ಆ. 10ರಂದು ಕೆಸಿಝಡ್‌ಎಂ ಮಹತ್ವದ ಸಭೆ : ಸೆಪ್ಟಂಬರ್‌ನಲ್ಲಿ ಸಿಆರ್‌ಝಡ್‌ ಮರಳುಗಾರಿಕೆ ಆರಂಭ?


Team Udayavani, Aug 2, 2020, 10:05 AM IST

ಆ. 10ರಂದು ಕೆಸಿಝಡ್‌ಎಂ ಮಹತ್ವದ ಸಭೆ : ಸೆಪ್ಟಂಬರ್‌ನಲ್ಲಿ ಸಿಆರ್‌ಝಡ್‌ ಮರಳುಗಾರಿಕೆ ಆರಂಭ?

ಮಂಗಳೂರು: ಕರಾವಳಿಯ ನಿಯಂತ್ರಣ ವಲಯ (ಸಿಆರ್‌ಝಡ್‌) ದಲ್ಲಿ ಮರಳುಗಾರಿಕೆಗೆ ಅನುಮತಿಸುವ ಬಗ್ಗೆ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿ (ಕೆಸಿಝಡ್‌ಎಂ) ಸಭೆಯು ಆ. 10ರಂದು ಬೆಂಗಳೂರಿನಲ್ಲಿ ನಿಗದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಪ್ರಾರಂಭಿಸುವ ವಿಚಾರದಲ್ಲಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಪರಿಸರಾತ್ಮಕ ಕಾರಣಗಳಿಂದ ಸಿಆರ್‌ಝಡ್‌ ವಲಯದಲ್ಲಿ ಜೂನ್‌ನಿಂದ ಜಾರಿಯಲ್ಲಿದ್ದ ಮರಳುಗಾರಿಕೆ ನಿಷೇಧ ಆ. 15ಕ್ಕೆ ಕೊನೆಗೊಳ್ಳಲಿದೆ. ಆದರೆ ಇಲ್ಲಿ ಹೊಸದಾಗಿ ಮರಳುಗಾರಿಕೆ ಆರಂಭಿಸಲು ಕೆಸಿಝಡ್‌ಎಂ ಅನುಮತಿ ಅಗತ್ಯ.ಈಗಾಗಲೇ ಜಿಲ್ಲಾಡಳಿತದಿಂದ ರವಾನೆ ಯಾಗಿರುವ ವರದಿಯನ್ನು ಈ ಸಭೆಯು ಪರಿಶೀಲಿಸಿ ಅನುಮತಿ ನೀಡುವ ಸಾಧ್ಯತೆಗಳಿದ್ದು, ಸೆಪ್ಟಂಬರ್‌ ಮೊದಲ ವಾರದಲ್ಲಿ ಮರಳುಗಾರಿಕೆ ಆರಂಭಗೊಳ್ಳುವ ನಿರೀಕ್ಷೆ ಇದೆ.

ಸಿಆರ್‌ಝಡ್‌ ಮರಳುಗಾರಿಕೆ ಕುರಿತು ಬುಧವಾರ ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಾಸಕರು, ಗಣಿ ಮತ್ತು ಭೂವಿಜ್ಞಾನಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಅನುಮತಿ ಪ್ರಕ್ರಿಯೆಯನ್ನು ಶೀಘ್ರ ಪೂರೈಸುವ ನಿಟ್ಟಿನಲ್ಲಿ ಆ. 10ರಂದು ಕೆಸಿಝಡ್‌ಎಂ ಸಭೆ ನಡೆಸಲು ನಿರ್ಧರಿಸಲಾಗಿದೆ.

7 ತಿಂಗಳಿಂದ ಸ್ಥಗಿತ
ಜಿಲ್ಲೆಯಲ್ಲಿ ಮರಳುಗಾರಿಕೆ ಸಂಪೂರ್ಣ ಸ್ಥಗಿತಗೊಂಡು 7 ತಿಂಗಳು ಕಳೆದಿವೆ. ಈ ಬಾರಿಯ ಬ್ಯಾಥಮೆಟ್ರಿಕ್ಸ್‌ ಸರ್ವೆಯಲ್ಲಿ ನೇತ್ರಾವತಿ, ಫಲ್ಗುಣಿ ಹಾಗೂ ಶಾಂಭವಿ ನದಿಯಲ್ಲಿ ಹೊಸದಾಗಿ ಗುರುತಿಸಿರುವ ಮರಳು ದಿಬ್ಬಗಳ ವರದಿಯ
ಬಗ್ಗೆ ಎನ್‌ಐಟಿಕೆ ಸಲ್ಲಿಸಿರುವ ತಾಂತ್ರಿಕ ವರದಿಯನ್ನು ಜಿಲ್ಲಾ ಧಿಕಾರಿಯವರ ಅಧ್ಯಕ್ಷತೆಯಲ್ಲಿರುವ ಸಿಆರ್‌ಝಡ್‌, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಗಳನ್ನು ಒಳಗೊಂಡ ಸಮಿತಿ ಪರಿಶೀಲನೆ ನಡೆಸಿ ಮೇಯಲ್ಲಿ ಕೆಸಿಝಡ್‌ಎಂಗೆ ಕಳುಹಿಸಿ ಕೊಟ್ಟಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಸಮಿತಿಯ ಸಭೆ ನಡೆದಿರಲಿಲ್ಲ.

ಮರಳು ಕೊರತೆ
ಲಾಕ್‌ಡೌನ್‌ ತೆರವುಗೊಂಡ ಬಳಿಕ ಜಿಲ್ಲೆಯಲ್ಲಿ ರಿಯಲ್‌ ಎಸ್ಟೇಟ್‌ ಚೇತರಿಸಿ ಕೊಂಡಿದ್ದು, ನಿರ್ಮಾಣ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ. ಇದೇ ಸಂದರ್ಭದಲ್ಲಿ ಮರಳು ಕೊರತೆ ಯಿಂದಾಗಿ ಸಮಸ್ಯೆಯಾಗಿದೆ. ಪ್ರಸ್ತುತ ನಾನ್‌ ಸಿಆರ್‌ಝಡ್‌ ವಲಯದಲ್ಲಿ ಈ ಹಿಂದೆ ಮಾಡಿರುವ ದಾಸ್ತಾನಿನಿಂದ ಮರಳು ಸರಬರಾಜು ಆಗುತ್ತಿದ್ದು ಅಲ್ಲೂ ಖಾಲಿ ಯಾಗಿದೆ.
ಸಿಆರ್‌ಝಡ್‌ ವಲಯದಲ್ಲಿ ಮರಳು ಗಾರಿಕೆ ಶೀಘ್ರ ಆರಂಭಗೊಳ್ಳದಿದ್ದರೆ ನಿರ್ಮಾಣ ಚಟುವಟಿಕೆಗಳಿಗೆ ತೀವ್ರ ಸಮಸ್ಯೆ ಯಾಗಲಿದೆ ಎಂದು ಮಂಗಳೂರು ಕ್ರೆಡೈ ಅಧ್ಯಕ್ಷ ನವೀನ್‌ ಕಾರ್ಡೊಜಾ ತಿಳಿಸಿದ್ದಾರೆ.

ಶೀಘ್ರ ಆರಂಭಕ್ಕೆ ಕ್ರಮ
ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಶೀಘ್ರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದ್ದು ಬುಧವಾರ ಬೆಂಗಳೂರಿನಲ್ಲಿ ಜಿಲ್ಲೆಯ ಶಾಸಕರನ್ನು ಹಾಗೂ ಇಲಾಖಾ ಅಧಿಕಾರಿಗಳನ್ನು ಒಳಗೊಂಡ ಸಭೆ ನಡೆದಿದೆ. ಆ. 10ರಂದು ಕೆಸಿಝಡ್‌ಎಂ ಸಭೆ ನಿಗದಿಪಡಿಸಲಾಗಿದೆ. ನಾನ್‌ ಸಿಆರ್‌ಝಡ್‌ನ‌ಲ್ಲಿ ರಾಜ್ಯ ಸರಕಾರದ ಹೊಸ ಮರಳು ನೀತಿಯಂತೆ ಗ್ರಾ.ಪಂ. ಮಟ್ಟದ ಹಾಗೂ ಇತರೆಡೆಗಳಲ್ಲಿ ಮರಳು ನಿರ್ವಹಣೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಆ. 4ರಂದು ಸಭೆ ಕರೆಯಲಾಗಿದೆ.
– ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.