ಮಾತಿಲ್ಲದ ಮನೆಯೊಳಗೆ ಅಮ್ಮ- ಮಗು


Team Udayavani, Apr 14, 2020, 9:57 AM IST

ಮಾತಿಲ್ಲದ ಮನೆಯೊಳಗೆ ಅಮ್ಮ- ಮಗು

 ರೂಮ್‌ (Room)
 ಭಾಷೆ: English
 ಅವಧಿ: 120 ನಿಮಿಷ

ಆತನೊಬ್ಬನಿದ್ದಾನೆ. ಅವಳನ್ನು ಅಪಹರಿಸಿ ತಂದು, ತನ್ನ ಮನೆಯ ಹಿಂಬದಿಯ ಶೆಡ್ಡಿನಲ್ಲಿ ಕೂಡಿ ಹಾಕಿ ದಿನವೂ ಲೈಂಗಿಕವಾಗಿ ಬಳಸಿಕೊಳ್ಳುವಷ್ಟು ಕ್ರೂರಿ ಆತ. ಆ ಮನೆಗೆ ಕಿಟಕಿಗಳಿಲ್ಲ. ಅಲ್ಲಿರುವುದು ಬದುಕಲು ಬೇಕಿರುವ ಕನಿಷ್ಠ ಸೌಕರ್ಯಗಳಷ್ಟೇ. ಅಲ್ಲಿರುವ ಜಾಗದಲ್ಲೇ ದಿನನಿತ್ಯ ಕಾರ್ಯಗಳು, ಸ್ನಾನ, ಅಡುಗೆ ಎಲ್ಲವೂ ಆಗಬೇಕು. ಚಾವಣಿಯಿಂದ ಒಳಕ್ಕೆ ಬೀಳುವ ಬೆಳಕು, ಅವಳಿಗೂ ಒಂದು ಬಗೆಯ ಆಶಾಕಿರಣವೇ! ಆ ರೂಮಿಗೊಂದು ಎಲೆಕ್ಟ್ರಾನಿಕ್‌
ಲಾಕ್‌ ಇದೆ. ಅಲ್ಲಿ ಸೀಕ್ರೆಟ್‌ ಕೋಡ್‌ ಒತ್ತಿದರಷ್ಟೇ ಬಾಗಿಲು ತೆರೆಯುತ್ತದೆ. ಅದು ಅವನಿಗೆ ಮಾತ್ರ ಗೊತ್ತಿದೆ. ಒಳಗಿನಿಂದ ಎಷ್ಟೇ ಕೂಗಿದರೂ, ಹೊರಗಿನವರಿಗೆ ಏನೂ ಕೇಳಿಸುವುದಿಲ್ಲ. ಆತ ರಾತ್ರಿ ಬರುತ್ತಾನೆ, ಆಹಾರಕ್ಕೆ ಒಂದಷ್ಟು ಸಾಮಾನು ಕೊಟ್ಟು, ತನ್ನ ಕೆಲಸ ಮುಗಿಸಿಕೊಂಡು ಹೊರಟು  ಬಿಡುತ್ತಾನೆ.

ಆಕೆ ಅಲ್ಲಿ, ಏನೂ ಮಾಡಲಾಗದ ಅಸಹಾಯಕಿ. ಹೀಗೆಯೇ ಬರೋಬ್ಬರಿ ಏಳು ವರ್ಷಗಳು ಕಳೆದುಹೋದಾಗ, ಆಕೆ ಖನ್ನತೆಗೆ ಒಳಗಾಗುತ್ತಾಳೆ. ಅಲ್ಲೇ ಅವಳಿಗೊಂದು ಗಂಡು ಮಗುವಾಗಿದೆ. ಆಕೆಗೆ ಆ ಮಗುವಷ್ಟೇ ಪ್ರಪಂಚ. ಇದೀಗ ಆ ಮಗು ನಾಲ್ಕು ವರ್ಷ ತುಂಬಿ ಐದಕ್ಕೆ ಕಾಲಿಡುತ್ತಿದೆ. ಆತ ಬರುವ ಹೊತ್ತಿಗೆ ಆ ಮಗುವನ್ನು ಹೇಗಾದರೂ ಮಾಡಿ ವಾರ್ಡ್‌ರೋಬ್‌ನೊಳಗೆ ಮಲಗಿಸಿಬಿಡುವುದು, ಅದೇ ನೆಪ ಹೇಳಿ ಆ ಮಗುವನ್ನು ಮುಟ್ಟದಂತೆ ನೋಡಿಕೊಳ್ಳುವುದು ಅವಳ ಪ್ರತಿದಿನದ ಸವಾಲು. ಆಕೆ ದಿನ ದಿನವೂ ಹೊರಹೋಗುವ ಅವಕಾಶಕ್ಕಾಗಿ ಕಾಯುತ್ತಿದ್ದಾಳೆ. ಮಗುವಿಗೆ ಐದು ವರ್ಷವಾದಾಗ, ಹೊರ ಪ್ರಪಂಚದ ವಾಸ್ತವವನ್ನು  ಅದಕ್ಕೆ ಅರ್ಥ ಮಾಡಿಸಲು ಹೆಣಗಾಡುತ್ತಾಳೆ. ಕಡೇ ಪಕ್ಷ, ಆ ಮಗುವನ್ನಾದರೂ ಹೊರಗಿನ ಪ್ರಪಂಚಕ್ಕೆ ಕಳುಹಿಸಿ, ಅದರ ಬಾಳನ್ನು ಈ ನರಕದಿಂದ ಪಾರು ಮಾಡುವುದು, ಅವಳ ಉದ್ದೇಶ. ಅದರಂತೆ, ಒಮ್ಮೆ ಆ ಮಗುವಿಗೆ ವಿಪರೀತ ಜ್ವರ ಬರುವಂತೆ ಮಾಡುತ್ತಾಳೆ. ಆಸ್ಪತ್ರೆಗೆ ಹೋದಾಗ ಜೋರಾಗಿ
ಕೂಗಿಕೊಂಡು, ಸುತ್ತಲಿನವರ ಗಮನ ಸೆಳೆದು ತಪ್ಪಿಸಿಕೋ ಎಂದು ಆ ಮಗುವಿಗೆ ಹೇಳಿಕೊಡುತ್ತಾಳೆ. ಆದರೆ, ಆತ ಮಗುವಿನ ಅನಾರೋಗ್ಯ ನೋಡಿಯೂ, ಮುಖ ಸಿಂಡರಿಸಿ ಹೋಗುವುದರೊಂದಿಗೆ, ಆ ಉಪಾಯ ಹಳ್ಳ ಹಿಡಿಯುತ್ತದೆ.

ಮರುದಿನವೇ ಮತ್ತೆ ಆ ಮಗು ಚಿಕಿತ್ಸೆ ಸಿಗದ ಕಾರಣ ಕೊನೆಯುಸಿರೆಳೆಯಿತೆಂದು ನಟಿಸಿ, ಅದಕ್ಕೂ ನಟಿಸಲು ಹೇಳಿ, ಅದರ ಶವಸಂಸ್ಕಾರ ಮಾಡಿ ಬಾ ಎನ್ನುವಂತೆ ಅನ್ನುತ್ತಾಳೆ. ಆ ರಾತ್ರಿ, ಮಗುವಿಗೆ ಧೈರ್ಯ ಹೇಳಿ,  ಕಡೆಯದಾಗೊಮ್ಮೆ ಅದಕ್ಕೆ ಮುತ್ತನಿಟ್ಟು, ಧೈರ್ಯತುಂಬಿ ಕಾರ್ಪೆಟ್ಟೊಂದಕ್ಕೆ ಸುತ್ತಿದ್ದಾಳೆ. ಆಗಲೇ, ಆತ ಒಳಬರುತ್ತಾನೆ!

ಕಥೆ ಎಷ್ಟು ರೋಚಕವೆನಿಸುತ್ತದೆಯಲ್ಲವೇ? ಹೌದು. ಇದು 2015ರಲ್ಲಿ ಬಿಡುಗಡೆಯಾದ ರೂಮ್ ಚಿತ್ರದ ಸನ್ನಿವೇಶ. ಪ್ರತಿ ದೃಶ್ಯದಲ್ಲೂ ತಾಯಿ-ಮಗುವಿನ
ಪಾತ್ರಧಾರಿಗಳು ಮನೋಜ್ಞವಾಗಿ ನಟಿಸಿದ್ದಾರೆ. Brie Larson ಈ ಚಿತ್ರದ ಅಭಿನಯಕ್ಕೆ ಅತ್ಯುತ್ತಮ ನಟಿ ಆಸ್ಕರ್‌ ಗರಿಯನ್ನು ಮುಡಿಗೇರಿಸಿಕೊಂಡಿದ್ದಾರೆ
ಎಂದರೆ, ಈ ಚಿತ್ರದ ಅವರ ಪಾತ್ರದ ತೂಕವನ್ನು ಗಮನಿಸಲೇಬೇಕು. Emma Donoghue ರವರ ಅದೇ ಹೆಸರಿನ ಕಾದಂಬರಿಯ ಕಥಾವಸ್ತುವನ್ನೇ ಇಲ್ಲಿ
ಸಿನಿಮಾಗೆ ರೂಪಾಂತರಿಸಲಾಗಿದೆ. ಸಾಧ್ಯವಾದರೆ ಒಮ್ಮೆ ನೋಡಿ.

ಸಂತೋಷ್‌ ಕುಮಾರ್‌ ಎಲ್ಎಂ.

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.