Russia-North Korea: ಬಾಂಧವ್ಯ ವೃದ್ಧಿಗೆ ರಷ್ಯಾ- ಉತ್ತರ ಕೊರಿಯಾ ಒತ್ತು
ಪಾಂಗ್ಯಾಂಗ್‌ಗೆ ಭೇಟಿ ನೀಡಿದ ರಷ್ಯಾ ವಿದೇಶಾಂಗ ಸಚಿವ ಲಾರ್ವೋ
Team Udayavani, Oct 19, 2023, 8:18 PM IST
ಸಿಯೋಲ್: ಉತ್ತರ ಕೊರಿಯಾ ಮತ್ತು ರಷ್ಯಾ ತಮ್ಮ ನಡುವಿನ ಬಾಂಧವ್ಯವನ್ನು ಮತ್ತಷ್ಟು ವಿಸ್ತರಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸಿವೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಮರ, ಉಕ್ರೇನ್ ಮೇಲೆ ರಷ್ಯಾದ ದಾಳಿ ಮುಂದುವರಿದಿರುವಂತೆಯೇ ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾರ್ವೋ ಅವರು ಗುರುವಾರ ಉತ್ತರ ಕೊರಿಯಾ ರಾಜಧಾನಿ ಪಾಂಗ್ಯಾಂಗ್‌ಗೆ ಭೇಟಿ ನೀಡಿದ್ದಾರೆ. ಎರಡು ದೇಶಗಳ ನಡುವೆ ಮಿಲಿಟರಿ ಸಹಕಾರಗಳನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಶೀಘ್ರದಲ್ಲಿಯೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉತ್ತರ ಕೊರಿಯಾಕ್ಕೆ ಭೇಟಿ ನೀಡಿ, ಅಲ್ಲಿನ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜತೆಗೆ ನಡೆಸಲಿರುವ ಉನ್ನತ ಮಟ್ಟದ ಮಾತುಕತೆ ಮತ್ತು ಸಂಭಾವ್ಯ ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ತಮ್ಮ ಭೇಟಿಯ ಬಗ್ಗೆ ಮಾತನಾಡಿದ ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾರ್ವೋ “ರಷ್ಯಾದ ವೊಸ್ಟೋಚಿನಿ ಕೊಸ್ಮೊಡಾರ್‌ನಲ್ಲಿ ಸೆ.13ರಂದು ಉತ್ತರ ಕೊರಿಯಾ ಮುಖ್ಯಸ್ಥ ಕಿಮ್ ಜಾಂಗ್ ಉನ್ ಅವರು ನಮ್ಮ ಅಧ್ಯಕ್ಷರನ್ನು ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಅವರು ಪುಟಿನ್‌ಗೆ ಆಹ್ವಾನ ನೀಡಿದ್ದರು. ಆದರೆ, ಭೇಟಿಯ ದಿನಾಂಕ ನಿಗದಿಯಾಗಿಲ್ಲ. ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ಒಂದು ನಿರ್ಣಾಯ ಘಟ್ಟಕ್ಕೆ ತಲುಪಿದೆ ಎಂದು ಹೇಳಲು ಸಂತೋಷವಾಗುತ್ತಿದೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳ ಒತ್ತಡಕ್ಕೆ ಮಣಿಯದೆ ಉತ್ತರ ಕೊರಿಯಾ ಮುಖ್ಯಸ್ಥ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ರಷ್ಯಾ ವಿದೇಶಾಂಗ ಸಚಿವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.