು 450ಕ್ಕೂ ಹೋಂ ಸ್ಟೇಗಳು ಕಾರ್ಯ ನಿರ್ವಹಿಸುತ್ತಿದ್ದು, ಪ್ರವಾಸೋದ್ಯಮ ಇಲಾಖೆಯಲ್ಲಿ ರಿಜಿಸ್ಟರ್‌ ಆಗಿವೆ. ಉಳಿದಂತೆ 90 ಹೋಂ ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ರಿಜಿಸ್ಟರ್‌ ಹೊಂದಿಲ್ಲ. ಹೋಂ ಸ್ಟೇ ರಿಜಿಸ್ಟ್‌ರ್‌ಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಅರ್ಜಿಗಳ ಪರಿಶೀಲನೆ ನಂತರ ಪ್ರವಾಸೋದ್ಯಮ ಇಲಾಖೆಯಿಂದ ಪ್ರಮಾಣಪತ್ರವನ್ನು ನೀಡಲಾಗುತ್ತದೆ. 90 ಹೋಂ ಸ್ಟೇಗಳು ಈ ಪ್ರಮಾಣಪತ್ರವನ್ನು ಹೊಂದಿಲ್ಲವೆಂದು ತಿಳಿದು ಬಂದಿದೆ.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.