MDMA ಡ್ರಗ್ಸ್ ಮಾರಾಟ; ಇಬ್ಬರ ಸೆರೆ
Team Udayavani, Nov 10, 2023, 1:02 AM IST
ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 95,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಂಜೇಶ್ವರ ಹೊಸಬೆಟ್ಟು ಗುಡ್ಡೆಕೇರಿಹೌಸ್‌ನ ಮುಸ್ತಫಾ (37) ಮತ್ತು ಕುಂಜತ್ತೂರು ಮಜಲಗುಡ್ಡ ಮೂಲದ ಪ್ರಸ್ತುತ ಕೋಟೆಕಾರ್ ಬೀರಿ ಸರಕಾರಿ ಶಾಲೆ ಬಳಿಯಲ್ಲಿ ವಾಸವಾಗಿರುವ ಶಂಶುದ್ದೀನ್ ಎ. (38) ಬಂಧಿತ ಆರೋಪಿಗಳು.
ನ. 9ರಂದು ತಲಪಾಡಿ ಕೆ.ಸಿ. ರೋಡ್‌ನ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸೊತ್ತುಗಳ ಒಟ್ಟು ಮೌಲ್ಯ 95 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರು ಮಾರ್ಗದರ್ಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.