ಆನೆ ದಂತ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ, ಪ್ರಮುಖ ಆರೋಪಿ ಎಸ್ಕೇಪ್
Team Udayavani, Jun 30, 2022, 11:55 AM IST
ಹುಣಸೂರು: ಆನೆ ದಂತಗಳನ್ನು ಅಪಹರಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆಯೇ ನಾಗರಹೊಳೆ ಉದ್ಯಾನದ ಸಿಬ್ಬಂದಿ ಹಾಗೂ ವಿಶೇಷ ಹುಲಿ ಸಂರಕ್ಷಣಾ ದಳದ ಪ್ಲಟೂನ್-3 ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ನಾಲ್ಕು ಮಂದಿ ಆರೋಪಿಗಳನ್ನು ದಂತ ಹಾಗೂ ವಾಹನಗಳ ಸಮೇತ ಬಂದಿಸಿ, ಪ್ರಕರಣ ದಾಖಲಿಸಿದ್ದಾರೆ.
ಹುಣಸೂರು ತಾಲೂಕಿನ ಆಜಾದ್‌ನಗರ, ಉದ್ದೂರು, ಮೈಸೂರು ಹಾಗೂ ಎಚ್.ಡಿ.ಕೋಟೆ ತಾಲೂಕಿನ ಕೈಲಾಸಪುರದ ತಲಾ ಒಬ್ಬರಂತೆ ನಾಲ್ವರು ಆರೋಪಿಗಳನ್ನು ಬಂದಿಸಿದ್ದು, ಒಬ್ಬ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ಕೃತ್ಯಕ್ಕೆ ಬಳಸಿದ್ದ ಒಂದು ಕಾರು ಹಾಗೂ ಆಟೋವನ್ನು ವಶಪಡಿಸಿಕೊಂಡಿದ್ದಾರೆ.
ಇವರು ಆನೆ ದಂತವನ್ನು ಮಾರಾಟ ಮಾಡುವ ಬಗ್ಗೆ ಬಂದ ಮಾಹಿತಿ ಮೇರೆಗೆ ಕೈಲಾಸಪುರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಪಡೆಯಲಾಗಿದೆ.
ಕಾರ್ಯಾಚರಣೆಯಲ್ಲಿ ನಾಗರಹೊಳೆ ಉದ್ಯಾನವನ ಹುಲಿ ಯೋಜನೆಯ ನಿರ್ಧೇಶಕರು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ವೀರನಹೊಸಹಳ್ಳಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ನಮನ್ ನಾರಾಯಣ ನಾಯಕ್ ಹಾಗೂ ಸಿಬ್ಬಂದಿ, ವಿಶೇಷ ಹುಲಿ ಸಂರಕ್ಷಣಾ ದಳದ ಪ್ಲಟೂನ್-3 ರ ಸಿಬ್ಬಂದಿಗಳು ಭಾಗವಹಿಸಿದ್ದರೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಹಾಡಹಗಲೇ ಕಾರು ಅಡ್ಡಗಟ್ಟಿ ರಾಬರಿ; ಹಣದೊಂದಿಗೆ ಕಾರು ಕೂಡಾ ದೋಚಿದರು!
Hunasur: ಪ್ರೇಯಸಿಗೆ ಚಿನ್ನ ಖರೀದಿಸಲು ಎಟಿಎಂ ಗೆ ತುಂಬಬೇಕಿದ್ದ ಹಣ ಎಗರಿಸಿದ ಯುವಕ
Mysuru ಮುಟ್ಟುಗೋಲು: 142 ನಿವೇಶನ ಮಾಹಿತಿ ಬಹಿರಂಗಕ್ಕೆ ಸ್ನೇಹಮಯಿ ಕೃಷ್ಣ ಒತ್ತಾಯ
ತ್ರಿವೇಣಿ ಸಂಗಮ ಕುಂಭಮೇಳಕ್ಕೆ 10 ಕೋಟಿ ರೂ. ಪ್ರಸ್ತಾವನೆ: ಸಚಿವ ಮಹದೇವಪ್ಪ
Mysuru: ಸಿದ್ದರಾಮಯ್ಯ ಹೆಸರು ದುರ್ಬಳಕೆಗೆ ಇ.ಡಿ. ಮೂಲಕ ಯತ್ನ; ಯತೀಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.