ಆರ್‌ಜೆ ರೋಹಿತ್ ಈಗ ರೌಡಿ ಫೆಲೋ
Team Udayavani, Jun 27, 2020, 4:07 AM IST
ಆರ್‌ಜೆ ರೋಹಿತ್ ಈಗ ಹೊಸ ಜವಾಬ್ದಾರಿಯೊಂದನ್ನು ಹೊತ್ತುಕೊಂಡಿದ್ದಾರೆ. ಹೌದು, ಈವರೆಗೆ ಅವರು ಹೀರೋ ಆಗಿಯೇ ಮಿಂಚಿದ್ದರು. ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು, ಮೊದಲ ಬಾರಿಗೆ ನಿರ್ದೇಶನಕ್ಕೂ ಕೈ ಹಾಕಿದ್ದಾರೆ. ಈ ಬಾರಿ ಅವರು ನಟನೆಯ ಜೊತೆಯಲ್ಲಿ ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ “ರೌಡಿ ಫೆಲೋ’ ಎಂದು ನಾಮಕರಣ ಮಾಡಲಾಗಿದೆ.
ಅವರು ನಿರ್ದೇಶಿಸಲು ಹೊರಟಿರುವ “ರೌಡಿ ಫೆಲೋ’ ಚಿತ್ರದ ಹಿಂದೆ “ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ಇದ್ದಾರೆ. ಇಡೀ ಸಿನಿಮಾದ ಸ್ಕ್ರಿಪ್ಟ್ ಕೆಲಸ ಪ್ರಶಾಂತ್ ನೀಲ್ ಅವರ ಸಮ್ಮುಖದಲ್ಲೇ ಆಗಿದೆ. ಅವರ ಮಾರ್ಗದರ್ಶನದಲ್ಲೇ, ಸ್ಕ್ರಿಪ್ಟ್ ರೆಡಿಯಾಗಿದ್ದು, ಇದೀಗ “ರೌಡಿ ಫೆಲೋ’ ಮೂಲಕ ನಿರ್ದೇಶನದಲ್ಲೂ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ ರೋಹಿತ್.
ಈ ಹಿಂದೆ “ಕರ್ವ’ ಸಿನಿಮಾ ಮೂಲಕ ಸುದ್ದಿಯಾಗಿದ್ದ ರೋಹಿತ್ ಆ ಬಳಿಕ ಅವರು”ಬಕಾಸುರ’ ಚಿತ್ರದಲ್ಲಿ ನಟಿಸಿದ್ದರು. ರವಿಚಂದ್ರನ್ ಜೊತೆ ಮಾಡಿದ ಎರಡನೇ ಸಿನಿಮಾ ಅದಾಗಿತ್ತು. ಈಗ ಹೊಸ ಬಗೆಯ ಸ್ಕ್ರಿಪ್ಟ್ ಮೂಲಕ ಅಖಾಡಕ್ಕೆ ಇಳಿಯುತ್ತಿದ್ದಾರೆ ರೋಹಿತ್. ರೋಹಿತ್‌ಗೆ ಈ ಚಿತ್ರದಲ್ಲಿ ವಿದ್ಯಾ ಪ್ರದೀಪ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಈ ಚಿತ್ರ ಪದ್ಮಾವತಿ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದೆ.
ಲವಿತ್‌ಕುಮಾರ್ ಛಾಯಾಗ್ರಹಣವಿದೆ. ನಕುಲ್ ಅಭಯಂಕರ್ ಅವರ ಸಂಗೀತವಿದೆ. ರವಿಬಸ್ರೂರು ಅವರು ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಚಿತ್ರದಲ್ಲಿ ರೋಹಿತ್ ಅವರು ಆ್ಯಂಗ್ರಿ ಯಂಗ್ ಮ್ಯಾನ್ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಡೀ ಸಿನಿಮಾದ ಕಥೆಯ ಹಿಂದೆ ಪ್ರಶಾಂತ್ ನೀಲ್ ಇದ್ದಾರೆ. ಅವರ ಸಮ್ಮುಖದಲ್ಲೇ ಚರ್ಚೆಯಾದ ಕಥೆಯನ್ನು ಅವರು ಒಪ್ಪಿದ ಬಳಿಕವಷ್ಟೇ ಚಿತ್ರೀಕರಣಕ್ಕೆ ಹೊರಡಲು ತಯಾರಿ ನಡೆಸಿದ್ದಾರೆ ರೋಹಿತ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.