2.40 ಲಕ್ಷ ಕೋಟಿ ರೂಪಾಯಿ ಆಯವ್ಯಯಕ್ಕೆ ಅಸ್ತು


Team Udayavani, Oct 13, 2019, 3:07 AM IST

2.40lak

ವಿಧಾನಸಭೆ: ಪ್ರಸಕ್ತ ಹಣಕಾಸು ವರ್ಷದಲ್ಲಿ 2.40 ಲಕ್ಷ ಕೋಟಿ ರೂ.ಮೊತ್ತದ ಆಯವ್ಯಯಕ್ಕೆ ಶನಿವಾರ ಉಭಯ ಸದನಗಳಲ್ಲಿ ಅನುಮೋದನೆ ದೊರೆಯಿತು. ಎರಡನೇ ಕಂತಿನಲ್ಲಿ 7,927 ಕೋಟಿ ರೂ.ಪೂರಕ ಅಂದಾಜು ಒಳಗೊಂಡಂತೆ 2019-2020ನೇ ಸಾಲಿನಲ್ಲಿ 2,40,74,585 ರೂ.ವೆಚ್ಚದ ಎರಡು ಧನ ವಿನಿಯೋಗ ವಿಧೇಯಕವನ್ನು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದರು.

ಪ್ರಸಕ್ತ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಿಗೆ 80,168 ಕೋಟಿ ರೂ.ಲೇಖಾನುದಾನ ಪಡೆಯಲಾಗಿತ್ತು. ನಂತರದ ಮೂರು ತಿಂಗಳಿಗೆ ಎರಡನೇ ಬಾರಿ 62,751 ಕೋಟಿ ರೂ.ಲೇಖಾನುದಾನ ಪಡೆಯಲಾಗಿತ್ತು. ಇದೀಗ ಬಜೆಟ್‌ಗೆ ಅನುಮೋದನೆ ಪಡೆಯಲಾಗಿದೆ. ರಾಜಸ್ವ ವೆಚ್ಚಕ್ಕೆ 1,84,649 ಕೋಟಿ ರೂ.ಹಾಗೂ ಬಂಡವಾಳ ವೆಚ್ಚಗಳಿಗೆ 56,096 ಕೋಟಿ ರೂ.ವಿನಿಯೋಗಿಸಲಾ ಗುವುದು. ಇದರಲ್ಲಿ 9,964 ಕೋಟಿ ರೂ.ಸಾರ್ವಜನಿಕ ಸಾಲವಿರುವುದಾಗಿ ಬಿಎಸ್‌ವೈ ಪ್ರಕಟಿಸಿದರು.

ತೆರಿಗೆ ಆದಾಯ ಉತ್ತಮ: ಬಿಎಸ್‌ವೈ-ಶನಿವಾರ ಬೆಳಗ್ಗೆ ಕಲಾಪ ಆರಂಭವಾದ ಕೆಲ ಹೊತ್ತಿನಲ್ಲೇ ಯಡಿಯೂರಪ್ಪ ಅವರು ಧನ ವಿನಿಯೋಗ ವಿಧೇಯಕ ಗಳನ್ನು ಮಂಡಿಸಿದರು. “ರಾಜ್ಯದ ತೆರಿಗೆ ಮೂಲದ ಆದಾಯ ಉತ್ತಮವಾಗಿದೆ. ರಾಜ್ಯದ ಸ್ವಂತ ತೆರಿಗೆ ಸಂಗ್ರಹವು ಹಿಂದಿನ ವರ್ಷದ 1,06,621 ಕೋಟಿ ರೂ.ಗೆ ಹೋಲಿಸಿದರೆ ಶೇ.11.6ರಷ್ಟು ಬೆಳವಣಿಗೆ ಯಾಗುವ ಅಂದಾಜಿದೆ.

ವಾಣಿಜ್ಯ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ ತೆರಿಗೆಯು ಬಜೆಟ್‌ ಅಂದಾಜಿನಂತೆ ಸಂಗ್ರಹವಾಗುತ್ತಿದೆ. ಮೋಟಾರು ವಾಹನಗಳ ಮಾರಾಟ ದೇಶಾದ್ಯಂತ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಿಂದಿನ ವರ್ಷದ ಮೊದಲಾರ್ಧದ ಅವಧಿಗೆ ಹೋಲಿಸಿದರೆ ತೆರಿಗೆ ಸಂಗ್ರಹ ಇಳಿಕೆಯಾಗಿದೆ. ಮುಂದಿನ ಆರು ತಿಂಗಳಲ್ಲಿ ಬೇಡಿಕೆ ಹೆಚ್ಚಾಗಿ ಪೂರ್ಣ ತೆರಿಗೆ ಸಂಗ್ರಹ ಗುರಿ ತಲುಪುವ ನಿರೀಕ್ಷೆಯಿದೆ ಎಂದರು.

2018-19ನೇ ವರ್ಷಾಂತ್ಯಕ್ಕೆ 2,85,238 ಕೋಟಿ ರೂ.ಸಾಲವಿದ್ದು, ಜಿಎಸ್‌ಡಿಪಿಯ ಶೇ.20.26ರಷ್ಟಿದೆ. 2019-2020ರ ವರ್ಷಾಂತ್ಯಕ್ಕೆ ಒಟ್ಟು ಸಾಲದ ಮೊತ್ತವು 3,27,209 ಕೋಟಿ ರೂ.ಗಳಷ್ಟಾಗುವ ಅಂದಾಜಿದೆ. ಇದು ಸಹ ಶೇ.19.26ರಷ್ಟು ಎಂದು ಅಂದಾಜಿಸಲಾಗಿದೆ. ಇದು ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಶೇ.25ರ ಮಿತಿಯೊಳಗಿರುತ್ತದೆ ಎಂದು ತಿಳಿಸಿದರು. ಹಿಂದಿನ ಸಮ್ಮಿಶ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅತಿವೃಷ್ಟಿ ಹಿನ್ನೆಲೆಯಲ್ಲಿ ಇತಿಮಿತಿಗಳಲ್ಲೇ ತೆರಿಗೆ ಸಂಗ್ರಹಿಸುವ ಗುರಿ ಇದೆ ಎಂದು ಹೇಳಿದರು.

ಸದ್ಬಳಕೆಗೆ ಕುಮಾರಸ್ವಾಮಿ ಸಲಹೆ: ಜೆಡಿಎಸ್‌ ಶಾಸಕಾಂಗ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮಾತ ನಾಡಿ, ಸಂಪನ್ಮೂಲದ ಸದ್ಬಳಕೆಗೆ ಗಮನ ನೀಡಬೇಕು. 2017-18ನೇ ಸಾಲಿನಲ್ಲಿ 17,000 ಕೋಟಿ ರೂ.ಖರ್ಚಾಗದೆ ಉಳಿದಿದೆ ಎಂದು ಮಹಾಲೇಖಪಾಲರ ವರದಿಯಲ್ಲಿದೆ. ಪೂರಕ ಅಂದಾಜಿನಲ್ಲೂ 2,500 ಕೋಟಿ ರೂ.ಖರ್ಚಾಗದೆ ಉಳಿದಿರುವ ಬಗ್ಗೆಯೂ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.

2019-2020ನೇ ಸಾಲಿನಲ್ಲಿ ನೆರೆಯಿಂದ ಹಾಳಾದ ರಸ್ತೆ, ಸೇತುವೆ ನಿರ್ಮಾಣ ದುರಸ್ತಿಗೆ 468 ಕೋಟಿ ರೂ.ಮೊತ್ತ ಸೇರ್ಪಡೆ ಮಾಡಲಾಗಿತ್ತು. ಅದನ್ನು ತಿರಸ್ಕರಿಸಿರು ವುದು ಸರಿಯಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್‌ರಾಜ್‌ ಇಲಾಖೆಯಲ್ಲಿ 800 ಕೋಟಿ ರೂ.ಮೊತ್ತದ ಯೋಜನೆಗಳನ್ನು ಸ್ಥಗಿತಗೊಳಿಸಿದ್ದು, ಮುಂದುವರಿ ಸಬೇಕು. ಹೈ-ಕ ಭಾಗಕ್ಕೆ ನೀಡಲಾಗಿದ್ದ ಅನುದಾನ ಕಡಿತ ವಾಗಬಾರದು. 2018-19ನೇ ಸಾಲಿನಲ್ಲಿ ಸಚಿವ ಸಂಪು ಟದ ಒಪ್ಪಿಗೆ ಪಡೆದ ಯೋಜನೆಗಳ ಮೊತ್ತ ಕಡಿತಗೊಳಿಸದೆ ಮುಂದುವರಿಸಬೇಕು ಎಂದು ಮನವಿ ಮಾಡಿದರು.

ಆರ್‌.ವಿ.ದೇಶಪಾಂಡೆ ಮಾತನಾಡಿ, ದೇಶದ ಹಲವೆಡೆ ಕೈಗಾರಿಕೆ, ಕೃಷಿ ಕ್ಷೇತ್ರದಲ್ಲಿ ಆರ್ಥಿಕ ಹಿಂಜರಿತ ಇದೆ. ಅದರ ಪರಿಣಾಮ ಆದಾಯ ಸಂಗ್ರಹದ ಮೇಲೆ ಬೀರುತ್ತದೆ. ಹೊಸ ಕೈಗಾರಿಕಾ ನೀತಿ ಜಾರಿಗೊಳಿಸಿ, ಹೂಡಿಕೆಗೆ ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿ, ರಾಜ್ಯದ ಹಣಕಾಸಿನ ಸ್ಥಿತಿಗೆ ಅನುಗುಣವಾಗಿ ಎಲ್ಲರ ನಿರೀಕ್ಷೆ ತಲುಪಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ನಂತರ, ವಿಧಾನಸಭೆಯಲ್ಲಿ ಧನವಿನಿಯೋಗ ವಿಧೇಯಕಕ್ಕೆ ಅನುಮೋದನೆ ಪಡೆಯಲಾಯಿತು. ನಂತರ ವಿಧಾನ ಪರಿಷತ್‌ನಲ್ಲೂ ವಿಧೇಯಕ ಮಂಡಿಸಿ ಯಡಿಯೂರಪ್ಪ ಅನುಮೋದನೆ ಪಡೆದರು.

ಆರ್ಥಿಕ ಹಿಂಜರಿತ ಇದೆ – ಸಿದ್ದರಾಮಯ್ಯ: ಧನಿವಿನಿಯೋಗ ವಿಧೇಯಕ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಂದಾದರೂ ಎರಡೆರಡು ಬಾರಿ ಲೇಖಾನುದಾನ ಪಡೆಯುವುದನ್ನು ಕೊನೆಗಾಣಿಸಬೇಕು ಎಂದು ಹೇಳಿದರು. ದೇಶದಲ್ಲಿ ಆರ್ಥಿಕ ಹಿಂಜರಿತ ಇದೆ. 2017-18ನೇ ಸಾಲಿನಲ್ಲಿ ಶೇ.7ರಷ್ಟಿದ್ದ ಜಿಡಿಪಿ ಬೆಳವಣಿಗೆ ದರ ಶೇ.5ಕ್ಕೆ ಕುಸಿದಿದೆ. ರಿಯಲ್‌ ಎಸ್ಟೇಟ್‌ ಉದ್ಯಮ ಕುಸಿದಿದೆ. ಹೂಡಿಕೆ ಕಡಿಮೆಯಾಗಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ವಾಹನ ಖರೀದಿ ಉತ್ತೇಜಕವಾಗಿಲ್ಲದ ಕಾರಣ ವಾಹನ ನೋಂದಣಿ ತೆರಿಗೆ ಆದಾಯ ಕುಸಿದಿದೆ.

ಇದು ಜಿಡಿಪಿ ಮೇಲೆ ಪರಿಣಾಮ ಬೀರಲಿದೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು. ಹಿಂದೆ ಕೇಂದ್ರ ಹಣಕಾಸು ಸಚಿವರಾಗಿದ್ದ ಪಿಯೂಷ್‌ ಗೋಯೆಲ್‌ ಮಂಡಿಸಿದ 2019-2020ನೇ ಸಾಲಿನ ಬಜೆಟ್‌ನಲ್ಲಿ ಕೇಂದ್ರದಿಂದ ರಾಜ್ಯಕ್ಕೆ 39,000 ಕೋಟಿ ರೂ.ನೀಡುವುದಾಗಿ ಪ್ರಕಟಿಸಿದ್ದರು. ಆದರೆ, ಹಾಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕೇಂದ್ರದಿಂದ ಬರಬೇಕಾದ ಪಾಲಿನಲ್ಲಿ 1,672 ಕೋಟಿ ರೂ.ಕಡಿತಗೊಳಿಸಿದ್ದಾರೆ. ಯಡಿಯೂರಪ್ಪ ಅವರು ಕೇಂದ್ರದ ಮೇಲೆ ಒತ್ತಡ ಹೇರಿ ಆ ಹಣ ಪಡೆಯಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.