ಸಕಲೇಶಪುರ: ಆತಂಕ ಹುಟ್ಟಿಸಿದ್ದ ಬೃಹತ್ ಕಾಳಿಂಗ ಸರ್ಪ ಹಿಡಿದ ಸ್ನೇಕ್ ಸಗೀರ್
Team Udayavani, Jan 10, 2022, 3:38 PM IST
ಸಕಲೇಶಪುರ: ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಉರಗ ಪ್ರೇಮಿ ಸಗೀರ್ ಅವರು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಒಪ್ಪಿಸಿದ್ದಾರೆ.
ಹಾನುಬಾಳ್ ಹೋಬಳಿ ಹೆಬ್ಬಸಾಲೆ ಗ್ರಾ.ಪಂ ವ್ಯಾಪ್ತಿಯ ಕುಂಬರಡಿ ಗ್ರಾಮದ ನಿಂಗಪ್ಪ ಎಂಬುವರ ಕಾಫಿ ತೋಟದಲ್ಲಿ ಕಾಳಿಂಗಸರ್ಪವೊಂದು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯವರು ಆತಂಕಗೊಂಡು ಸ್ಥಳೀಯರ ಸಹಾಯದಿಂದ ಹಾವಿನ ಚಲನವಲನಗಳನ್ನು ಗಮನಿಸಿ ಪಟ್ಟಣದ ಉರಜ ತಜ್ಞ ಸಗೀರ್‌ರವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಸಗೀರ್, ಗ್ರಾಮಸ್ಥರುಗಳಾದ ಶಶಿಧರ್, ಸುರೇಶ್, ತನುಜ್, ವಿಜಿತ್‌ರವರ ಸಹಾಯದಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಒಪ್ಪಿಸಿದರು.
ಕಳೆದ ಹಲವಾರು ದಿನಗಳಿಂದ ಸುಮಾರು 11 ಅಡಿ ಉದ್ದದ ಈ ಕಾಳಿಂಗ ಸರ್ಪ ನಿಂಗಪ್ಪ ಹಾಗೂ ಅಕ್ಕಪಕ್ಕದ ಕಾಫಿ ತೋಟಗಳಲ್ಲಿ ಸಂಚರಿಸಿ ಗ್ರಾಮಸ್ಥರಲ್ಲಿ ಆತಂಕ ಹುಟ್ಟುಹಾಕಿತ್ತು. ಸ್ನೇಕ್ ಸಗೀರ್‌ರವರ ಗ್ರಾಮಸ್ಥರ ಸಹಕಾರದಿಂದ ಕಾಳಿಂಗಸರ್ಪವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು ಗ್ರಾಮಸ್ಥರಲ್ಲಿ ನೆಮ್ಮದಿ ತಂದಿದೆ. ಸುಮಾರು 9000ಕ್ಕೂ ಹೆಚ್ಚು ಹಾವುಗಳನ್ನು ಸ್ನೇಕ್ ಸಗೀರ್ ಯಾವುದೆ ಪ್ರತಿಫಲದ ಅಪೇಕ್ಷೆಯಿಲ್ಲದೆ ಹಿಡಿದಿದ್ದು ಇವರಿಗೆ ಅರಣ್ಯ ಇಲಾಖೆ ಸೂಕ್ತ ನೆರವು ಕಲ್ಪಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.