RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ
Team Udayavani, Dec 16, 2024, 9:00 PM IST
ಸುವರ್ಣ ವಿಧಾನಸೌಧ: ಆರ್‌ಟಿಇ ಕಾಯ್ದೆಯಡಿ 1-8ನೇ ತರಗತಿಯವರೆಗೆ ಸರ್ಕಾರವೇ ನೀಡುತ್ತಿರುವ ಪ್ರವೇಶ ಶುಲ್ಕವನ್ನು 8 ರಿಂದ ದ್ವಿತಿಯ ಪಿಯುವರೆಗೂ ಯೋಜನೆಯನ್ನು ವಿಸ್ತರಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಎಂ.ಎಲ್.ಅನಿಲಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 28 ಸಾವಿರ ಮಕ್ಕಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಾಗುತ್ತಿದೆ.
ಪ್ರಸ್ತುತ ರಾಜ್ಯ ಪಠ್ಯಕ್ರಮದ 6-10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ.
6-14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ, ಕಡ್ಡಾಯ ಶಿಕ್ಷಣ ನೀಡುವುದು ಆರ್‌ಟಿಇ ಉದ್ದೇಶವಾಗಿದೆ ಎಂದರು.
ಅನುದಾನಿತ ಪಿಯು ಕಾಲೇಜಿನಲ್ಲಿ 3,355 ಬೋಧಕರ ಹುದ್ದೆ ಖಾಲಿ
ಸುವರ್ಣ ವಿಧಾನಸೌಧ: ರಾಜ್ಯದ ಖಾಸಗಿ ಅನುದಾನಿತ ಪಿಯು ಕಾಲೇಜುಗಳಲ್ಲಿ 3,355 ಬೋಧಕ ಮತ್ತು 1,623 ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ವಿಧಾನಪರಿಷತ್‌ದಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ 2024ರ ನಿಯಮಗಳ ಪ್ರಕಾರ ಅರ್ಹತೆಯನ್ನು ಹೊಂದುವ ಪ್ರಸ್ತಾವನೆಗಳನ್ನು ನಿಯಮಾನುಸಾರ ಪರಿಶೀಲಿಸಿ ಅನುದಾನಿತ ಪಿಯು ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
MUST WATCH
ಹೊಸ ಸೇರ್ಪಡೆ
Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು
Saif Ali Khan: ನಟ ಸೈಫ್ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು
ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.