ಶೀಘ್ರದಲ್ಲೇ ಎಚ್ಡಿಕೆಗೆ ತಕ್ಕ ಉತ್ತರ: ಡಿಕೆಶಿ
Team Udayavani, Aug 6, 2023, 8:41 PM IST
ಬೆಂಗಳೂರು: ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡುತ್ತಿರುವ ವರ್ಗಾವಣೆ ದಂಧೆ ಆರೋಪವು ಪ್ರಧಾನಿವರೆಗೂ ಹೋಗಿದೆ ಎಂದು ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಅದಕ್ಕೆ ತಕ್ಕಂತೆ ಶೀಘ್ರದಲ್ಲೇ ಉತ್ತರ ನೀಡುತ್ತೇನೆ” ಎಂದು ತಿರುಗೇಟು ನೀಡಿದ್ದಾರೆ.
“ಕುಮಾರಸ್ವಾಮಿ ಅವರ ಆರೋಪಕ್ಕೆ ಬರೀ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಪ್ರಧಾನಮಂತ್ರಿವರೆಗೂ ಇದು ತಲುಪಿದೆ. ಇದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ. ಕಾದುನೋಡಿ’ ಎಂದು ಹೇಳಿದ್ದಾರೆ. ಇದರೊಂದಿಗೆ ಇಬ್ಬರ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸ್ಪಷ್ಟ ಸೂಚನೆಗಳಿವೆ.
ಕುಮಾರಸ್ವಾಮಿ ಅವರ ಆರೋಪಕ್ಕೆ ಭಾನುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮರ್, “ಸಮಯ ಬಂದಾಗ ಇದಕ್ಕೆ ತಕ್ಕ ಉತ್ತರ ನೀಡುತ್ತೇನೆ. ನನಗೂ ಅವರ ಬಗ್ಗೆ ಗೊತ್ತಿದೆ. ಕುಮಾರಸ್ವಾಮಿ ಮತ್ತು ಅವರ ತಂದೆ ವಿರುದ್ಧ ನಾನು ಸ್ಪರ್ಧಿಸಿದ್ದೇನೆ. ಅವರ ಪತ್ನಿ ವಿರುದ್ಧ ನನ್ನ ಸಹೋದರ ಸ್ಪರ್ಧಿಸಿದ್ದಾರೆ. ಕಾದುನೋಡಿ, ಈಗ ನಾನು ಈ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.
ಅಷ್ಟಕ್ಕೂ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದಾರೆ. ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ ಎಂದೂ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.