“ಕಲಾವಿದ’ನಿಗೆ ರೋರಿಂಗ್ ಸ್ಟಾರ್ ಸಾಥ್
Team Udayavani, Jul 1, 2020, 8:29 AM IST
ಪದ್ಮರಾಜ್ ಫಿಲಂಸ್ ನಿರ್ಮಿಸಿರುವ “ಕಲಾವಿದ’ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಪೋಸ್ಟರನ್ನು ಇತ್ತೀಚೆಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಹನ್ನೆರಡು ವರ್ಷಗಳಿಂದ ಹಲವು ಕನ್ನಡ ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶನ ಮಾಡಿ ಅನುಭವ ಇರುವ ಶಿವಾನಂದ್ ಹೆಚ್.ಡಿ ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಚಿತ್ರದಲ್ಲಿ ಪ್ರದೀಪ್ ಕುಮಾರ್ ನಾಯಕನಾಗಿ ಕಾಣಿಸಿಕೊಂಡಿದ್ದು, ನಿರ್ಮಾಣದ ಜವಬ್ದಾರಿಯನ್ನು ಅವರೇ ನಿರ್ವಹಿಸಿದ್ದಾರೆ. ಅಲ್ಲದೇ ಕಿರುತೆರೆ ಮೂಲಕ ನಟನೆ ಆರಂಭಿಸಿ, ರಣರಣಕ ಸಿನಿಮಾದಲ್ಲಿ ನಟಿಸಿದ್ದ ಸಂಭ್ರಮ ಈ ಚಿತ್ರದ ನಾಯಕಿ. ಅಲ್ಲದೇ ಮಂಜುನಾಥ್ ಹೆಗ್ಡೆ, ಅರುಣಾ ಬಾಲರಾಜ್, ಮೂ ಗು ಸುರೇಶ್, ವರ್ಷ ಮಲ್ಲೇಶ್, ಗೀತ( ಗುಂಡಮ್ಮ) ಶ್ರೀಧರ್, ಜಗದೀಶ್, ಲೋಕೇಶ್ ಮುಂತಾದವರ ತಾರಾಬಳಗ ಚಿತ್ರದಲ್ಲಿದೆ.
ಇನ್ನು ಚಿದಾನಂದ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ – ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ವೆಂಕಿ ಯು ಡಿ ವಿ ಸಂಕಲನ ಹಾಗೂ ಆರ್ಯ ರೋಷನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದ್ದು, ಸರ್ಕಾರ ಅನುಮತಿ ನೀಡಿದ ನಂತರ “ಕಲಾವಿದ’ ಚಿತ್ರ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.