Vijayapura: ದೇವರ ದರ್ಶನಕ್ಕೆ ಹೊರಟಿದ್ದ ಬಾಲಕಿ ಇನ್ನಿಲ್ಲ…
Team Udayavani, Dec 13, 2023, 3:28 PM IST
ವಿಜಯಪುರ: ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ ಬೈಕ್‍ಗೆ ಡಿಕ್ಕಿಯಾಗಿ ದೇವರ ದರ್ಶನಕ್ಕೆ ಹೊರಟಿದ್ದ ಬೆಳಗಾವಿ ಜಿಲ್ಲೆಯ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕಿಯ ತಂದೆ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಕೋಟಾ ಬಳಿ ಡಿ.13ರ ಬುಧವಾರ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವಡ್ಡರಟ್ಟಿ ಗ್ರಾಮದ 15 ವರ್ಷದ ಸವಿತಾ ಪೂಜಾರಿ ಮೃತ ಬಾಲಕಿಯನ್ನು ಎಂದು ಗುರುತಿಸಲಾಗಿದೆ.
ಮೃತ ಬಾಲಕಿಯ ತಂದೆ ಮುದಗೊಂಡ ಪೂಜಾರಿ ಎಂಬವರು ಗಾಯಗೊಂಡಿದ್ದು, ವಿಜಯಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರದಿಂದ ಮುಂಬೈಗೆ ತೆರಳುತ್ತಿದ್ದ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ ಜಿಲ್ಲೆಯ ತಿಕೋಟ ಪಟ್ಟಣದಲ್ಲಿ ಬೈಕ್ ಸವಾರನಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಾಲಕಿ ದೂರಕ್ಕೆ ಹಾರಿಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಮುದಗೊಂಡ ಹಾಗೂ ಸವಿತಾ ತಿಕೋಟಾ ತಾಲೂಕಿನ ಅರಕೇರಿ ಅಮೋಘಸಿದ್ಧೇಶ್ವರ ಜಾತ್ರೆಗೆ ತೆರಳುತ್ತಿದ್ದರು. ಈ ವೇಳೆ ತಿಕೋಟ ಬಳಿ ಅಪಘಾತ ಸಂಭವಿಸಿದ್ದು, ಪೊಲೀಸರು ಬಸ್ ಚಾಲಕನನ್ನು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ತಿಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.