Dharamsthala: ಧರ್ಮಸ್ಥಳದಲ್ಲಿ ಸಮವಸರಣ ಪೂಜೆ
Team Udayavani, Dec 15, 2023, 12:38 AM IST
ಬೆಳ್ತಂಗಡಿ: ಪಂಚನಮಸ್ಕಾರ ಮಂತ್ರಪಠಣ, ಭಜನೆ, ಸ್ತೋತ್ರ, ಪೂಜಾಮಂತ್ರ ಪಠಣ, ಅಷ್ಟ ವಿಧಾರ್ಚನೆ, ಶ್ಲೋಕಗಳ ಪಠಣ, ನೃತ್ಯ ಪ್ರದರ್ಶನ ಮೊದಲಾದ ಕಾರ್ಯಕ್ರಮಗಳೊಂದಿಗೆ ಬುಧವಾರ ರಾತ್ರಿ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ವೈಭವದಿಂದ ನಡೆಯಿತು.
ಹೆಗ್ಗಡೆಯವರ ನಿವಾಸದಿಂದ ಮಹೋತ್ಸವ ಸಭಾಭವನಕ್ಕೆ ಭವ್ಯ ಮೆರವಣಿಗೆಯ ಬಳಿಕ ಅಲ್ಲಿ ಅಷ್ಟವಿಧಾರ್ಚನೆ ಪೂಜೆ ನಡೆಯಿತು. ಶಿಶಿರ ಇಂದ್ರರು ಮಂತ್ರ ಪಠಿಸಿದರು. ಸೌಮ್ಯಾ, ಮಂಜುಳಾ, ಸಾವಿತ್ರಿ ಮತ್ತು ಅರುಣಾ ಅವರ ಹಾಡಿಗೆ ತಬಲಾವಾದಕರಾಗಿ ಶೋಧನ್, ಧರ್ಮಸ್ಥಳ ಮತ್ತು ಹಾರ್ಮೋನಿಯಂನಲ್ಲಿ ರವಿರಾಜ್ ಉಜಿರೆ ಸಹಕರಿಸಿದರು.
ಹೇಮಾವತಿ ವೀ. ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜಿನ ಸಾಂಸ್ಕೃತಿಕ ಕಲಾಕೇಂದ್ರದ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನದ ಮೂಲಕ ಸಾದರಪಡಿಸಿದರು. ಚೈತ್ರಾ, ಅರುಣ್ ಮತ್ತು ಸುನಿಲ್ ನಿರ್ದೇಶನ ನೀಡಿದರು. ಅನಿತಾ ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಪ್ರಿಯದರ್ಶಿನಿ, ರಜತಾ ಮತ್ತು ಬಾಹುಬಲಿ ಸೇವಾ ಸಮಿತಿಯ ಸದಸ್ಯರು ಅಷ್ಟವಿಧಾರ್ಚನೆ ಪೂಜೆಯಲ್ಲಿ ಭಾಗವಹಿಸಿದರು.
ಗೌರವ
ಪಾಕತಜ್ಞರಾದ ಪಾಂಡಿರಾಜ ಕೊಕ್ರಾಡಿ ಮತ್ತು ಬಾಹುಬಲಿ, ಪಿಲ್ಯ ಅವರನ್ನು ಗೌರವಿಸಲಾಯಿತು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು. ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.
ಸಮವಸರಣ ಎಂನರೇನು?
ಕೇವಲಜ್ಞಾನ ಪಡೆದ ಬಳಿಕ ತೀರ್ಥಂಕರರು ತಮ್ಮ ದಿವ್ಯಧ್ವನಿಯಿಂದ ಧರ್ಮೋಪದೇಶ ನೀಡುವ ಸಭೆಗೆ ಸಮವಸರಣ ಎನ್ನುತ್ತಾರೆ. ಇಲ್ಲಿ ಸಕಲ ಜೀವಿಗಳಿಗೂ ಅವರವರ ಭಾಷೆಯಲ್ಲಿ ಧರ್ಮೋಪದೇಶ ಕೇಳುವ ಅವಕಾಶವಿದೆ. ಸಮವಸರಣದಲ್ಲಿ ದೇವತೆಗಳೇ ವಿಭಿನ್ನ ರೂಪವನ್ನು ತಳೆದು ಭಗವಂತನ ಮಹಿಮೆಯನ್ನು ತಿಳಿಸುತ್ತಾರೆ ಎಂದು ಮೂಡುಬಿದಿರೆ ಜೈನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.