ಅಖಂಡ ಶ್ರೀನಿವಾಸ್ ಕಾಂಗ್ರೆಸ್ ಬಿಡುವುದಿಲ್ಲ: ಸಲೀಂ ಅಹಮದ್
Team Udayavani, Aug 17, 2020, 10:32 AM IST
ಬೆಂಗಳೂರು: ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎನ್ನುವುದು ಕೇವಲ ವದಂತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಡಿ. ಜೆ. ಹಳ್ಳಿ ಗಲಭೆಯ ಲಾಭ ಪಡೆಯಲು ಬಿಜೆಪಿ ಪ್ರಯತ್ನಿಸಿರಬಹುದು. ಆದರೆ ಶ್ರೀನಿವಾಸ ಮೂರ್ತಿ ಕಾಂಗ್ರೆಸ್ನಲ್ಲಿಯೇ ಇದ್ದಾರೆ. ಮುಂದೆಯೂ ಇರುತ್ತಾರೆ. ಅವರ ತಂದೆ ಕೂಡ ಕಾಂಗ್ರೆಸ್ಸಿನಲ್ಲೇ ಇದ್ದವರು ಎಂದರು.
ಗಲಭೆ ಹಿಂದೆ ಬಿಬಿಎಂಪಿ ಸದಸ್ಯ ಸಂಪತ್ ರಾಜ್ ಕೈವಾಡ ಇದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಸಲೀಂ, ಇದೆಲ್ಲ ಸುಳ್ಳು. ಈಗಾಗಲೇ ತನಿಖೆ ನಡೆಯುತ್ತಿದ್ದು, ಗಲಭೆಗೆ ಯಾರು ಕಾರಣ ಎನ್ನುವುದು ಗೊತ್ತಾಗಲಿದೆ. ಸಂಪತ್ ರಾಜ್ಗೆ ಸಿ.ವಿ. ರಾಮನ್ ನಗರ ಕ್ಷೇತ್ರವಿದೆ. ಅವರೇಕೆ ಪುಲಕೇಶಿ ನಗರಕ್ಕೆ ಬರುತ್ತಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.