ಸಚಿವಾಕಾಂಕ್ಷಿಗಳಿಂದ ಸಂತೋಷ್ ಭೇಟಿ?
Team Udayavani, Jan 21, 2020, 3:09 AM IST
ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ ಸಚಿವಾಕಾಂಕ್ಷಿ ಶಾಸಕರ ಪೈಕಿ ಕೆಲವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ದೆಹಲಿಯಲ್ಲಿ ಮಂಗಳ ವಾರ ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷ ರಾಗಿ ಜೆ.ಪಿ.ನಡ್ಡಾ ಅವರು ಸೋಮವಾರ ಚುನಾಯಿತರಾದ ಹಿನ್ನೆಲೆ ಯಲ್ಲಿ ಹಲವು ಸಚಿವಾಕಾಂಕ್ಷಿಗಳು ದೆಹಲಿಗೆ ತೆರಳಿ ನೂತನ ರಾಷ್ಟ್ರೀಯ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಕೆಲವರು ಮಂಗಳವಾರ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಕೆಲಹೊತ್ತು ಚರ್ಚಿಸಿದರು ಎಂದು ಹೇಳಲಾಗಿದೆ.
ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷ ರಾಗಿ ಜೆ.ಪಿ.ನಡ್ಡಾ ಅವರು ಚುನಾಯಿ ತ ರಾದ ಹಿನ್ನೆಲೆಯಲ್ಲಿ ಶಾಸಕರು, ಸಂಸದರು, ಸಚಿವರು ಭೇಟಿಯಾಗಿ ಶುಭ ಕೋರು ವುದು ಸಹಜ. ಹಾಗೆಯೇ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯ ದರ್ಶಿಗಳನ್ನೂ ಭೇಟಿಯಾಗಿರಬಹುದು. ಇದರಲ್ಲಿ ವಿಶೇಷವೇನೂ ಇಲ್ಲ. ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕರು ಈವರೆಗೆ ಮೂರ್‍ನಾಲ್ಕು ಬಾರಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಯಾಗಿ ಚರ್ಚಿಸಿದ್ದಾರೆ ಎಂದು ಹಿರಿಯ ನಾಯಕರು ತಿಳಿಸಿದ್ದಾರೆ.
ದಾವೋಸ್ ಪ್ರವಾಸ ಕೈಗೊಳ್ಳುವ ಮುನ್ನ 100ಕ್ಕೆ 100 ಸಂಪುಟ ವಿಸ್ತರಿಸುವುದಾಗಿ ಹೇಳಿದ್ದ ಸಿಎಂ ಬಳಿಕ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ಸಂಪುಟ ವಿಸ್ತರಿಸಲಾಗದೆ ವಿದೇಶ ಪ್ರವಾಸಕ್ಕೆ ತೆರಳಿದರು. ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಚಿವಾ ಕಾಂಕ್ಷಿಗಳು ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿರುವುದು ಚರ್ಚೆಗೆ ಗ್ರಾಸವಾಗಿದೆ.
ಸೋತವರಿಗೆ ಸಚಿವ ಸ್ಥಾನ ಅನುಮಾನ: ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವುದಾಗಿ ಬಿಎಸ್‌ವೈ ಸೇರಿ ಹಲವು ನಾಯಕರು ಪುನರುಚ್ಚರಿಸುತ್ತಿದ್ದು, ಉಪಚುನಾವಣೆಯಲ್ಲಿ ಸೋತ ವರ ರಾಜಕೀಯ ಭವಿಷ್ಯ ಏನು ಎಂಬ ಪ್ರಶ್ನೆ ಮೂಡಿದೆ.
ದೆಹಲಿಯಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಸಂಪುಟ ವಿಸ್ತರಣೆಯಾಗಬೇಕು. ಆದರೆ, ಪುನಾರಚನೆ ಬೇಡ ಎಂಬುದು ನನ್ನ ಅನಿಸಿಕೆ. ಆದರೆ, ಪಕ್ಷ ಕೈಗೊಳ್ಳುವ ತೀರ್ಮಾನ ಅಂತಿಮ. ಅನ್ಯ ಪಕ್ಷ ತೊರೆದು ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೂ ಸಚಿವ ಸ್ಥಾನ ಸಿಗಲಿದೆ. ಪರಾಭವಗೊಂಡವರ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
ಡಿಸಿಎಂ ಆಗಿ ಮುಂದುವರಿಯೋ ವಿಶ್ವಾಸ: ಹೈಕಮಾಂಡ್ ಮುಂದೆ ಯಾವ ನಿರ್ಧಾರ ಕೈಗೊಳ್ಳುವುದೋ ಗೊತ್ತಿಲ್ಲ. ಬಹಳಷ್ಟು ಮಂದಿಗೆ ಡಿಸಿಎಂ ಆಗಬೇಕು ಎಂಬ ಬಯಕೆ ಇದೆ. ಕೆಲವರು ಉಪಮುಖ್ಯಮಂತ್ರಿ ಹುದ್ದೆ ಕೈಬಿಡುವ ಬಗ್ಗೆ ಸಹಿ ಸಂಗ್ರಹ ಮಾಡಿದ್ದಾರೆ ಎನ್ನಲಾಗಿದೆ. ಕೆಲವರು ಸಹಿ ಸಂಗ್ರಹ ಮಾಡಿಲ್ಲ ಎಂದು ಹೇಳಿದ್ದಾರೆ. ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯ ಹೇಳುವುದನ್ನು ನಾವು ಪ್ರಶ್ನಿಸಬಾರದು ಎಂದು ತಿಳಿಸಿದರು. ಸದ್ಯಕ್ಕೆ ಉಪಮುಖ್ಯಮಂತ್ರಿಯಾಗಿ ಮುಂದುವರಿಯುವ ವಿಶ್ವಾಸವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.