ಅಕ್ಟೋಬರ್ ನಲ್ಲಿ ರಷ್ಯಾದ ಲಸಿಕೆ ಬಳಕೆಗೆ ಸಿದ್ಧ
Team Udayavani, Aug 2, 2020, 11:06 AM IST
ಮಾಸ್ಕೋ: ಇಡೀ ಜಗತ್ತೇ ಕೋವಿಡ್ ಸೋಂಕಿಗೆ ಲಸಿಕೆ ಕಂಡುಹಿಡಿಯುವ ನಿಟ್ಟಿನಲ್ಲಿ ಪೈಪೋಟಿಗೆ ಬಿದ್ದಿರುವ ನಡುವೆಯೇ, ರಷ್ಯಾವು ಲಸಿಕೆಯೊಂದರ ಪ್ರಯೋಗವನ್ನು ಪೂರ್ಣಗೊಳಿಸಿ ಅಕ್ಟೋಬರ್‌ನಲ್ಲೇ ದೇಶಾದ್ಯಂತ ಸಾಮೂಹಿಕ ಲಸಿಕೆ ಅಭಿಯಾನ ನಡೆಸಲು ಮುಂದಾಗಿದೆ.
ರಷ್ಯಾ ಆರೋಗ್ಯ ಸಚಿವ ಮಿಖಾಯಿಲ್ ಮುರಶೊ ಅವರೇ ಶನಿವಾರ ಈ ಮಾಹಿತಿ ನೀಡಿದ್ದಾರೆ. ಮಾಸ್ಕೋದಲ್ಲಿರುವ ಸರ್ಕಾರಿ ಸ್ವಾಮ್ಯದ ಸಂಶೋಧನಾ ಕೇಂದ್ರ ಗಮ ಲೇಯಾ ಇನ್‌ಸ್ಟಿಟ್ಯೂಟ್ ಈಗಾಗಲೇ ಲಸಿಕೆಯನ್ನು ಮಾನವನ ಮೇಲೆ ಪ್ರಯೋಗಿಸುವ ಹಂತಗಳನ್ನು ಪೂರ್ಣಗೊಳಿಸಿದೆ. ಪ್ರಸ್ತುತ ಲಸಿಕೆಯ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವ ಮುರಶೊ ಹೇಳಿದ್ದಾರೆ. ಆರಂಭದಲ್ಲಿ ವೈದ್ಯರು ಮತ್ತು ಶಿಕ್ಷಕರಿಗೆ ಲಸಿಕೆ ನೀಡಲಾಗುವುದು. ಅಕ್ಟೋಬರ್‌ನಿಂದ ವ್ಯಾಪಕ ಲಸಿಕೆ ಅಭಿಯಾನ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪಾಶ್ಚಾತ್ಯ ಮಾಧ್ಯಮಗಳಿಂದ ಟೀಕೆ ಹಲವು ದೇಶಗಳು ಕೋವಿಡ್ ಸೋಂಕಿಗೆ ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯದಲ್ಲಿ ನಿರತವಾಗಿವೆ. ಇನ್ನೂ ಯಾವುದೇ ದೇಶ ನಿರ್ಣಾಯಕ ಹಂತಕ್ಕೆ ತಲುಪಿಲ್ಲ. ಹೀಗಿರುವಾಗ ರಷ್ಯಾವು ಅಷ್ಟೊಂದು ತ್ವರಿತವಾಗಿ ಲಸಿಕೆಯನ್ನು ಬಿಡುಗಡೆ ಮಾಡಲು ಹಾತೊರೆಯುತ್ತಿರುವುದು ನೋಡಿದಾಗ, ಆ ದೇಶಕ್ಕೆ ವಿಜ್ಞಾನ ಮತ್ತು ಸುರಕ್ಷತೆಗಿಂತಲೂ ರಾಷ್ಟ್ರೀಯ ಘನತೆಯೇ ಮುಖ್ಯವೇ ಎಂಬ ಪ್ರಶ್ನೆ ಮೂಡುತ್ತದೆ ಎಂದು ಪಾಶ್ಚಾತ್ಯ ಮಾಧ್ಯಮಗಳು ಪ್ರಶ್ನಿಸಿವೆ.
ಇದೇ ವೇಳೆ, ರಷ್ಯಾದ ನೇರ ಹೂಡಿಕೆ ನಿಧಿ ಮುಖ್ಯಸ್ಥ ಕಿರಿಲ್ ಡಿಮಿಟ್ರಿವ್ ಅವರು ಕೋವಿಡ್ ಲಸಿಕೆ ಅಭಿವೃದ್ಧಿಯನ್ನು ಸೋವಿಯತ್ ಒಕ್ಕೂಟವು 1957ರಲ್ಲಿ ಜಗತ್ತಿನ ಮೊದಲ ಉಪಗ್ರಹ ಉಡಾವಣೆ ಮಾಡಿ ಇತಿ ಹಾಸ ಸೃಷ್ಟಿಸಿದ ಘಟನೆಗೆ ಹೋಲಿಸಿದ್ದಾರೆ. ರಷ್ಯಾದಲ್ಲಿ ಈ ವರೆಗೆ 8.45 ಲಕ್ಷ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 14,058 ಮಂದಿ ಸಾವಿಗೀಡಾಗಿದ್ದಾರೆ.
100 ಲಸಿಕೆ ಪ್ರಯೋಗ
ಭಾರತವೂ ಸೇರಿದಂತೆ ವಿವಿಧ ದೇಶಗಳು ಒಟ್ಟಾರೆ 100ಕ್ಕೂ ಅಧಿಕ ಲಸಿಕೆಗಳ ಪ್ರಯೋಗದಲ್ಲಿ ತೊಡಗಿವೆ. ಈ ಪೈಕಿ ಕನಿಷ್ಠ 4 ಲಸಿಕೆಗಳು (ಚೀನದ 3, ಬ್ರಿಟನ್‌ನ 1) ಮಾನವನ ಮೇಲಿನ ಮೂರನೇ ಹಂತದ ಪ್ರಯೋಗದಲ್ಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.