ಡಿ. 21 ರಿಂದ ರಸ್ತೆ ಸುರಕ್ಷತಾ ಸಪ್ತಾಹ: ಜಿಲ್ಲಾಧಿಕಾರಿ ಹಿರೇಮಠ
Team Udayavani, Dec 9, 2020, 1:36 PM IST
ಬೆಳಗಾವಿ: ರಸ್ತೆ ಬಳಕೆದಾರರಲ್ಲಿ ಹಾಗೂ ವಾಹನ ಚಾಲಕರಲ್ಲಿ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಹಾವೇರಿ ಜಿಲ್ಲೆ ಗೋಟಗೋಡಿಯ ಕನ್ನಡ ಜಾನಪದ ವಿಶ್ವವಿದ್ಯಾಲಯ ಸಹಯೋಗದಲ್ಲಿ ಡಿ. 21ರಿಂದ ರಸ್ತೆ ಸುರಕ್ಷತಾ ಸಪ್ತಾಹ
ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಸ್ತೆ ಸುರಕ್ಷತಾ ಸಪ್ತಾಹದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಎಲ್ಲ ಇಲಾಖೆಯ ಸಹಕಾರದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹವನ್ನು ಯಶಸ್ವಿಗೊಳಿಸಲು
ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೊಟಗೋಡಿ ಗ್ರಾಮದ
ಕನ್ನಡ ಜಾನಪದ ವಿವಿ ಹಲವಾರು ರೀತಿಯಲ್ಲಿ ಇಂತಹ ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಅವರ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಹೇಳಿದರು.
ಇದನ್ನೂ ಓದಿ:ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಚಿವ ಬಿ.ಎ.ಜೀವಿಜಯ
ರಸ್ತೆ ಸುರಕ್ಷತಾ ಸಪ್ತಾಹದ ಪ್ರಮುಖ ಉದ್ದೇಶಗಳ ಕುರಿತು ವಿವರಣೆ ನೀಡಿದ ಅಭಿವೃದ್ಧಿ ತಜ್ಞ ಪ್ರಕಾಶ ಭಟ್ ಅವರು, ರಸ್ತೆ ಬಳಕೆದಾರರಲ್ಲಿ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸುವುದು, ವಾಣಿಜ್ಯ ವಾಹನಗಳ ಚಾಲಕರಿಗೆ ಕಣ್ಣಿನ ಪರೀಕ್ಷೆ ನಡೆಸುವುದು ಹಾಗೂ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸುವುದಾಗಿದೆ ಎಂದು ತಿಳಿಸಿದರು.
ರಸ್ತೆ ಜಾಗೃತಿಯ ಬಗ್ಗೆ ಚಿತ್ರಕಲೆಗಳ ಮೂಲಕ ಅರಿವು ಮೂಡಿಸುವುದು: ಬೀದಿನಾಟಕಗಳು, ಜಾಥಾ, ಗೋಡೆಗಳ ಮೇಲೆ ಚಿತ್ರಕಲೆ ಬರೆಸಲಾಗುವುದು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಎಲ್‌ಇಡಿ ಫಲಕಗಳ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ
ಮೂಡಿಸುವುದು, ಹಲವಾರು ಘೋಷ ವಾಕ್ಯಗಳನ್ನು ಬಳಸುವುದು ಹಾಗೂ ವೇಣುಧ್ವನಿ ರೇಡಿಯೋ ಕಾರ್ಯಕ್ರಮಗಳನ್ನು ನಡೆಸುವುದು, ಸ್ಥಳೀಯ ಪತ್ರಿಕೆಗಳ ಮೂಲಕ ಜನರಿಗೆ ಇದರ ಉದ್ದೇಶವನ್ನು ತಲುಪಿಸುವ ಕಾರ್ಯವನ್ನು ಮಾಡುವುದಾಗಿ
ಹೇಳಿದರು.
ಜಾಥಾಕ್ಕೆ ಚಾಲನೆ: ರಸ್ತೆ ಸುರಕ್ಷತಾ ಸಪ್ತಾಹದ ಉದ್ಘಾಟನಾ ಸಮಾರಂಭ ಡಿ. 21ರಂದು ಬೆಳಗ್ಗೆ 10 ಗಂಟೆಗೆ ಚನ್ನಮ್ಮ ವೃತ್ತದಲ್ಲಿ ನಡೆಯಲಿದೆ ಎಂದು ಹಿರೇಮಠ ತಿಳಿಸಿದರು.
ಚೆನ್ನಮ್ಮ ವೃತ್ತದಿಂದ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಜಾಥಾ ನಡೆಸಲಾಗುವುದು ಎಂದು ವಿವರಿಸಿದರು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಡಿಸಿಪಿ ಚಂದ್ರಶೇಖರ ನೀಲಗಾರ, ಹಾವೇರಿ ಜಿಲ್ಲೆ ಗೋಟಗೋಡಿಯ ಕನ್ನಡ ಜಾನಪದ ವಿವಿ ಅಧ್ಯಕ್ಷೆ ವೇದಾರಾಣಿ ದಾಸನೂರ, ಕನ್ನಡ ಜನಪದ ವಿವಿ ಸದಸ್ಯರಾದ ಪ್ರಕಾಶ ದಾಸನೂರ ಹಾಗೂ
ಕಾರ್ಯಕ್ರಮ ಸಂಯೋಜಕರಾದ ಪ್ರದೀಪ ಮೇಲ್ಗಡೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.