ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ :ಮನೆ ಅಂಗಡಿ-ಮುಂಗಟ್ಟು ಮತ್ತಿತರ ಕಟ್ಟಡಗಳು ನೆಲಸಮ
Team Udayavani, Jan 17, 2022, 12:30 PM IST
ಹೊಳಲ್ಕೆರೆ: ಪಟ್ಟಣದ ವ್ಯಾಪ್ತಿಯಲ್ಲಿ 100 ಮೀ ಅಳತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲಿಕರಣಕ್ಕೆ ಚಾಲನೆ ನೀಡಿದ್ದು, ಭಾನುವಾರ ಮುಂಜಾನೆ 4 ಗಂಟೆ ಹೊತ್ತಿನಲ್ಲಿ ತಾಲೂಕು ಆಡಳಿತ,
ಪೊಲೀಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಗುತ್ತಿಗೆದಾರರ ಸಹಯೋಗದಲ್ಲಿ ಕಾರ್ಯಚರಣೆ ಕೈಗೊಂಡು ಸುಮಾರು ಹತ್ತಾರು ಮನೆ ಅಂಗಡಿ-ಮುಂಗಟ್ಟು ಮತ್ತಿತರ ಕಟ್ಟಡಗಳನ್ನು
ನೆಲಸಮಗೊಳಿಸಲಾಗಿತ್ತು.
ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪಟ್ಟಣ ವ್ಯಾಪ್ತಿಯಲ್ಲಿರುವ ಚಿತ್ರದುರ್ಗ- ಶಿವಮೊಗ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಅಗಲಿಕರಣ ಕಾಮಗಾರಿ ಆರಂಭಿಸಿದ ಗುತ್ತಿಗೆದಾರರು
ಪಟ್ಟಣದ ಚಿತ್ರದುರ್ಗ ಭಾಗದಿಂದ ಪುರಸಭೆ ಕವೇರಿತನಕ ರಸ್ತೆ ಅಗಲಿಕರಣದ ಅಳತೆಗೆ 100 ಮೀಟರ್‌ಗೆ ಅಡ್ಡವಾಗಿದ್ದ ಬಹುತೇಕ ಕಟ್ಟಡಗಳನ್ನು ಜೆಸಿಬಿಯಿಂದ ತೆರವುಗೊಳಿಸಲಾಗಿತ್ತು.
ಹಲವಾರು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಆಗಲಿಕರಣಗೊಳಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ಅಭಿವೃದ್ಧಿಗೆ ಮುಂದಾಗಿದ್ದರೂ, ಪ್ರಾಧಿಕಾರದ ಅವೈಜ್ಞಾನಿಕ ಅಳತೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಕೆಲ ಮನೆಯ ಅಂಗಡಿ ಮುಂಗಟ್ಟು ಮಾಲೀಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ತಡೆಯಾಜ್ಞೆ ತರುವ ಮೂಲಕ ಕಾಮಗಾರಿ ಸ್ಥಗಿತಗೊಳಿಸಿದ್ದರು. ಹಾಗಾಗಿ ಹಲವಾರು ವರ್ಷಗಳ ಹಿಂದೆ ಅಭಿವೃದ್ಧಿ ಅಗಬೇಕಿದ್ದ ಕಾಮಗಾರಿ ಸ್ಥಗಿತಗೊಂಡಿತ್ತು.
ಎರಡು ದಿನಗಳ ಹಿಂದೆ ರಸ್ತೆ ಅಗಲಿಕರಣದ ಅಳತೆಯನ್ನು ಹೊಸದಾಗಿ ಮಾರ್ಕ್ ಮಾಡಿದ್ದು, 100 ಮೀಟರ್ ಅಳತೆಗೆ ತಕ್ಕಂತೆ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಇನ್ನೂ ಒಂದೆರಡು
ಕಟ್ಟಡಗಳು ಕೋರ್ಟ್‌ನಲ್ಲಿ ತಡೆಯಾಜ್ಞೆ ಇರುವುದರಿಂದ ತಾತ್ಕಾಲಿಕವಾಗಿ ರಸ್ತೆ ಅಭಿವೃದ್ಧಿ ಹಿನ್ನಡೆಯುಂಟಾಗಿದೆ.
ಪಟ್ಟಣದ ಕುಡಿನೀರುಕಟ್ಟೆ ವೀರಭದ್ರಪ್ಪ ಕಟ್ಟಡ ತೆರವುಗೊಳಿಸುವುದನ್ನು ವಿರೋಧಿಸಿದ್ದು, ನಮ್ಮ ಕಟ್ಟಡಕ್ಕೆ ನ್ಯಾಯಾಲಯದ ಆದೇಶದಂತೆ ಅಳತೆ ನಿಗದಿ ಮಾಡದೆ ಪೊಲೀಸ್ ಸರ್ವಗಾವಳಿನಲ್ಲಿ ಕಟ್ಟಡವನ್ನು ಅವೈಜ್ಞಾನಿಕ ಅಳತೆಗೆ ತೆರವುಗೊಳಿಸುತ್ತಿರುವುದು ಕಾನೂನು ಬಾಹೀರವಾಗಿದೆ. ನ್ಯಾಯಾಲದ ಆದೇಶದಂತೆ ರಸ್ತೆ ಅಭಿವೃದ್ಧಿ ಪ್ರಾಧಿಕಾರ ಹಾಗೂ
ಜಿಲ್ಲಾಡಳಿತ ಕಾನೂನು ಪಾಲನೆ ಮಾಡಿಲ್ಲ. ನನಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಕಟ್ಟಡ ತೆರವುಗೊಳಿಸಲು ಕೈಗೊಂಡ ಕಾರ್ಯಚರಣೆಯಲ್ಲಿ ಪೊಲೀಸ್ ಬದೊಬಸ್ತು ಕಲ್ಪಿಸಲಾಗಿತ್ತು. ಜನರು ಕಟ್ಟಡ ತೆರವುಗೊಳಿಸುವುದನ್ನು ಕೋವಿಡ್ ಮಾರ್ಗಸೂಚಿ
ಉಲ್ಲಂಘಿಸಿ ವಿಕ್ಷಣೆ ಮಾಡಲು ಸಾವಿರಾರು ಜನರು ಅಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.