ವಿದ್ಯುತ್ ಉತ್ಪಾದನೆಗೆ ತೊಡಕಾದ ಹಸಿ ಕಲ್ಲಿದ್ದಿಲು
Team Udayavani, Aug 2, 2023, 11:25 PM IST
ರಾಯಚೂರು: ಗಣಿ ಪ್ರದೇಶಗಳಲ್ಲಿ ಸುರಿದ ಸತತ ಮಳೆಯ ಪರಿಣಾಮ ಶಾಖೋತ್ಪನ್ನ ಕೇಂದ್ರಗಳಿಗೆ ಹಸಿ ಕಲ್ಲಿದ್ದಿಲು ಸರಬರಾಜಾಗುತ್ತಿದ್ದು, ವಿದ್ಯುತ್ ಉತ್ಪಾದನೆಗೆ ಅಡಚಣೆಯಾಗುತ್ತಿದೆ.
ರಾಜ್ಯದಲ್ಲೂ ಮಳೆ ಹೆಚ್ಚಾಗಿರುವ ಕಾರಣ ಜಲಮೂಲಗಳಿಂದ ವಿದ್ಯುತ್ ಹೆಚ್ಚಾಗಿ ಮಾಡಲಾಗುತ್ತಿದೆ. ಬೇಡಿಕೆ ಇಲ್ಲದಿದ್ದರೂ ನಿರಂತರ ಉತ್ಪಾದನೆಯಲ್ಲಿ ತೊಡಗಿರುತ್ತಿದ್ದ ಶಾಖೋತ್ಪನ್ನ ಕೇಂದ್ರಗಳಿಗೆ ಈಗ ವಿರಾಮ ನೀಡಲಾಗಿದೆ. ಇದರಿಂದ ಆರ್‌ಟಿಪಿಎಸ್, ವೈಟಿಪಿಎಸ್ ಮತ್ತು ಬಿಟಿಪಿಎಸ್ ಕೇಂದ್ರಗಳಲ್ಲಿ ಉತ್ಪಾದನೆ ಪ್ರಮಾಣ ಕುಗ್ಗಿದೆ.
ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ಮೂರು ಘಟಕಗಳು ಮಾತ್ರ ಕಾರ್ಯಾಚರಿಸುತ್ತಿದ್ದು, 382 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಅದರಲ್ಲಿ ಒಂದನೇ ಘಟಕ ಸಂಪೂರ್ಣ ಕೆಟ್ಟು ಹೋಗಿ ಸ್ಥಗಿತಗೊಂಡು ವರ್ಷವೇ ಕಳೆದಿದೆ. ವೈಟಿಪಿಎಸ್ ಒಂದನೇ ಘಟಕ ಮಾತ್ರ ಸಕ್ರಿಯವಾಗಿದ್ದು, 367 ಮೆಗಾವ್ಯಾಟ್ ಉತ್ಪಾದಿಸಲಾಗುತ್ತಿದೆ. ಬಿಟಿಪಿಎಸ್‌ನ ಮೂರು ಘಟಕಗಳಲ್ಲಿ ಒಂದು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, 285 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.
ರಾಜ್ಯದ ಜಲವಿದ್ಯುತ್ ಮೂಲಗಳು ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿದ್ದು, ಆಲಮಟ್ಟಿ 210 ಮೆಗಾವ್ಯಾಟ್, ಶರಾವತಿ 196 ಮೆಗಾವ್ಯಾಟ್, ನಾಗ್ಝರಿ 184 ಮೆಗಾವ್ಯಾಟ್, ವಾರಾಹಿ 42 ಮೆಗಾವ್ಯಾಟ್, ಕೊಡ್ಸಲ್ಲಿ 49 ಮೆಗಾವ್ಯಾಟ್, ಜೋಗ್ 30 ಮೆಗಾವ್ಯಾಟ್, ಶಿವನಸಮುದ್ರ 26 ಮೆಗಾವ್ಯಾಟ್ ಸೇರಿ ವಿವಿಧ ಜಲವಿದ್ಯುತ್ ಘಟಕಗಳು ಸಕ್ರಿಯವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.